NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸೈಕಲ್‌ ಜಾಥಾ ಮೊದಲ ದಿನ ಯಶಸ್ವಿ; ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಸರ್ಕಾರ ನೀಡಿರುವ ಲಿಖಿತ ಭರವಸೆಗಳ ಈಡೇರಿಕೆಗೆ ಹಾಗೂ ನೌಕರರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಇಂದು ( ಅ.10) ರಾಜ್ಯಾದ್ಯಂತ ಸೈಕಲ್‌ಜಾಥಾಕ್ಕೆ ಚಾಲನೆ ನೀಡಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಜಾಥಾ ಆರಂಭವಾಗಿದ್ದು, ಮೊದಲ ದಿನವಾದ ಇಂದು ನೌಕರರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಈ ಜಾಥಾದಲ್ಲಿ ನೂರಾರು ನೌಕರರು ಭಾಗವಹಿಸಿದ್ದಾರೆ. ಈ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಕಳೆದ 2021ರ ಏಪ್ರಿಲ್‌ನಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿ ಮುಷ್ಕರ ನಡೆಸಲಾಯಿತು. ಆ ವೇಳೆ ಬಿಎಂಟಿಸಿ ಅಧಿಕಾರಿಗಳು ಮನಸೋ ಇಚ್ಛೆ ನೌಕರರನ್ನು ವಜಾ, ಅಮಾನತು ಮಾಡಿದರು.

ಆ ಬಳಿಕ ಅಮಾನತಾದವರನ್ನು ಬೇರೆಬೇರೆ ಘಟಕಗಳಿಗೆ ವರ್ಗಾವಣೆ ಮಾಡುವ, ಅಲ್ಲದೆ ನೌಕರರಿಂದ 4400 ರೂ.ಗಳಿಂದ ಸುಮಾರು 8 ಸಾವಿರ ರೂಪಾಯಿ ವರೆಗೂ ದಂಡದ ಹೆಸರಿನಲ್ಲಿ ವಸೂಲಿ ಮಾಡುವ ಮೂಲಕ ವಾಪಸ್‌ ಕರ್ತವ್ಯಕ್ಕೆ ನಿಯೋಜನೆ ಮಾಡಿದರು.

ತಮ್ಮ ಹಕ್ಕುಗಳಿಗೆ ಹೋರಾಟ ಮಾಡಿದ ನೌಕರರನ್ನು ವಜಾ ಮಾಡಿದ್ದು, ಆ ವಜಾವನ್ನು ರದ್ದುಗೊಳಿಸಬೇಕು. ಮಾನಸಿಕ ಹಿಂಸೆ ನೀಡುತ್ತಿರುವುದನ್ನು ತಪ್ಪಿಸಬೇಕು. ಸಾವಿರಾರು ರೂಪಾಯಿ ದಂಡ ಹಾಕಿರುವುದನ್ನು ವಾಪಸ್‌ ಕೊಡಬೇಕು. ಕಿರುಕುಳಗಳು ಡಿಪೋ ಮಟ್ಟದಲ್ಲಿ ಇನ್ನು ಹೆಚ್ಚಾಗುತ್ತಿವೆ. ಅದಕ್ಕೆ ಮೊದಲು ಕಡಿವಾಣ ಬೀಳಬೇಕು ಎಂದು ನೌಕರರು ಆಗ್ರಹಿಸಿ ಜಾಥಾ ನಡೆಸುತ್ತಿದ್ದಾರೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲೂ ಏಕಕಾಲಕ್ಕೆ ವೇತನ ಬಿಡುಗಡೆಯಾಗಬೇಕು. ಒಂದೊಂದು ನಿಗಮಗಳಲ್ಲಿ ತಮಗೆ ಇಷ್ಟ ಬಂದ ದಿನದಂದು ವೇತನ ಪಾವತಿ ಮಾಡಲಾಗುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಕೆಎಸ್‌ಆರ್‌ಟಿಸಿಯಲ್ಲಿ ಈ ತಿಂಗಳಿನಿಂದ ಅಳವಡಿಸಿಕೊಂಡಿರುವಂತೆ ಪ್ರತಿ ತಿಂಗಳ ಒಂದನೇ ತಾರೀಖಿಗೆ ವೇತನ ಎಂಬ ನಿಯಮವನ್ನು ಉಳಿದ ಮೂರು ನಿಗಮಗಳಲ್ಲೂ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಿಷ್ಟೇ ಅಲ್ಲದೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಬೃಹತ್‌ ಜಾಥಾ ನಡೆಯುತ್ತಿದ್ದು, ಸರ್ಕಾರ ಸ್ಪಂದಿಸಬೇಕು, ನಮಗೂ ಇತರರಂತೆ ಬದುಕಲು ಅವಕಾಶ ನೀಡಬೇಕು ಎಂದು ಸರ್ಕಾರದ ಗಮನ ಸೆಳೆಯಲು ಹೊರಟಿದ್ದಾರೆ.

ಇನ್ನು ಈ ಜಾಥಾದಲ್ಲಿ ಎಲ್ಲ 4ನಿಗಮಗಳ ವಜಾಗೊಂಡ ನೌಕರರು ಮತ್ತು ರಜೆ, ವಾರದ ರಜೆ ಇರುವ ನೌಕರರು ಭಾಗವಹಿಸಬೇಕು. ನಮ್ಮ ಈ ಶಾಂತಿಯುತ ಹೋರಾಟಕ್ಕೆ ಇತರ ಕನ್ನಡ ಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ