NEWSನಮ್ಮಜಿಲ್ಲೆಸಂಸ್ಕೃತಿ

KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದ ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯದ ಕನಸ್ಸು ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ.

ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಬೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳವಾದ ಬಾನಂದೂರಿನಿಂದ ಆದಿ ಚುಂಚನಗಿರಿಗೆ ಯಾವುದೇ ನೇರ ಬಸ್ ಸೌಕರ್ಯವಿರಲಿಲ್ಲ, ಈ ಬಗ್ಗೆ ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಈ ವೇಳೆ ಗ್ರಾಮದ ಮುಖಂಡರಾದ ಗಂಗಾಧರಯ್ಯ ಅವರು ಸಿ.ಎಂ.ಲಿಂಗಪ್ಪ ಅವರ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವರು ತಕ್ಷಣದಿಂದಲೇ ಬಸ್ ಸಂಚಾರ ಆರಂಭಿಸುವಂತೆ ಸೂಚನೆ ನೀಡಿದ್ದರು. ಆದರೆ, ಲೋಕಸಭಾ ಚುನಾವಣೆ ನೀತಿ ಸಂಹಿತೆ ಇದ್ದ ಕಾರಣ ಬಸ್ ಬಿಡಲು ವಿಳಂಬವಾಗಿತ್ತು.

ಇದೀಗ ಬಾನಂದೂರು ಗ್ರಾಮದಿಂದ ಆದಿಚುಂಚನಗಿರಿ ಮಾರ್ಗದಲ್ಲಿ ಬಸ್ ಓಡಿಸಲು ರಾಮನಗರ ವಿಭಾಗದ ಸಾರಿಗೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಅದರಂತೆ ಜೂನ್‌ 14 ರ ಶುಕ್ರವಾರದಿಂದ ಬಾನಂದೂರು-ಆದಿಚುಂಚನಗಿರಿ ಮಾರ್ಗದಲ್ಲಿ ಬಸ್ ಸಂಚಾರ ಆರಂಭವಾಗಲಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಈ ಮಾರ್ಗದ ಬಸ್ ಬೆಳಿಗ್ಗೆ 8-15 ಕ್ಕೆ ಮರಳವಾಡಿ ಬಸ್ ನಿಲ್ದಾಣದಿಂದ ಹೊರಡಲಿದ್ದು, ಹಾರೋಹಳ್ಳಿ ಬಸ್ ನಿಲ್ದಾಣ 8-30ಕ್ಕೆ, ಬಾನಂದೂರು ಗ್ರಾಮದಿಂದ 8-50ಕ್ಕೆ, ಬಿಡದಿ ಬಸ್ ನಿಲ್ದಾಣ 9-15ಕ್ಕೆ, ರಾಮನಗರ ಬಸ್ ನಿಲ್ದಾಣ 9-45ಕ್ಕೆ, ಚನ್ನಪಟ್ಟಣ ಬಸ್ ನಿಲ್ದಾಣ 10-10ಕ್ಕೆ ಹೊರಟು ಮಂಡ್ಯ, ನಾಗಮಂಗಲ ಬೆಳ್ಳೂರು ಕ್ರಾಸ್ ಮೂಲಕ ಆದಿಚುಂಚನಗಿರಿಗೆ ಮದ್ಯಾಹ್ನ 12-30ಕ್ಕೆ ತಲುಪಲಿದೆ.

ಮದ್ಯಾಹ್ನ 1-30 ಕ್ಕೆ ಆದಿಚಂಚನಗಿರಿ ಬಿಟ್ಟು ವಾಪಸ್ ಅದೇ ಮಾರ್ಗದಲ್ಲಿ ರಾಮನಗರಕ್ಕೆ4-30ಕ್ಕೆ ಬರಲಿದ್ದು, ಬಾನಂದೂರು ಗ್ರಾಮಕ್ಕೆ 5-30 ರ ಸಮಯಕ್ಕೆ ಬರಲಿದ್ದು, ಹಾರೋಹಳ್ಳಿ, ಮರಳವಾಡಿ ಗೆ ವಾಪಸ್ಸು ಆಗಲಿದೆ. ಈ ಬಸ್ ವೇಗದೂತವಾಗಿದ್ದು, ನಿಗಧಿತ ಸ್ಥಳದಲ್ಲಿ ಮಾತ್ರ ನಿಲುಗಡೆ ನೀಡಲಿದೆ.

ಅಭಿನಂದನೆ: ಜಗದ್ಗುರು ಬೈರವೈಕ್ಯ  ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ವಗ್ರಾಮ ಬಾನಂದೂರು ಗ್ರಾಮದಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ನೇರ ಬಸ್ ಸೌಲಭ್ಯ ಒದಗಿಸಲು ಕಾರಣರಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪತ್ರ ಬರೆದು ಮನವಿ ಮಾಡಿದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಬಸ್ ಬಿಡಲು ಶ್ರಮಿಸಿದ ರಾಮನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್, ವಿಭಾಗೀಯ ಸಂಚಲನಾಧಿಕಾರಿ ಶ್ರೀನಿವಾಸಮೂರ್ತಿ, ಹಾರೋಹಳ್ಳಿ ಘಟಕ ವ್ಯವಸ್ಥಾಪಕ ಸಚಿನ್ ಅವರನ್ನು ಗ್ರಾಮಸ್ಥರ ಪರವಾಗಿ ಬಾನಂದೂರು ಗ್ರಾಮದ ಮುಖಂಡ ಗಂಗಾಧರಯ್ಯ ಅಭಿನಂದಿಸಿದ್ದಾರೆ.

ಬಸ್ಸಿಗೆ ಪೂಜೆ: ಜೂ-14 ರ ಶುಕ್ರವಾರ ಬಾನಂದೂರು ಗ್ರಾಮದಲ್ಲಿ ಆದಿಚುಂಚನಗಿರಿ ಶಾಖಾಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳ ಸಮ್ಮುಖದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಲಾಗುವುದು ಎಂದು ಗಂಗಾಧರಯ್ಯ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ