NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಸಂಘಟನೆಗಳ ಒಕ್ಕೂಟ ಸೇರಿದ ವಿಕಲಚೇತನ ನೌಕರರ ಸಂಘ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿಕಲಚೇತನ ನೌಕರರ ಸಂಘಕ್ಕೂ ಸದಸ್ಯ ಸಂಘಟನೆಯಾಗಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಜೀವನ್ ಮಾರ್ಟಿಸ್ ಕೋರಿದ್ದಾರೆ.

ಈ ಸಂಬಂಧ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದಲ್ಲಿ ಸದಸ್ಯ ಸಂಘಟನೆಯಾಗಿ ಸೇರ್ಪಡೆ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಅವರಿಗೆ ಜೀವನ್ ಮಾರ್ಟಸ್ ಲಿಖಿತವಾಗಿ ವಿನಂತಿ ಮಾಡಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟ ಪ್ರಮಾಣಿಕವಾಗಿ ಹಲವು ತಿಂಗಳುಗಳಿಂದ ಶಾಂತಿಯುತ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದೆ.

ಇದನ್ನು ನಮ್ಮ ಸಂಘಟನೆಯ ಪಾಧಿಕಾರಿಗಳು ಹಾಗೂ ಸದಸ್ಯರು ನೋಡಿದ್ದು, ಹೀಗಾಗಿ ನಾವು ಸಹ ಈ ಸಂಸ್ಥೆಯ ನೌಕರರಾಗಿರುವುದರಿಂದ ನಮ್ಮ ನಾಲ್ಕು ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ತಮ್ಮ ಒಕ್ಕೂಟದಲ್ಲಿ ಸೇರಲು ನಮ್ಮ ಸಂಘದ ಎಲ್ಲ ಪದಾಧಿಕಾರಿಗಳ ಬಳಿ ಚರ್ಚೆ ಮಾಡಿ ಎಲ್ಲರೂ ಸಹ ನಿಮ್ಮ ಒಕ್ಕೂಟದ ಜತೆ ಸೇರಲು ಸಹಮತ ವ್ಯಕ್ತಪಡಿಸಿದ್ದಾರೆ.

ಆದರಿಂದ ಇನ್ನು ಮುಂದೆ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒಕ್ಕೂಟವು ಮಾಡುವ ಎಲ್ಲ ರೀತಿಯ ಹೋರಾಟಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿಕಲಚೇತನ ನೌಕರರ ಸಂಘ ಸಕ್ರಿಯವಾಗಿ ಪಾಲ್ಗೊಳ್ಳಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ