Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಮುಷ್ಕರಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಡ ಹಾಕುವ ಸಂಬಂಧ ಶುಕ್ರವಾರ ಆರು ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಗಾಂಧಿನಗರದ ಸಿಐಟಿಯು ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಅನಂತ್ ಸುಬ್ಬರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೇಳಿ ಕೊಳ್ಳುವುದಿಷ್ಟೆ, ಈಗಾಗಲೇ ಸಾರಿಗೆ ನೌಕರರು ಮುಷ್ಕರ ಮಾಡುವ ಮನಸ್ಥಿತಿಯಲ್ಲಿದ್ದಾರೆ. ಹೀಗಾಗಿ ಆ ಮಟ್ಟಕ್ಕೆ ತಂದುಕೊಳ್ಳಬೇಡಿ.

ಇನ್ನು ಈ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದಾಗ ನಾವು ಮೂರು ದಿನ ಮುಷ್ಕರ ಮಾಡಿದ್ದೆವು. ನಂತರ ಮೂರನೇ ದಿನ ನಮ್ಮ ಬೇಡಿಕೆ ಈಡೇರಿಸಲು ಮುಂದಾಗಿದ್ದಿರಿ. ಈ ಬಾರಿ ಆ ಪರಿಸ್ಥಿತಿ ತರಬೇಡಿ ಎಂದು ಎಚ್ಚರಿಕೆ ನೀಡಿದರು.

ಈ ನಡುವೆಯೂ ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನೌಕರರಿಗೆ ಹೇಳಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್‌ ಪಡೆಯಲ್ಲ. ಇದು ಬಹಳ ಸ್ಪಷ್ಟ, ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ. ನಾವು ಈಗ ಮುಷ್ಕರದ ದಿನಾಂಕ ಘೋಷಣೆ ಮಾಡುವುದಷ್ಟೇ ಬಾಕಿ ಎಂದು ಸೂಕ್ಷ್ಮವಾಗಿ ತಿಳಿಸಿದರು.

ಇನ್ನು ನಾವು ಇಲ್ಲಿಯವರೆಗೆ ಕೊಟ್ಟಿರುವ ಮನವಿಗಳು ಸೇರಿದಂತೆ ಹಲವು ಬಾರಿ ಮೌಖಿಕವಾಗಿ ಬೇಡಿಕೆ ಇಟ್ಟಿರುವುದಕ್ಕೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನೂ ಕರ್ನಾಟಕ ಸರ್ಕಾರ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಹಣ ಬಿಡುಗಡೆ ಮಾಡಿಲ್ಲ. ಜತೆಗೆ 2024 ಜನವರಿಯಿಂದ ನೌಕರರಿಗೆ ವೇತನ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ತೀರ್ಮಾನ ಕೈಗೊಂಡಿಲ್ಲ.

ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರೂಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂಪಾಯಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇದಕ್ಕೆ ಆಸ್ಪದ ಕೊಡದೆ ನೌಕರರ ಬೇಡಿಕೆಗಳನ್ನು ಶೀಗ್ರದಲ್ಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್