NEWSನಮ್ಮಜಿಲ್ಲೆನಮ್ಮರಾಜ್ಯ

ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ 29ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದ್ದು, ಅಷ್ಟರೊಳಗೆ ತಾವು ನೌಕರರ ಬೇಡಿಕೆ ಈಡೇರಿಸಬೇಕು ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರಿಗೆ ಮನವಿ ಸಲ್ಲಿಸಲಾಗಿದೆ.

ಇಂದು ಶಾಂತಿನಗರದಲ್ಲಿರುವ ಎಂಡಿ ಅವರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು ಸರಿಸುಮಾರು 1.15 (ಒಂದು ಲಕ್ಷ ಹದಿನೈದು ಸಾವಿರ) ನೌಕರರು ಕರ್ತವ್ಯ ನಿರ್ವಾಹಿಸುತ್ತಿದ್ದಾರೆ. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದ್ದರು ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೊಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದೇವೆ.

ನಾವು ಕಾಯ-ವಚಾ-ಮನಸ್ಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಒಲಿದು ಬಂದಿರುವುದು. ಈ ನಡುವೆ ಕಳೆದ 40 ವರ್ಷಗಳಿಂದ ನಡೆಯುತ್ತಿರುವ ಅವೈಜ್ಞಾನಿಕ ವೇತನ ಪರಿಷ್ಕರಣೆಯಿಂದ ಬೇಸತ ಸಾರಿಗೆ ನೌಕರರು ಸಮಾನ ಕೆಲಸಕ್ಕೆ, ಸಮಾನ ವೇತನ ಮತ್ತು ಸೌಲಭ್ಯಗಳಿಗಾಗಿ ಹಿಂದಿನ ಸರ್ಕಾರದ ಅವಧಿಯಲ್ಲಿ ಹೋರಾಟ ಮಾಡಿದ ಸಂಧರ್ಭದಲ್ಲಿ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸುವ ಬದಲು ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಉಪಯೋಗಿಸುವಂತೆ ಸಾವಿರಾರು ನೌಕರರನ್ನು ವಜಾ, ವರ್ಗಾವಣೆ ಮತ್ತು ಅಮಾನತು ಮಾಡಿ ಹೋರಾಟವನ್ನು ಹತ್ತಿಕ್ಕಲಾಯಿತು.

ಅದರೂ ನೌಕರರು ಎದೆಗುಂದದೆ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು ಹಿಂದಿನ ಸರ್ಕಾರದ ಅಧಿಕಾರಾವಧಿ ಮುಗಿದ ತಕ್ಷಣ ಕಾಂಗ್ರೆಸ್ ಪಕ್ಷ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ಇರುವ ಸರಿಸಮಾನ ವೇತನ ಮತ್ತು ಸೌಲಭ್ಯಗಳನ್ನು ನೀಡುವ ಭರವಸೆಯನ್ನು ನೀಡಿದ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನೌಕರರು ಶ್ರಮಿಸಿದ ಪರಿಣಾಮ ಪಕ್ಷ ಅಧಿಕಾರಕ್ಕೆ ಬಂದಿದೆ. ಆಗ ನಾವು ಪಟ್ಟ ಖುಷಿಗೆ ಮೀತಿಯೆ ಇರಲಿಲ್ಲ. ಆದರೆ ಸರ್ಕಾರ ಸಾರಿಗೆ ನೌಕರರಿಗೆ ನೀಡಿರುವ ಭರವಸೆಗಳನ್ನು ಮಾತ್ರ ಇನ್ನೂ ಈಡೇರಿಸಿಲ್ಲ.

ಸರ್ಕಾರ 5 ಗ್ಯಾರಂಟಿಗಳಲ್ಲಿ ಒಂದಾಂದ ಶಕ್ತಿ ಯೋಜನೆಯನ್ನು ಜಾರಿಗೆ ತರುವ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಬಸ್ಸುಗಳ ಮತ್ತು ನೌಕರರ ಕೊರತೆ ಇದ್ದರೂ ಸಾರಿಗೆ ನೌಕರರು ಕಷ್ಟ ಪಟ್ಟು ದುಡಿದ ಪರಿಣಾಮ ಈ ದಿನ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಯೋಜನೆ ಎಂದರೆ ಶಕ್ತಿ ಯೋಜನೆ. ಇತ್ತೀಚೆಗೆ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ದಾಖಲೆಯು ಸಹ ನಿರ್ಮಾಣವಾಗಿದೆ.

ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳು ಕಳೆದಿದ್ದು ಇದುವರೆಗೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಸಾರಿಗೆ ಸಚಿವರ ಮತ್ತು ವ್ಯವಸ್ಥಾಪಕ ನಿರ್ದೇಶಕರ ಹಾಗೂ ಮುಖ್ಯ ಮಂತ್ರಿಗಳು ನೇತೃತ್ವದ ಹಲವು ಸಭೆಗಳು ಮುಗಿದಿದೆ ಹೊರತು (04/07/2025 ರಂದು ನಡೆದ ಸಭೆ ಅಪೂರ್ಣವಾಗಿ ಮುಕ್ತಾಯವಾಗಿದೆ.) ನ್ಯಾಯಯುತ ಬೇಡಿಕೆಗಳು ಮಾತ್ರ ಈಡೇರಿಲ್ಲ. ಇದರಿಂದ ಸಾರಿಗೆ ನೌಕರರು ತಮ್ಮ ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಈ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ, ಈ ಬೇಡಿಕೆಗಳ ಈಡೇರಿಕೆಗಾಗಿ ಇದೇ ಜುಲೈ 29ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಅನಿರ್ದಿಷ್ಟಾವಧಿ ಉಪಾವಸ ಸತ್ಯಾಗ್ರಹ ಹಮ್ಮಿಕೋಳ್ಳುತ್ತಿದ್ದೇವೆ. ಹೀಗಾಗಿ ಈ ಹೋರಾಟ ಮಾಡುವುದು ಬೇಡ ಎಂದರೆ ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಯಿಸಿದ್ದಾರೆ.

ಪ್ರಮುಖ ಬೇಡಿಕೆಗಳು: 1) ಸರ್ಕಾರ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಘೋಷಣೆ ಮಾಡಬೇಕು.

2) 01/01/2020ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಆ 38 ತಿಂಗಳ ಪರಿಷ್ಕರಣೆಯ ಹಿಂಬಾಕಿಯನ್ನು ನೀಡುವುದು. (ನಿವೃತ್ತ ನೌಕರರಿಗೆ ಮೊದಲ ಆದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು).

3) ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆ ಪ್ರಶ್ನೆ ಈಡೇರಿಸಲು ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಈ ಕೂಡಲೆ ಘೋಷಿಸುವುದು.

4) 2020 ಮತ್ತು 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಆಗಿರುವ ವಜಾ ಪ್ರಕರಣಗಳಲ್ಲಿ ಶಿಕ್ಷಾದೇಶಗಳನ್ನು ರದ್ದುಪಡಿಸಿ ಸೌಹರ್ದ ರೀತಿಯಲ್ಲಿ ಇತ್ಯರ್ಥ ಪಡಿಸುವುದು ಮತ್ತು ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ನೀಡಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!