NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್‌ನಲ್ಲಿ ವಿಚಾರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ನಾಳೆ ಹೈ ಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಮುಂದೆ ಬರಲಿದೆ.

ನೌಕರರ ವೇತನ ಹೆಚ್ಚಳದ ಬಗ್ಗೆ ಹಾಕಿರುವ ಅರ್ಜಿ ಸಂಬಂಧದ ಪ್ರಕರಣ ಜೂನ್‌ 25ರಂದು ನಡೆದಿದ್ದು, ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ಯಾವುದಾದರೂ ನೌಕರರ ಪರ ಸಂಘಟನೆಗಳು ಸಂಸ್ಥೆಯ ಎಂಡಿ ಅವರಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಲು ಕೇಳಿ ಜುಲೈ 2ಕ್ಕೆ ನ್ಯಾಯಪೀಠ ಮುಂದೂಡಿದೆ.

ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 17ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್‌ 10ರಂದು ಹೈ ಕೋರ್ಟ್‌ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ತಾರತಮ್ಯತೆಯಿಂದ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ನೌಕರರು ತಮ್ಮ ವೇತನ ಸೌಲಭ್ಯ ಪಡೆಯಲೂ ಇನ್ನೂ ಸಾಧ್ಯವಾಗಿಲ್ಲ.

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು