ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ80% ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ನೌಕರರ ಮಕ್ಕಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘವು ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.80 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಂಘದಲ್ಲಿ ಸದಸ್ಯತ್ವ ಪಡೆದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಿದೆ.
ಹೀಗಾಗಿ ಸಂಘದಲ್ಲಿ ಸದಸ್ಯತ್ವ ಪಡೆದಿರುವ ನಾಲ್ಕು ನಿಗಮಗಳ ನೌಕರರ ಅರ್ಹ ಮಕ್ಕಳ ಶಾಲಾ ಅಂಕಪಟ್ಟಿ, ಆಧಾರ್ ಕಾರ್ಡ್, ನೌಕರರು ಪಡೆದಿರುವ ಸಂಘದ ಸದಸ್ಯತ್ವ ಕಾರ್ಡ್ ಮತ್ತು ಸಿಬ್ಬಂದಿಯ ಗುರುತಿನ ಕಾರ್ಡ್ ನಕಲು ಪ್ರತಿಗಳ ( Xerox) ದಾಖಲಾತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ನಂ31/31 ಹೆಗ್ಗನಹಳ್ಳಿ ಮುಖ್ಯ ರಸ್ತೆ ಸಲ್ಲಾಪುರದಮ್ಮ ದೇವಸ್ಥಾನದ ಪಕ್ಕ ಸುಂಕದಕಟ್ಟೆ ಬೆಂಗಳೂರು-91 ಇಲ್ಲಿಗೆ ಕಳುಹಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ಬಿಎಂಟಿಸಿ ಅಧ್ಯಕ್ಷ ಎಸ್. ರುದ್ರೇಶ್ (ಮೊ.ನಂ: 9449501386, 7022704236) ಅವರನ್ನು ಸಂಪರ್ಕಿಸಬಹುದು.