ಶಿರಾ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತುಮಕೂರು ವಿಭಾಗದ ಚಾಲಕರೊಬ್ಬರು ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.
ತುಮಕೂರು ವಿಭಾಗದ ಶಿರಾ ಘಟಕದ ಚಾಲಕ ಇರ್ಫನ್ ಪಾಷ ಎಂಬುವರೆ ಇಂದು (ಏ.29) ಬೆಳಗ್ಗೆ ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದೂ ಪ್ರಯಾಣಿಕರು ಮೊಬೈಲ್‌ನಲ್ಲಿ ಸೇರೆ ಹಿಡಿದಿದ್ದಾರೆ. ಈ ಬಸ್ 80 ಜನ ಪ್ರಯಾಣಿಕರು ಇದ್ದರು ಎಂದು ಹೇಳಲಾಗುತ್ತಿದೆ.
ಚಾಲಕ ಇರ್ಫನ್ ಪಾಷ ಮೊಬೈಲ್‌ನಲ್ಲಿ ಮಾತನಾಡುತ್ತ ಅಪಾಯಕಾರಿ ಚಾಲನೆ ಮಾಡಿರುವುದಕ್ಕೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಿಡಿಯೋವೊಂದನ್ನು ಸ್ಟಿಂಗ್ ಮಾಡಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಸ್ ಶಿರಾದಿಂದ ಹುಳಿಯಾರ್‌ಗೆ ಹೋಗುತ್ತಿತ್ತು. ಚಾಲಕ ಮೊಬೈಲ್ ಬಳಕೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಚಾರಿ ನಿಯಮ ಉಲ್ಲಂಘಿಸಿರುವ ಬಗ್ಗೆ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಈ ಹಿನ್ನೆಲೆ ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಸಂಸ್ಥೆಯ ಮೇಲಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇನ್ನು KSRTC ಬಸ್ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಚಾಲನೆ ಸಮಯದಲ್ಲಿ ಚಾಲಕ ಮೊಬೈಲ್‌ನಲ್ಲಿ ಮಾತನಾಡುವುದು, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ಚಾಲಕ ಮೊಬೈಲ್ ಬಳಸುತ್ತಾ ಚಾಲನೆ ಮಾಡಿದ್ದಾರೆ.

ಈ ರೀತಿ ಮೊಬೈಲ್ ಫೋನ್‌ನಲ್ಲಿ ಮಾತನಾಡಿಕೊಂಡು ಬಸ್ ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್‌ನಲ್ಲಿರುವ 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್‌ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.
ಚಾಲಕರನ್ನೇ ನಂಬಿ 70ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ಆರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.
Related

 










