NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ಬಹುದಿನದ ಬೇಡಿಕೆ ಈಡೇರಿಕೆ- ಸರ್ಕಾರಿ ನೌಕರರಂತೆ HRMS ಸೌಲಭ್ಯ

KSRTC MD ಅನ್ಬುಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೂ ಕೂಡ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲಿಯೇ ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ಇದೇ ಆಗಸ್ಟ್‌ ವೇತನ ಪಾವತಿಸಲು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲೇ ಇನ್ನು ಮುಂದೆ KSRTC ನೌಕರರಿಗೂ ಕೂಡ ವೇತನ ಪಾವತಿಸಬೇಕು. ಹೀಗಾಗಿ ಎಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ವೇತನ ಪಾವತಿಸಲು ಕೂಡಲೇ ಮುಂದಾಗಬೇಕು ಎಂದು ನಿಗಮದ ಎಂಡಿ ಅನ್ಬುಕುಮಾರ್‌ ಆದೇಶಿಸಿದ್ದಾರೆ.

ಈ ಆದೇಶದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯ ಎಲ್ಲ ನೌಕರರಿಗೆ ಆಗಸ್ಟ್ ತಿಂಗಳಿಂದ HRMS ತಂತ್ರಾಂಶದನ್ವಯ ವೇತನ ಪಾವತಿಸಲಾಗುವುದು. ಇನ್ನು ಈ ಎಚ್‌ಆರ್‌ಎಂಎಸ್ ತಂತ್ರಾಂಶದಲ್ಲಿ ದಾಖಲಾಗುವ ಹಾಜರಾತಿ ಮತ್ತು ರಜೆ ಮಂಜೂರಾತಿಯನ್ವಯ ವೇತನ ಪಾವತಿ ಕಡ್ಡಾಯವಾಗಲಿದೆ.

ಇನ್ನು HRMS ವೇತನ ಹೊರತುಪಡಿಸಿ ಬೇರೆ ಮಾದರಿಯ ವೇತನ ಬಿಲ್ಲು ತಯಾರಿಸಲು ಇನ್ನು ಮುಂದೆ ಅವಕಾಶವಿಲ್ಲ. ನೌಕರರು ಕೂಡ ಎಚ್‌ಆರ್‌ಎಂಎಸ್ ಅಡಿಯಲ್ಲೇ ಸಂಬಳ ಕೊಡುವಂತೆ 2020 ರಿಂದ ಬೇಡಿಕೆ ಇಡುತ್ತಲೇ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಹುದಿನಗಳ ನೌಕರರ ಬೆಡಿಕೆ ಸದ್ಯಕ್ಕೆ KSRTCಯಲ್ಲಿ ಮಾತ್ರ ಈಡೇರಿದ್ದು, ಇನ್ನೂ BMTC, KKRTC ಮತ್ತು NWKRTC ನಿಗಮಗಳಲ್ಲಿ ಜಾರಿಗೆ ಬರಬೇಕಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಆಗಸ್ಟ್‌ ತಿಂಗಳ ವೇತನದಿಂದಲೇ ಹೊಸ ತಂತ್ರಾಂಶದ ಮೂಲಕ ವೇತನ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದ್ದು, ಅದರಂತೆಯೇ ಮುಂದೆ ಪ್ರತಿ ತಿಂಗಳು ಸಂಸ್ಥೆಯ ಅಧಿಕಾರಿಗಳು ಮತ್ತು ನೌಕರರು ವೇತ ಪಡೆಯಲಿದ್ದಾರೆ.

ಎಚ್‌ಆರ್‌ಎಂಎಸ್ ಸೌಲಭ್ಯ: ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು. ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು.

ನೌಕರರು ಸಾಲ ಅಥವಾ ಮುಂಗಡದ ವಿವರಗಳನ್ನು ವೀಕ್ಷಿಸಬಹುದು. ನೌಕರರು ತಮ್ಮ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್ ಮುಂತಾದವುಗಳನ್ನು ನೋಡಬಹುದು.

ನೌಕರರು ತಮ್ಮ ವಿಮೆಗಳಾದ ಕೆಜಿಐಡಿ, ಜಿಪಿಎಫ್‌ ಮುಂತಾದ ವಿವರಗಳನ್ನು ಸಹ ವೀಕ್ಷಿಸಬಹುದು. ನೌಕರರ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿ (ESR) ಯಲ್ಲಿ ಅಪ್‌ಲೋಡ್ ಮಾಡಿ ಪಬ್ಲಿಷ್ ಮಾಡಿದ ಇ-ಸೇವಾ ಪುಸ್ತಕವನ್ನು ಈ ಪರದೆಯಲ್ಲಿ ನೋಡಬಹುದು.

ಆಫೀಸ್‌ಗೆ 50 ಮೀಟರ್ ಇರುವಾಗಲೇ HRMS ತಂತ್ರಾಂಶ ಸ್ವಯಂಚಾಲಿತವಾಗಿ ಲಾಗಿನ್ ಆಗಲಿದೆ. ಅಂತ್ಯೆಯೆ ಆಫೀಸ್‌ನಿಂದ ನೌಕರರು ದೂರ ಹೋಗುತ್ತಿದಂತೆ ಆಟೋಮೆಟಿಕ್ ಲಾಗ್ಔಟ್ ಆಗಲಿದೆ. ನೌಕರರು ಎಚ್‌ಆರ್‌ಎಂಎಸ್‌ನಲ್ಲಿ ಸೃಜಿಸಿದ ಟಿಕೆಟ್‌ನ ವಿವರಗಳನ್ನು ವೀಕ್ಷಿಸಬಹುದಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ