NEWSನಮ್ಮಜಿಲ್ಲೆನಮ್ಮರಾಜ್ಯಲೇಖನಗಳು

KSRTC ನೌಕರರ ಬೇಡಿಕೆ ಈಡೇರಿಸದಿದ್ದರೆ ಮಾ.25ರ ನಂತರ ಮುಷ್ಕರ: ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಮತ್ತು ಸರ್ಕಾರಿ ಸಾರಿಗೆ ನೌಕಕರ ಸಂಘಟನೆಗಳು ಸರ್ಕಾರಕ್ಕೆ ಬಿಸಿ ತುಪ್ಪವಾಗಲಿವೆ. ನಿನ್ನೆಯಷ್ಟೇ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಮಾ.23ರಂದು ಬಂದ್‌ಗೆ ಕರೆ ನೀಡಿತ್ತು. ಈ ನಡುವೆ ಇಂದು ಸರ್ಕಾರಿ ಸಾರಿಗೆ ನೌಕರರು ಕೂಡಾ ಬಂದ್‌ ಮಾಡಲು ಪ್ಲಾನ್‌ ಮಾಡುತ್ತಿದ್ದಾರೆ.

ಈಗಾಗಲೇ ಕರ್ನಾಟಕದಲ್ಲಿ ಇದೀಗ ಬಂದ್‌ ಸುದ್ದಿಗಳೇ ಕೇಳಿ ಬರುತ್ತಿದ್ದು,  ಈ ಮಧ್ಯೆ ರಾಜ್ಯ ಸರ್ಕಾರಕ್ಕೂ ಕೂಡ  ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ  ಬಂದ್‌ ಬಿಸಿ ತಟ್ಟಿಸಲು ಮುಂದಾಗಿದೆ.

ಇದೆಲ್ಲವನ್ನು ಗಮನಿಸಿದರೆ ರಾಜ್ಯ ಸರ್ಕಾರಕ್ಕೆ ಡಬಲ್‌ ಶಾಕ್ ಆಗಲಿದ್ದು, ಅತ್ತ ಖಾಸಗಿ ನೌಕರರು ಮಾ.5ರಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದು, ಈಡೇರಿಸದೆ ಹೋದರೆ ಕರ್ನಾಟಕ ಬಂದ್ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಇದರ ನಡುವೆ ಇಂದು ಮಾ.6ರಂದು  ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಇತ್ತ ಸಾರಿಗೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಬೇಡಿಕೆ ಈಡೇರಿಸದಿದ್ದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಒಕ್ಕೂಟಗಳು ಬಂದ್‌‌ಗೆ ಕರೆ ನೀಡುತ್ತವೆ ಎಂದು  ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಹಿನ್ನೆಲೆ ಬಸ್ ಸಂಚಾರ ಬಂದ್ ಮಾಡಲು ಸಾರಿಗೆ ನೌಕರರು ಮುಂದಾಗುತ್ತಿದ್ದಾರೆ.  ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದು, ಜತೆಗೆ ಚುನಾವಣಾ ಪ್ರಣಾಳಿಕೆಯಲ್ಲಿ ನೌಕರರಿಗೆ  ಕೊಟ್ಟ ಭರವಸೆಯಂತೆ ಸರಿ ಸಮಾನ ವೇತನ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದರ ಜತೆಗೆ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಕೊಡಬೇಕು ಎಂದು ಒತ್ತಾಯಿಸಿದ್ದು, ಒಂದು ವೇಳೆ ಈ ಅಧಿವೇಶನದಲ್ಲಿ ಘೋಷಣೆ ಮಾಡದಿದ್ದರೆ ಇದೇ ಮಾ.25ರಂದು ಉಗ್ರ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ನಾಳೆ ಬಜೆಟ್‌ನಲ್ಲಿ ಘೋಷಣೆ ಮಾಡದಿದ್ದರೆ ಮಧ್ಯೆ ಮಧ್ಯೆಯೇ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಇದಾದ ಬಳಿಕ ಮಾ.25ರಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ