CRIMENEWSನಮ್ಮಜಿಲ್ಲೆ

KSRTC ಹಾಸನ: ಬಸ್‌ ತಡೆದು ಟಿಕೆಟ್‌ ಚೆಕಿಂಗ್‌ ಮಾಡಲು ಹೋಗುತ್ತಿದ್ದ ತನಿಖಾಧಿಕಾರಿಗೆ ಲಾರಿ ಡಿಕ್ಕಿ – ಅಧಿಕಾರಿ ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬರುತ್ತಿದ್ದ ಬಸ್‌ ತಡೆದು ಟಿಕೆಟ್‌ ಚೆಕಿಂಗ್‌ ಮಾಡಲು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟ್ಯಾಂಕರ್‌ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚೆಕಿಂಗ್‌ ಇನ್ಸ್‌ಪೆಕ್ಟರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಈ ಅವಘಡದಲ್ಲಿ ಹಾಸನ ವಿಭಾಗೀಯ ತನಿಖಾ ಸಂಚಾರ ದಳದ ತಪಾಸಣಾ ಇನ್ಸ್‌ಪೆಕ್ಟರ್ ಶಕುನಿಗೌಡ (57) ಮೃತಪಟ್ಟಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿತ್ತು. ಈ ಬಸ್ಸನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಲಾರಿ ಡಿಕ್ಕೆ ಹೊಡೆದ ತೀವ್ರತೆಗೆ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಮಾಡಿದ ಕ್ಯಾಂಟರ್ ಚಾಲಕ ವಾಹನ ಸಮೇತ ವರಾರಿಯಾಗಿದ್ದಾನೆ.

ಇತ್ತ ವಿಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಅಪಘಾತ ಮಾಡಿ ಅಧಿಕಾರಿಯ ಸಾವಿಗೆ ಕಾರಣವಾಗಿರುವ ಲಾರಿ ಮತ್ತು ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ