ಹಾಸನ: ಗಾಳಿ ಮತ್ತು ಮಳೆಗೆ ತುಂಡಾಗಿ ಬಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಬಿಟಿ ಕೊಪ್ಪಲಿನಲ್ಲಿ ನಡೆದಿದೆ.
ಹಾಸನ ನಗರದ ಬಿಟಿಕೊಪ್ಪಲಿನ ನಿವಾಸಿ ನಂದೀಶ್ (41) ಅವಘಡದಿಂದ ಮೃತಪಟ್ಟ ಸಾರಿಗೆ ನೌಕರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ಅವರು ವಾಕಿಂಗ್‌ಗೆ ಹೋಗಿದ್ದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ಸಂಭವಿಸಿದ ಮೊದಲ ಅವಘಡ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆದರೆ ಅದನ್ನು ಗಮನಿಸದೆ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ನಂದೀಶ್ ಆಕಸ್ಮಿಕವಾಗಿ ತಂತಿ ತುಳಿದಿದ್ದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಡಾವಣೆ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು ಬಳಿಕ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

Deva
You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
MeghaSeptember 15, 2025