NEWSನಮ್ಮಜಿಲ್ಲೆನಮ್ಮರಾಜ್ಯ

ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ KSRTC: ಜೂ.15ರವರೆಗೂ ಉಚಿತ ಪ್ರಯಾಣಕ್ಕೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಇಂದಿನಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ಈವರೆಗೂ ರಜೆಯಲ್ಲಿದ್ದ ವಿದ್ಯಾರ್ಥಿಗಳು ಮರಳಿ ಶಾಲೆಗೆ ಹೋಗುವುದಕ್ಕೆ ಹೊಸ ಬಸ್‌ಪಾಸ್‌ ಮಾಡಿಸಿಕೊಳ್ಳಬೇಕು. ಆದರೆ, ಅದು ತಕ್ಷಣಕ್ಕೆ ಆಗುವುದಿಲ್ಲ ಹೀಗಾಗಿ ಜೂನ್‌ 15ರ ವರೆಗೂ ಹಳೆಯ ಬಸ್‌ಪಾಸ್‌ನಲ್ಲೇ ಅಥವಾ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ಶಾಲೆಗೆ ಹೋಗುವುದಕ್ಕೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದೆ.

ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಬುಧವಾರದಿಂದ ಓಪನ್‌ಆಗಿವೆ ಹೀಗಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಕ್ರಮ ಕೈಗೊಂಡು ಸುತ್ತೋಲೆಯನ್ನು ಹೊರಡಿಸಿದೆ.

ವಿದ್ಯಾರ್ಥಿಗಳ ಹಳೆಯ ಬಸ್‌ಪಾಸ್ ಅವಧಿಯನ್ನು ವಿಸ್ತರಿಸಿದ್ದು, ಜೂನ್ 15ರ ವರೆಗೂ ಕೆಎಸ್​ಆರ್​​ಟಿಸಿ ಬಸ್‌ನಲ್ಲಿ ಓಡಾಡಬಹುದು ಎಂದು ಸಂಸ್ಥೆ ಆದೇಶ ಹೊರಡಿಸಿದೆ. ಇದು ಇಂದಿನಿಂದಲೇ ಜಾರಿಗೆ ಬಂದಿದ್ದು, ಹಳೆ ಬಸ್‌ಪಾಸ್‌ ಹೊಂದಿರುವ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದೆ.

ಇದರ ಜತೆಗೆ ಹೊಸದಾಗಿ ಬೇರೆಕಡೆ ಶಾಲೆಗೆ ಸೇರಿರುವ ವಿದ್ಯಾರ್ಥಿಗಳು ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಯೂ ಪ್ರಯಾಣ ಮಾಡಬಹುದು ಎಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯ ರ್ಸತೆ ಸಾರಿಗೆ ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ ರಿಯಾಯಿತಿ ಬಸ್​​ ಪಾಸುಗಳನ್ನು ಇಡಿಸಿಎಸ್​​​ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಿಲಾಗುತ್ತಿದ್ದು, ಇಡಿಸಿಎಸ್​​ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಹೀಗಾಗಿ ವಿದ್ಯಾರ್ಥಿಗಳಿಗೆ ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸ್‌ ಪಡೆಯಲು ಕಾಲಾವಕಾಶ ನೀಡಬೇಕಿದೆ. ಜತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕೆ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?