KSRTC- ಪ್ರಾಣ ಪಣಕ್ಕಿಟ್ಟು ಪ್ರಯಾಣಿಕರ ರಕ್ಷಿಸಿದ ಚಾಲನಾ ಸಿಬ್ಬಂದಿ : ಸ್ಮಾರ್ಟ್ ಫೋನ್ ಕೊಟ್ಟು ಅಭಿನಂದಿಸಿದ ಎಂಡಿ

ಬೆಂಗಳೂರು: ಕಂಡು ಕೇಳರಿಯದ ಮಹಾ ಮಳೆಗೆ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಈ ರಕ್ಕಸ ಮಳೆಯಲ್ಲಿ ಸಾರಿಗೆ ಬಸ್ಸುಗಳನ್ನು ಚಾಲನೆ ಮಾಡುವ ದೊಡ್ಡ ಸವಾಲು ನಮ್ಮ ಚಾಲನಾ ಸಿಬ್ಬಂದಿಗಳದ್ದಾಗಿದೆ.
ಈ ನಡುವೆ ಮಳೆಯ ನೀರಿನಿಂದ ತುಂಬಿಹೋಗಿದ್ದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಿಲುಕಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕರು ತಮ್ಮ ಬಸ್‌ನಲ್ಲಿದ್ದ ಚಪ್ರಯಾಣಿಕರನ್ನು ಪ್ರಾಣ ಪಣಕ್ಕಿಟ್ಟು ರಕ್ಷಿಸಿರುವುದು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ಬಂದಿದೆ.
ಹೌದು! ಕಳೆದ ಆಗಸ್ಟ್ 29 ರಂದು ರಾಮನಗರ ಮೈಸೂರು – ಬೆಂಗಳೂರು ಹೆದ್ದಾರಿ ಅಕ್ಷರಶಃ ನೀರಿನಿಂದ ಮುಳುಗಿ ಹೋಗಿತ್ತು. ಆ ವೇಳೆ ಸಂಸ್ಥೆಯ ವಾಹನ ಸಂಖ್ಯೆ ಕೆಎ42-ಎಫ್0502 ಅನುಸೂಚಿ ಸಂಖ್ಯೆ-117 (ಉರಗಹಳ್ಳಿ – ರಾಮನಗರ) ಮಾರ್ಗದಲ್ಲಿ ಚಾಲನೆಯಲ್ಲಿದ್ದಾಗ, ರಾಮನಗರ ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್ ಬಳಿ ಬರುತ್ತಿದ್ದ ಬಸ್ ಮಳೆ ನೀರಿಗೆ ಸಿಲುಕಿ ಮುಳುಗಡೆಯಾಗಿತ್ತು. ಸ್ವಲ್ಪ ಮುಂದೆ ಅದೇ ಮಾರ್ಗದಲ್ಲಿ ಮತ್ತೊಂದು ಖಾಸಗಿ ವಾಹನ ಕೆಟ್ಟು ನಿಂತಿದ್ದರಿಂದ ಬಸ್ಸನ್ನು ಮುಂದೆ ಚಲಾಯಿಸಲು ಸಾಧ್ಯವಾಗಲೇ ಇಲ್ಲ.
ಈ ಸಂದರ್ಭದಲ್ಲಿ, ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದರೂ, ತಮಗೆ ಈಜಲು ಬಾರದಿದ್ದರೂ ಸಹ ಎದೆಗುಂದದೆ ಧೈರ್ಯದಿಂದ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಸಾರ್ವಜನಿಕರ ಸಹಾಯದೊಂದಿಗೆ ರಕ್ಷಿಸಿ ಸುರಕ್ಷಿತ ಸ್ಥಳ ಸೇರಿಸಿದರು.
ಅಂದರೆ ಆ ಸಮಯದಲ್ಲಿ ಬಸ್ ಡೋರ್ ಮೂಲಕ ಇಳಿಯಲು ಸಾಧ್ಯವಾಗಲಿಲ್ಲ. ಆದರೆ ಪ್ರಯಾಣಿಕರನ್ನು ಹೇಗಾದರೂ ಮಾಡಿ ರಕ್ಷಿಸಬೇಕು ಎಂದು ಹೊರಟ ರಾಮನಗರ ವಿಭಾಗ ರಾಮನಗರ ಘಟಕದ ಚಾಲನಾ ಸಿಬ್ಬಂದಿ ಲಿಂಗರಾಜು, (ಚಾಲಕ.ಕಂ.ನಿರ್ವಾಹಕ. ಬಿಲ್ಲೆ ಸಂಖ್ಯೆ 2621) ಹಾಗೂ ವೆಂಕಟೇಶ (ಚಾಲಕ ಕಂ ನಿರ್ವಾಹಕ ಬಿಲ್ಲೆ ಸಂಖ್ಯೆ 2863) ಹೇಗೂ ಒಂದು ಏಣಿಯನ್ನು ಹುಡುಕಿ ತಂದು ಓರ್ವ ವೃದ್ಧೆ ಸೇರಿದಂತೆ ಕೆಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಮಳೆನೀರಿನಿಂದ ರಕ್ಷಿಸಿದ್ದರು.
ಬಳಿಕ ಆ ಚಾಲನಾ ಸಿಬ್ಬಂದಿ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ನಡೆದ ಘಟನೆಯನ್ನು ವಿವರಿಸಿದರು. ಈಜು ಬಾರದ ನಾವಿಬ್ಬರೂ, ಬಸ್ಸಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಉಳಿಸಲು ಕಷ್ಟಪಟ್ಟಿದ್ದೇವೆ. ಅದೇ ರೀತಿ ಪ್ರಯಾಣಿಕರು ಕೂಡ ನಮ್ಮನ್ನು ಉಳಿಸಿದರು ಹಾಗೂ ಈ ಸಂದರ್ಭದಲ್ಲಿ ತಮ್ಮ ಮೊಬೈಲ್ ಫೋನ್‌ಗಳು ಕೂಡ ನೀರು ತುಂಬಿ ಹಾಳಾಗಿ ಹೋಗಿವೆ. ಯಾವ ಅಧಿಕಾರಿಗಳನ್ನು ಸಂರ್ಪಕಿಸಲು ಸಾಧ್ಯವಾಗದ ಪರಿಸ್ಥಿತಿ ಇತ್ತು. ನಮಗೆ ಆ ಸಮಯದಲ್ಲಿ ನಮ್ಮ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಬೇಕೆಂಬುದು ಮಾತ್ರ ಉದ್ದೇಶವಾಗಿತ್ತೆಂದು ತಿಳಿಸಿದರು.

ಆ ಮಾತನ್ನು ಕೇಳಿದ ವ್ಯವಸ್ಥಾಪಕ ನಿರ್ದೇಶಕರು ಚಾಲಕರನ್ನು ಮನತುಂಬಿ ಹಾರೈಸಿ, ತಮ್ಮ ಈ ಉತ್ಕೃಷ್ಟ ಕಾರ್ಯತತ್ಪರತೆ ಇತರರಿಗೆ ಮಾದರಿ ಹಾಗೂ ಸ್ಫೂರ್ತಿದಾಯಕವಾಗಿದೆ. ದೇವರು ತಮಗೆ ಮತ್ತು ತಮ್ಮ ಪರಿವಾರದವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.
ಈ ಸಮಯದಲ್ಲಿ ಸಿಬ್ಬಂದಿಗಳ ಮೊಬೈಲ್ ಹಾಳಾಗಿದ್ದಕ್ಕೆ , ಇಬ್ಬರಿಗೂ ಒಂದೊಂದು ಸ್ಮಾರ್ಟ್ ಮೊಬೈಲ್ ಫೋನ್ ಅನ್ನು ನಿಗಮದ ವತಿಯಿಂದ ಉಡುಗೊರೆಯಾಗಿ ನೀಡಿ, ಅವರ ಮಾನವೀಯ ನೆಲೆಯಲ್ಲಿನ ಸೇವಾ ಮನೋಭಾವವು ನಿಜಕ್ಕೂ ಅನನ್ಯ, ಅನುಕರಣೀಯವೆಂದು ಬಣ್ಣಿಸಿದರು. ಚಾಲನಾ ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಿ, ಅಭಿನಂದನಾ ಪತ್ರವನ್ನು ನೀಡಿ ಶ್ಲಾಘಿಸಿದರು.
Related


You Might Also Like
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...
“ಗಬ್ಬರ್ ಸಿಂಗ್ ತೆರಿಗೆ” ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ...
ಜಾತಿ ವ್ಯವಸ್ಥೆ ಕಾರಣಕ್ಕೆ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ: CM ಸಿದ್ದರಾಮಯ್ಯ
ಬೆಂಗಳೂರು: ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣವಾಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ ಕಾರಣಕ್ಕೆ...
ನಮ್ಮ ಸರ್ಕಾರ ವರ್ಷಕ್ಕೆ 65 ಸಾವಿರ ಕೋಟಿ ರೂ. ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ
ಬೆಂಗಳೂರು: ಶಿಕ್ಷಣ ನಮ್ಮ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದ...