KSRTC: ತಿ.ನರಸೀಪುರ – ಮಳವಳ್ಳಿ ನಡುವೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಿ- ಮೈಸೂರು ಡಿಸಿ ವೀರೇಶ್‌ಗೆ ರೈತ ಮುಖಂಡರ ಒತ್ತಾಯ

ಮೈಸೂರು: ಜಿಲ್ಲೆಯ ತಿ.ನರಸೀಪುರ – ಮಳವಳ್ಳಿ ನಡುವೆ ಹೋಗಿ ಬರಲು ಹೆಚ್ಚು ಬಸ್ಸುಗಳ ವ್ಯವಸ್ಥೆ ಮಾಡಿಕೊಡುವ ಮೂಲಕ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ನಗರದ ವಿಭಾಗೀಯ ನಿಯಂತ್ರಣಾಧಿಕಾರಿ ಅವರನ್ನು ರೈತ ಮುಖಂಡರು ಭೇಟಿ ಮಾಡಿ ಒತ್ತಾಯಿಸಿದರು.
ಇಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ. ವೀರೇಶ್ ಅವರನ್ನು ಭೇಟಿ ಮಾಡಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪದಾಧಿಕಾರಿಗಳು ಪೀಕ್ ಟೈಂನಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚಿಸುವಂತೆ ಮನವಿ ಪತ್ರ ಸಲಿಸಿದರು.
ಈ ವೇಳೆ ಮಾತನಾಡಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು ನಮ್ಮ ನೇತೃತವದಲ್ಲಿ ಸಂಘದ ಪದಾಧಿಕಾರಿಗಳ ತಂಡ ಇಂದು ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಭೇಟಿ ಮಾಡಿ ತಿ.ನರಸೀಪುರದಿಂದ ಮಳವಳ್ಳಿಗೆ ಹೋಗಿ ಬರುವ ಮಾರ್ಗ ಮಧ್ಯದ ಮುಡುಕನಪುರ ಹಾಗೂ ಅಕ್ಕ ಪಕ್ಕದ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬಾರದ ಕಾರಣ ಹೆಚ್ಚು ಬಸ್ಸುಗಳ ಸೌಕರ್ಯ ಕಲ್ಪಿಸಿ ಕೊಡುವ ಬಗ್ಗೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದರು.
ಇನ್ನು ನರಸೀಪುರ ತಾಲೂಕು ಸೋಸಲೆ ಹೋಬಳಿ ಮುಡುಕನಪುರ ಮಾರ್ಗವಾಗಿ ನರಸೀಪುರದಿಂದ ಮಳವಳ್ಳಿಗೆ ಹೋಗಿ ಬರುವ ಮಾರ್ಗ ಮಧ್ಯದ ಹಳ್ಳಿಗಳಾದ ಬೆನಕನಹಳ್ಳಿ, ಮುಸುವಿನ ಕೊಪ್ಪಲು, ಮೇಗಡಹಳ್ಳಿ, ಕೆಬ್ಬೆಹುಂಡಿ, ಕೈಯಂಬಳ್ಳಿ, ಕಾರ್ಗಳ್ಳಿ, ಕೃಷ್ಣಾಪುರ, ದೊಡ್ಡೇಬಾಗಿಲು, ದೊಡ್ಡೆಬಾಗಿಲು ಗೆಟ್, ಹಲವಾರ, ಮುಡುಕನಪುರ, ಚಿದರವಳ್ಳಿ, ಎಸ್.ದೊಡ್ಡಪುರ.
ಇವಿಷ್ಟೆ ಅಲ್ಲದೆ ಕೆಂಪನಪುರ, ರಾಮೇಗೌಡನ ಪುರ, ನೆಲ್ಲಿಗೆರೆ, ಅವ್ವೇರಹಳ್ಳಿ, ಶನೇಶ್ವರ ದೇವಸ್ಥಾನ, ವಾಡಕೆಪುರ, ಹಂಗ್ರಾಪುರ, ರಾಗಿಬೊಮ್ಮನಹಳ್ಳಿ ಹಾಗೂ ಹುಚ್ಚನ ದೊಡ್ಡಿಗೇಟ್ ಮುಂತಾದ ಹಳ್ಳಿಗಳ ಮುಖಾಂತರ ಮುಡುಕನಪುರ ಮಾರ್ಗವಾಗಿ – ನರಸೀಪುರ-ಮಳವಳ್ಳಿಗೆ ಮತ್ತು ಮಳವಳ್ಳಿಯಿಂದ ತಿ ನರಸೀಪುರಕ್ಕೆ ಹೋಗಿ ಬರುವ ಮುಡುಕನಪುರ ಗ್ರಾಮದ ಹಾಗೂ ಅಕ್ಕ ಪಕ್ಕದ ಹಳ್ಳಿಗಳ ಜನಸಾಮಾನ್ಯರಿಗೆ ಬಸ್ ಇಲ್ಲದೆ ತೊಂದರೆ ಆಗುತ್ತಿದೆ.
ಇನ್ನು ಈ ಎಲ್ಲ ಗ್ರಾಮಗಳಿಂದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಗರ್ಭಿಣಿಯರು, ರೋಗಿಗಳು, ವೃದ್ಧರು ಆಸ್ಪತ್ರೆಗೆ ಹೋಗಿ ಬರಲು ಸಮಯಕ್ಕೆ ಸರಿಯಾದ ಬಸ್ಸುಗಳ ಸಂಚಾರ ವ್ಯವಸ್ಥೆ ಇಲ್ಲದೆ ಬಸ್ಸುಗಳು ಕಡಿಮೆ ಇದ್ದು ಅವುಗಳೂ ಕೂಡ ಸಮಯಕ್ಕೆ ಸರಿಯಾಗಿ ಬಾರದೆ ಇರುವುದರಿಂದ ತುಂಬಾ ಸಮಸ್ಯೆ ಯಾಗುತ್ತಿದೆ. ಹೀಗಾಗಿ ಗರ್ಭಿಣಿಯರು, ವಯಸ್ಸಾದ ವೃದ್ದರು ಆಸ್ಪತ್ರೆಗಳಿಗೆ ಹೋಗಿ ಬರಲು ಸಹ ಹರಸಾಹಸ ಪಡುತ್ತಿದ್ದಾರೆ.

ಜತೆಗೆ ರೈತರು ತಮ್ಮ ತಮ್ಮ ಕೆಲಸ ಕಾರ್ಯಗಳಿಗೆ ಮತ್ತು ಸರ್ಕಾರಿ ಕಚೇರಿಗಳು ಹಾಗೂ ನ್ಯಾಯಾಲಯಗಳಿಗೆ ಪ್ರತಿ ದಿನ ಸಮಯಕ್ಕೆ ಹೋಗಿ ಬರಲು ಸರಿಯಾದ ಬಸ್ಸುಗಳ ವ್ಯವಸ್ಥೆ ಇಲ್ಲದ ಕಾರಣ ಸಾರಿಗೆ ಸೌಕರ್ಯದಿಂದ ವಂಚಿತರಾಗಿ ಬೇರೆ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ತಾವು ತುರ್ತಾಗಿ ಕ್ರಮ ಕೈಗೊಂಡು ಹೆಚ್ಚು ಬಸ್ಸುಗಳ ವ್ಯವಸ್ಥೆ ಮಾಡಿಸಿ ಸಮಯಕ್ಕೆ ಸರಿಯಾಗಿ ಹೋಗಿ ಬರಲು ಅನುಕೂಲ ಮಾಡಿ ಕೊಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಈ ಬಗ್ಗೆ ಪರಿಶೀಲನೆ ಮಾಡಿ ನಿಮ್ಮ ಸಮಸ್ಯೆ ನಿವಾರಿಸುವತ್ತ ಗಮನಹರಿಸುತ್ತೇವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ. ವೀರೇಶ್ ರೈತ ಮುಖಂಡರಿಗೆ ಭರವಸೆ ನೀಡಿದರು.
ಭೇಟಿ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಕಿರಗನೂರು ಶಂಕರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ತಿ.ನರಸೀಪುರ ತಾಲೂಕು ಮಹಿಳಾ ಅಧ್ಯಕ್ಷೆ ರೂಪ, ತಲಕಾಡು ಚಂದ್ರಮ್ಮ, ಮಮತಾ, ಸಂಜನಾ, ಮುಖಂಡರಾದ ಯಾಕನೂರು ರಾಜೇಶ್, ಕರೋಹಟ್ಟಿ ಉಮೇಶ್, ರಾಮಮೂರ್ತಿ ಮುಂತಾದವರು ಇದ್ದರು.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್‌ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...