Search By Date & Category

NEWSಆರೋಗ್ಯನಮ್ಮರಾಜ್ಯ

ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ: ತಲೆಸುತ್ತು ಬಂದು ಮತ್ತೊಬ್ಬ ಸಿಬ್ಬಂದಿ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾರಿಗೆ ನೌಕರರಲ್ಲಿ ಮತ್ತೊಬ್ಬ ಮಹಿಳಾ ಸಿಬ್ಬಂದಿ ತಲೆಸುತ್ತು ಬಂದು ಕುಸಿದು ಬಿದ್ದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗಾಗಿ ನಿನ್ನೆಯಿಂದ ಈವರೆಗೂ ಇಬ್ಬರು ಮಹಿಳಾ ಸಿಬ್ಬಂದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಸತ್ಯಾಗ್ರಹ ನಿರತ ಮಹಿಳಾ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರ ಜತೆಗಿದ್ದ ಮತ್ತೊಬ್ಬ ಮಹಿಳಾ ಸಿಬ್ಬಂದಿ ತಲೆಸುತ್ತುಬಂದು ಕೆಳೆಗೆ ಕುಸಿದು ಬಿದಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹೀಗಾಗಿ ಸತ್ಯಾಗ್ರಹ ನಿರತ ಮಹಿಳಾ ಸಿಬ್ಬಂದಿಗಳಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಸಿಬ್ಬಂದಿಯ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ತಲೆ ಸುತ್ತುಬಂದು ಕುಸಿದು ಬಿದ್ದ ಮಹಿಳಾ ಸಿಬ್ಬಂದಿಗೂ ಚಿಕಿತ್ಸೆ ಮುಂದುವರಿಸಿದ್ದು ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾವಹಿಸುತ್ತಿರುವುದಾಗಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಅಸ್ವಸ್ಥಗೊಂಡ ಮಹಿಳಾ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ. ಅವರಿಗೆ ಉಸಿರಾಟದ ತೊಂದರೆಯಾಗಿತ್ತು. ಕೂಡಲೇ ಆಮ್ಲಜನಕ (ಆಕ್ಸಿಜನ್‌) ನೀಡಲಾಗಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಇತ್ತ ಮೊನ್ನೆಯಿಂದ ಉಪವಾಸ ಕುಳಿತಿರುವ ನೌಕರರಲ್ಲಿ ಇನ್ನು ಒಂದಿಬ್ಬರು ನೌಕರರ ಆರೋಗ್ಯದಲ್ಲೂ ಏರುಪೇರಾಗುತ್ತಿದೆ ಎಂದು ಪ್ರತಿಭಟನಾ ನಿರತ ನೌಕರರು ತಿಳಿಸಿದ್ದಾರೆ.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮೀನಮೇಷ ಎಣಿಸುತ್ತಿರುವುದರಿಂದ ನೂರಾರು ಕಿಲೋ ಮೀಟರ್‌ನಲ್ಲಿ ತಮ್ಮ ಸಂಸಾರವನ್ನು ಬಿಟ್ಟು ಹೋರಾಟಕ್ಕೆ ಧುಮುಕಿರುವ ಸಿಬ್ಬಂದಿ ಪ್ರಾಣದ ಹಂಗುತೊರೆದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.

Leave a Reply

error: Content is protected !!