CRIMENEWSನಮ್ಮಜಿಲ್ಲೆ

ಗಾಳಿ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು KSRTC ನೌಕರ ಮೃತ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಗಾಳಿ ಮತ್ತು ಮಳೆಗೆ ತುಂಡಾಗಿ ಬಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಬಿಟಿ ಕೊಪ್ಪಲಿನಲ್ಲಿ ನಡೆದಿದೆ.

ಹಾಸನ ನಗರದ ಬಿಟಿಕೊಪ್ಪಲಿನ ನಿವಾಸಿ ನಂದೀಶ್ (41) ಅವಘಡದಿಂದ ಮೃತಪಟ್ಟ ಸಾರಿಗೆ ನೌಕರ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ಅವರು ವಾಕಿಂಗ್‌ಗೆ ಹೋಗಿದ್ದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ಸಂಭವಿಸಿದ ಮೊದಲ ಅವಘಡ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆದರೆ ಅದನ್ನು ಗಮನಿಸದೆ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ನಂದೀಶ್ ಆಕಸ್ಮಿಕವಾಗಿ ತಂತಿ ತುಳಿದಿದ್ದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಡಾವಣೆ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು ಬಳಿಕ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...