KSRTC: ಜ.1ರಿಂದ 31ರವರೆಗೂ ಅಂತರ ನಿಗಮ ವರ್ಗಾವಣೆಗೆ ಆನ್ಲೈನ್ ಮೂಲಕ ನೌಕರರು ಅರ್ಜಿ ಸಲ್ಲಿಸಿ- ಸದುಪಯೋಗಪಡೆಯಿರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಈ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜ.1ರ ಬಳಗ್ಗೆ 11ಗಂಟೆಯಲ್ಲಿ ಆರಂಭವಾಗಲಿದೆ ಎಂದು KSRTC ವ್ಯವಸ್ಥಾನಳ ನಿರ್ದೇಶಕ ಅಕ್ರಮ್‌ಪಾಷ ತಿಳಿಸಿದ್ದಾರೆ.

ಈ ಸಂಬಂಧ ಇಂದು ಮೂರು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು/ ಹುಬ್ಬಳ್ಳಿ/ ಕಲಬುರಗಿಯ ಎಲ್ಲ ಇಲಾಖಾ ಮುಖ್ಯಸ್ಥರು, ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲ ಪ್ರಾಂಶುಪಾಲರು ಹಾಗೂ ಎಲ್ಲ ಕಾರ್ಯ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ.
ಇದು 2026ನೇ ಸಾಲಿನ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಅಂದರೆ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದ್ದು 31-01-2026 ರ ಸಂಜೆ 5:30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ (ಪತಿ-ಪತ್ನಿ/ ಅಂಗವಿಕಲ/ ತೀವ್ರತರಹದ ಅನಾರೋಗ್ಯ ಒಳಗೊಂಡಂತೆ) ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೀಗಾಗಿ ನೌಕರರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಚೇರಿ/ ವಿಭಾಗ/ ಘಟಕದ/ ತರಬೇತಿ ಕೇಂದ್ರ/ ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಕೋರಿದ್ದಾರೆ.
Related









