NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಹಬ್ಬದ ರಜೆಗಳಂದು ಕರ್ತವ್ಯಕ್ಕೆ ಹಾಜರಾದರೆ ಡಬಲ್‌ ವೇತನ – ಮುಖ್ಯ ಕಾರ್ಮಿಕ, ಕಲ್ಯಾಣಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಸಾರ್ವತ್ರಿಕ ಮತ್ತು ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸಿದರೆ ಅವರಿಗೆ ಡಬಲ್‌ ವೇತನ ನೀಡಬೇಕು ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಜನದಟ್ಟಣೆ ಹೆಚ್ಚಿದ್ದು, ಪೀಕ್ ಸೀಸನ್ ಆಗಿರುವುದರಿಂದ ವಾಹನಗಳ ಕಾರ್ಯಾಚರಣೆಗೆ ಸಿಬ್ಬಂದಿಗಳ ಲಭ್ಯತೆಯ ಸಲುವಾಗಿ ಜನವರಿ 23 ರಿಂದ ಜೂನ್ 23ರವರೆಗೆ ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಈ ಸಾರ್ವತ್ರಿಕ/ ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಹೆಚ್ಚುವರಿ ವೇತನ (Double, Wages) ಪಾವತಿ ಮಾಡಲು ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ.

ಈ ಆದೇಶದ ಪ್ರತಿಯನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು (ಸಿ&ಜಾ) ಾವರ ಹಿರಿಯ/ ಆಪ್ತ ಕಾರ್ಯದರ್ಶಿಗಳು ಹಾಗೂ ನಿಗಮದ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಘಟಕ ಮಟ್ಟದ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಹೆಚ್ಚುವರಿ ಬಸ್‌ಗಳ ಓಡಾಟ:  ಸಾಲು-ಸಾಲು ರಜೆ, ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿನ ಸಾರ್ವಜನಿಕರು ನಮ್ಮ ಕೆಎಸ್ಆರ್‌ಟಿಸಿ ಬಸ್‌ಗಳನ್ನು ಹೆಚ್ಚಾಗಿ ಅವಲಂಬಿಸುವುದಿಂದ ಕೆಎಸ್ಆರ್‌ಟಿಸಿಯೂ ಸಹ ಜನರ ದಟ್ಟಣೆ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಿದ್ಧವಾಗಿದೆ. ಹೀಗಾಗಿ ಹಬ್ಬ ಮತ್ತಿತರ ವಿಶೇಷ ದಿನಗಳಂದು ಹಬ್ಬದ ರಜೆ ಅಥವಾ ಸಾರ್ವತ್ರಿಕ ರಜೆ ಇರುವ ಚಾಲಕರು, ನಿರ್ವಾಹಕರು ಸೇರಿದಂತೆ ಹಲವು ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡಿದೆ ಅವರಿಗೆ ಹೆಚ್ಚುವರಿ ವೇತನ ನೀಡಲಾಗುತ್ತದೆ.

ಈ ಹಿಂದೆ ಹಬ್ಬದ ರಜೆ ಅಥವಾ ಸಾರ್ವತ್ರಿಕ ರಜೆ ಇರುವ ಚಾಲಕರು, ನಿರ್ವಾಹಕರು ಡ್ಯೂಟಿಗೆ ಬಂದರೆ ಅವರಿಗೆ ಬೇರೊಂದು ದಿನ ರಜೆ ತೆಗೆದುಕೊಳ್ಳಬೇಕಿತ್ತು. ಆದರೆ, ಈ ಆದೇಶದಿಂದ ನೌಕರರಿಗೆ ಡಬ್ಬಲ್‌ ವೇತನ ಸಿಗಲಿದ್ದು, ಇದು ಖುಷಿ ನೀಡುತ್ತಿದೆ ಎಂದು ನೌಕರರು ಹಲವು ನೌಕರರು ತಿಳಿಸಿದ್ದಾರೆ.

ಇನ್ನು ಸಂಸ್ಥೆಯಲ್ಲಿ ನಿವೃತ್ತರಾಗುತ್ತಿರುವ ಚಾಲನಾ ಸಿಬ್ಬಂದಿಗಳ ಸ್ಥಳಕ್ಕೆ ಬೇರೆಯವರ ನೇಮಕ ಮಾಡಿಕೊಳ್ಳದೆ ಇರುವುದರಿಂದ ತಿಂಗಳಿಂದ ತಿಂಗಳಿಗೆ ಚಾಲನಾ ಸಿಬ್ಬಂದಿಯ ಕೊರತೆ ಹೆಚ್ಚಾಗುತ್ತಿದ್ದು ಹಲವು ರೂಟ್‌ಗಳಲ್ಲಿ  ಬಸ್‌ ಓಡಿಸುವುದಕ್ಕೆ ಘಟಕ ವ್ಯವಸ್ಥಾಪಕರು ಪರದಾಡುವಂತಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ