ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸೇರಿದಂತೆ ಪ್ರಮುಖ ಸಾರಿಗೆ ನಿಗಮಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ನೀಡಬೇಕಾದ ಅನುದಾನ, ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರೊಂದಿಗೆ ಚರ್ಚಿಸಿದ್ದೇನೆ ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಫೆ.8) ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದೆ. ಈ ವೇಳೆ ಸಾರಿಗೆಎಗೆ ಹೆಚ್ಚಿನ ಒತ್ತು ಕೊಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.
![](https://vijayapatha.in/wp-content/uploads/2025/02/9-Feb-2025-ramalingareddi-Rlr-300x161.jpg)
ಇನ್ನು ಸಭೆಯಲ್ಲಿ ಮುಂಬರುವ ಬಜೆಟ್‌ನಲ್ಲಿ KSRTC ಸೇರಿದಂತೆ ಪ್ರಮುಖ ಸಾರಿಗೆ ನಿಗಮಗಳ ಅಭಿವೃದ್ಧಿಗೆ ನೀಡಬೇಕಾದ ಅನುದಾನ ಬಿಡುಗಡೆ ಮತ್ತು ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೂಡ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆಯ ಜಾರಿ ಸಂಬಂಧ ಸಾರಿಗೆ ಇಲಾಖೆ ಮುಂದಿರುವ ಸವಾಲುಗಳನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಇದೆಲ್ಲ ಸವಾಲುಗಳ ನಡುವೆ ಸಂಸ್ಥೆಯನ್ನು ಅಭಿವೃದ್ಧಿ ಕಡೆಗೆ ಮತ್ತು ನೌಕರರಿಗೆ ಸಿಗಬೇಕಿರುವ ವೇತನ ಸಂಬಂಧವು ಕೈಗೊಳ್ಳಬಹುದಾದ ವಿಷಯಗಳ ಚರ್ಚೆ ನಡೆಸಲಾಯಿತು.
ಸಿಎಂ ಕೂಡ ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಾರಿಗೆ ಸಂಸ್ಥೆಗಳನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುವ ಬಗ್ಗೆ ನೀಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರ ಗೋವಿಂದರಾಜು, ನಸೀರ್ ಅಹ್ಮದ್, ಸಾರಿಗೆ ಇಲಾಖೆ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
![](https://vijayapatha.in/wp-content/uploads/2024/02/QR-Code-VP-1-1-300x62.png)