
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತ್ತಿತ್ತು, ಇಂದು ವಾರ್ಡ್‌ಗೆ ಶಿಫ್ಟ್ ಮಾಡಿದ್ದು, ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯ ಯಾವುದೇ ಪ್ರಾಣಾಪಾಯವಿಲ್ಲ. ನಾಳೆ ತನಕ ನೋಡಿಕೊಂಡು ಮುಂದೆ ಆಂಜಿಯೋ ಅಥವಾ ಶಸ್ತ್ರಚಿಕಿತ್ಸೆ ಮಾಡಬೇಕಾ ಇಲ್ಲ ಔಷಧಗಳಿಂದಲೇ ಬ್ಲಾಕ್‌ಆಗಿರುವುದನ್ನು ಕರಗಿಸಬಹುದ ಎಂಬುವುದರ ಬಗ್ಗೆ ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಕೂಟದ ಪದಾಧಿಕಾರಿಗಳು ಹಾಗೂ ಸಾರಿಗೆಯ ಹಲವು ನೌಕರರು ಆಸ್ಪತ್ರೆಗೆ ಹೋಗಿ ಆರೋಗ್ಯವಿಚಾರಿಸುತ್ತಿದ್ದಾರೆ.
