CRIMENEWSನಮ್ಮಜಿಲ್ಲೆ

KSRTC: ಮೈಸೂರು-ಮಳವಳ್ಳಿ ರಸ್ತೇಲಿ ಬಸ್‌ ಪಲ್ಟಿ ಚಾಲಕ ಸೇರಿ ನಾಲ್ವರಿಗೆ ಗಂಭೀರಗಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಹಾಗೂ ಟೆಂಪೋ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದ ವೇಳೆ ಬಸ್‌ ಪಲ್ಟಿಯಾಗಿದ್ದು, KSRTC ಚಾಲಕ ಸೇರಿ 4 ಮಂದಿ ಗಂಭೀರ ಗಾಯಗೊಂಡಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮೈಸೂರು – ಮಳವಳ್ಳಿ ರಸ್ತೆ ನೀರಳ್ಳ ಬಳಿ ನಡೆದಿದೆ.

ಇಂದು ಬೆಳಗ್ಗೆ 9:30ರ ಸುಮಾರಿಗೆ ಅವಘಡ ನಡೆದಿದ್ದು, ಇದು ಮಳವಳ್ಳಿಯಿಂದ ಮೈಸೂರಿಗೆ ಬರುತ್ತಿದ್ದಾಗ ಬನ್ನೂರು ಸಮೀಪದ ನೀರಳ್ಳಿ ಬಳ್ಳಿ ಈ ಅವಘಡ ಸಂಭವಿಸಿದೆ. ಈ ಅಪಘಾತದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬನ್ನೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರಿನಿಂದ ಬನ್ನೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು ನಡುವೆ ಈ ಮುಖಾಮುಖಿ ಡಿಕ್ಕಿಯಾಗಿದೆ ಈ ವೇಳೆ ಚಾಲಕ ಅಪಘಾತ ತಪ್ಪಿಸುವ ಭರದಲ್ಲಿ ಬಸ್‌ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಇನ್ನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40 ಹೆಚ್ಚು ಪ್ರಯಾಣಿಕರಿದ್ದು, ಹಲವರು ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...