ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಟೆಂಪೋ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದ ವೇಳೆ ಬಸ್ ಪಲ್ಟಿಯಾಗಿದ್ದು, KSRTC ಚಾಲಕ ಸೇರಿ 4 ಮಂದಿ ಗಂಭೀರ ಗಾಯಗೊಂಡಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮೈಸೂರು – ಮಳವಳ್ಳಿ ರಸ್ತೆ ನೀರಳ್ಳ ಬಳಿ ನಡೆದಿದೆ.
ಇಂದು ಬೆಳಗ್ಗೆ 9:30ರ ಸುಮಾರಿಗೆ ಅವಘಡ ನಡೆದಿದ್ದು, ಇದು ಮಳವಳ್ಳಿಯಿಂದ ಮೈಸೂರಿಗೆ ಬರುತ್ತಿದ್ದಾಗ ಬನ್ನೂರು ಸಮೀಪದ ನೀರಳ್ಳಿ ಬಳ್ಳಿ ಈ ಅವಘಡ ಸಂಭವಿಸಿದೆ. ಈ ಅಪಘಾತದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬನ್ನೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರಿನಿಂದ ಬನ್ನೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು ನಡುವೆ ಈ ಮುಖಾಮುಖಿ ಡಿಕ್ಕಿಯಾಗಿದೆ ಈ ವೇಳೆ ಚಾಲಕ ಅಪಘಾತ ತಪ್ಪಿಸುವ ಭರದಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40 ಹೆಚ್ಚು ಪ್ರಯಾಣಿಕರಿದ್ದು, ಹಲವರು ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related
