NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಪ್ರಕರಣ ಸೆ.24ಕ್ಕೆ ಮುಂದೂಡಿದ ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು ಹೈ ಕೋರ್ಟ್‌ ನಡೆದು, ಸೆ.24ಕ್ಕೆ ಮುಂದೂಡಿದೆ.

ಈ ಹಿಂದೆ ಸೆ.3ರಂದು ಪ್ರಕರಣದ ವಿಚಾರಣೆ ನಡೆದಿತ್ತು. ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ನೌಕರರ ಪರ ವಕೀಲರು ಐಎ ಹಾಕಿದ್ದರು. ಬಳಿಕ ಸೆ.10ಕ್ಕೆ ಮುಂದೂಡಲಾಗಿತ್ತು. ಮತ್ತೆ ಸೆ.17ಕ್ಕೆ ಅಂದರೆ ಇಂದು ವಿಚಾರಣೆ ನಡೆಯಿತು.

ಈ ವೇಳೆ ಸಂಸ್ಥೆಯ ಪರ ವಕೀಲರು ನೌಕರರ ಪರ ವಕೀಲರು ಹಾಕಿರುವ ಐಎಗೆ ಆಕ್ಷೇಪಣೆ (Objection) ಸಲ್ಲಿಸಿದ್ದಾರೆ. ಈ ನಡುವೆ ಸೆ.24ಕ್ಕೆ ಪ್ರಕರಣವನ್ನು ಮುಂದೂಡಲಾಗಿದೆ. ಹೀಗಾಗಿ ನೌಕರರ ಪರ ವಕೀಲರಾದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ನೌಕರರ ವೇತನ ಹೆಚ್ಚಳ ಸಂಬಂಧ ಶತಾಯಗತಾಯ ಕಾನೂನು ಪ್ರಕಾರ ನ್ಯಾಯದೊರಕಿಸಿಕೊಡುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಇನ್ನು ಈ ಪ್ರಕರಣ ತ್ವರಿತವಾಗಿ ಮುಗಿಯಬೇಕು ನೌಕರರಿಗೆ ನ್ಯಾಯಸಿಗಬೇಕು ಎಂದು ಕೋರ್ಟ್‌ ಕೂಡ ಬಯಸಿದ್ದು ಆ ನಿಟ್ಟಿನಲ್ಲಿ ಹತ್ತಿರ ಹತ್ತಿರದಲ್ಲೇ ಡೇಟ್‌ ಕೂಡ ಕೊಡುತ್ತಿದೆ ಎಂದು ಹೇಳಬಹುದು. ಇದನ್ನು ಗಮನಿಸಿದರೆ ಕೋರ್ಟ್‌ ಕೂಡ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸುತ್ತಿದೆ ಎನ್ನಬಹುದು. ಆದರೆ, ಕೋರ್ಟ್‌ ದಾಖಲೆಗಳ ಆಧಾರದ ಮೇಲೆ ತೀರ್ಪುಕೊಡುವುದರಿಂದ ಎಷ್ಟರಮಟ್ಟಿಗೆ ವಾದ ಪ್ರತಿವಾದ ಮಂಡನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಕರಣವೇನು?: ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು20 ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್‌ 10ರಂದು ಹೈ ಕೋರ್ಟ್‌ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ