ಚಿಕ್ಕಮಗಳೂರು: ದಾಖಲೆಯಿಲ್ಲದೆ ಬಸ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ ಮತ್ತು ನಿರ್ವಾಹಕರನ್ನು ವಶಕ್ಕೆ ಪಡೆಯಲಾಗಿದೆ.
ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದು, ಪೊಲೀಸ್ ಸೇರಿದಂತೆ ಚುನಾವಣಾಧಿಕಾರಿಗಳು ಹದ್ದಿಕಣ್ಣಿಟ್ಟಾರೆ ಎಂಬುವುದು ಗೊತ್ತಿದ್ದರೂ ಕೂಡ ದಾಖಲೆಗಳಿಲ್ಲದೆ ಚಿನ್ನ, ಹಣ ಸಾಗಟ ಮಾಡುವುದು ಹೆಚ್ಚಾಗಿ ಕಂಡು ಬರುತ್ತಿದೆ.
ಅದರಂತೆ ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಇತರೆ ವಾಹನಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನ ಮತ್ತು 5.90 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದು ಅಲ್ಲಿಂದ ಕಡೂರಿಗೆ ತೆರಳುತ್ತಿದ್ದ KA-18 F-0824 ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಈ ವೇಳೆ ಚಾಲಕ ಪ್ರಕಾಶ್ ಮತ್ತು ನಿರ್ವಾಹಕ ರಾಜೇಂದ್ರ ಮೂರ್ತಿಯನ್ನು ವಶಕ್ಕೆ ಪಡೆದಯ ವಿಚಾರಣೆ ನಡೆಸಲಾಗುತ್ತಿದೆ.
ಬಣಕಲ್ ವ್ಯಾಪ್ತಿಯ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಒಂದು ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಮೂಡಿಗೆರೆ ತಾಲೂಕು ಗೋಣಿಬೀಡು ವ್ಯಾಪ್ತಿಯ ಚೆಕ್‌ಪೋಸ್ಟ್‌ನಲ್ಲಿ 3.62 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.