NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೇಡಿಕೆಗೆ ಸ್ಪಂದಿಸದ ಸರ್ಕಾರ- ಅ.21ರಂದು ಸಾರಿಗೆ ನೌಕರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿದ್ದು ಈ ಎಲ್ಲ ಪ್ರಕರಣಗಳನ್ನು ವಾಪಸ್‌ಪಡೆಯದಿದ್ದರೆ ಅಕ್ಟೋಬರ್‌ 21ರಿಂದ ಮತ್ತೆ ಮುಷ್ಕರ ನಡೆಸುವುದಾಗಿ ಬಿಎಂಎಸ್‌ ಸಂಘಟನೆ ಅಧ್ಯಕ್ಷ ಪೂಂಜ ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸುವ ಕುರಿತು ಹಲವಾರು ಬಾರಿ ಸಂಬಂಧಿಸಿದ ಸಚಿವರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಬಿಎಂಎಸ್ ಸಂಘಟನೆಯೊಂದಿಗೆ ಇತರ ಸಂಘಟನೆಗಳು ಸೇರಿ ಈ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ಬಗ್ಗೆ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಡುವಂತೆ ಹಲವಾರು ಸಂಘಟನೆಗಳ ನಾಯಕರು ಹಲವಾರು ಬಾರಿ ಸರ್ಕಾರದ ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಾರಿಗೆ ಸಚಿವರ ಗಮನಕ್ಕೆ ತಂದು ಸರಿಪಡಿಸಿಕೊಡುವಂತೆ ಮನವಿ ಮಾಡಲಾಗಿದೆ. ಆದಾಗ್ಯೂ ಇದುವರೆಗೂ ಯಾವೊಬ್ಬ ನೌಕರನು ಸಮಸ್ಯೆಯಿಂದ ಹೊರ ಬರಲಾಗಿಲ್ಲ.

ಯಾವುದೇ ಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾಡಿಕೊಡುತ್ತೇವೆ ಎನ್ನುವ ಭರವಸೆ ಗಳಲ್ಲಿಯೇ ಆರೇಳು ತಿಂಗಳು ಕಳೆದು ಹೋಯಿತು. ಇನ್ನೂ ಹೀಗೆ ತಿಂಗಳುಗಟ್ಟಲೇ ಮುಂದುವರಿದರೆ ನಮ್ಮ ಹಲವಾರು ನೌಕರರ ಪರಿಸ್ಥಿತಿ ತೀರ ತಳ ಮಟ್ಟಕ್ಕೆ ತಲುಪುವುದರಲ್ಲಿ ಸಂಶಯವಿಲ್ಲ.

ಹೀಗಾಗಿ ಅ.21ರಂದು ಒಂದುದಿನದ ಪ್ರತಿಭಟನಾ ಧರಣಿ ಮಾಡಲಾಗುವುದು. ಈ ಮೂಲಕ ಸರ್ಕಾರ ಮತ್ತು ಸಾರಿಗೆ ಸಂಸ್ಥೆಯನ್ನು ಎಚ್ಚರಿಸಲಾಗುವುದು ಇದಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!