Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆರಾಜಕೀಯ

ಖಾಸಗಿ ಟ್ರಸ್ಟ್‌ಗೆ ಕೆಎಸ್‌ಆರ್‌ಟಿಸಿ ಆಸ್ಪತ್ರೆ: ತೇಜಸ್ವಿ ಸೂರ್ಯ ವಿರುದ್ಧ ಎಎಪಿ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಕೆಎಸ್‌ಆರ್‌ಟಿಸಿ ಆಸ್ಪತ್ರೆಯನ್ನು ಖಾಸಗಿ ಟ್ರಸ್ಟ್‌ಗೆ ನೀಡುವ ಸಂಸದ ತೇಜಸ್ವಿ ಸೂರ್ಯ ನಿರ್ಧಾರಕ್ಕೆ ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮೋಹನ್‌ ದಾಸರಿ, “ಕೆಎಸ್‌ಆರ್‌ಟಿಸಿ ಕೇಂದ್ರ ವಿಭಾಗದ ಮುಖ್ಯ ಟ್ರಾಫಿಕ್‌ ಮ್ಯಾನೇಜರ್‌ ಅವರು ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡಲು 25-07-2022ರಂದು ಟೆಂಡರ್‌ಗೆ ಆಹ್ವಾನ ಪ್ರಕಟಿಸಿದ್ದಾರೆ. ಆದರೆ ಆಹ್ವಾನದ ಜಾಹೀರಾತಿನಲ್ಲಿರುವ ಹಲವು ಅಂಶಗಳು ಅನುಮಾನಾಸ್ಪದವಾಗಿವೆ ಎಂದು ಆರೋಪಿಸಿದರು.

ಚಾರಿಟಿ ಚಟುವಟಿಕೆಗಳಲ್ಲಿ ಕನಿಷ್ಠ 25 ವರ್ಷಗಳ ಅನುಭವ ಇರುವವರು ಹಾಗೂ ಚಾರಿಟಿ ಆಸ್ಪತ್ರೆಯನ್ನು ನಿಭಾಯಿಸಿದವರು ಮಾತ್ರ ಟೆಂಡರ್‌ನಲ್ಲಿ ಭಾಗವಹಿಸಲು ಯೋಗ್ಯರು ಎಂದು ಹೇಳಲಾಗಿದೆ. ಇವುಗಳನ್ನು ಗಮನಿಸಿದರೆ, ಒಂದು ನಿರ್ದಿಷ್ಟ ಟ್ರಸ್ಟ್‌ಗೆ ಟೆಂಡರ್‌ ನೀಡಲೆಂದೇ ನಾಟಕೀಯವಾಗಿ ನಿಯಮ ರೂಪಿಸಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಆಸ್ಪತ್ರೆಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಟೆಂಡರ್‌ ಆಹ್ವಾನದಲ್ಲಿ ಹೇಳಲಾಗಿದೆ. ಆಸ್ಪತ್ರೆಯ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಮೂಗು ತೂರಿಸಲು ಅವಕಾಶ ನೀಡಿ, ಅವರ ಆಪ್ತರಿಗೆ ಟೆಂಡರ್‌ ನೀಡಲೆಂದೇ ಎಂಪಿಎಲ್‌ಎಡಿ ನಿಧಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಇನ್ನು 1951ರಲ್ಲಿ ಆರಂಭವಾದ ಶ್ರೀ ವಾಸವಿ ಟ್ರಸ್ಟ್‌ ಎಂಬ ಖಾಸಗಿ ಕುಟುಂಬ ಟ್ರಸ್ಟ್‌ಗೆ ಆಸ್ಪತ್ರೆಯ ಟೆಂಡರ್‌ ನೀಡಲು ತೇಜಸ್ವಿ ಸೂರ್ಯ ಉತ್ಸುಕರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆ ವೇಳೆ ಸರ್ಕಾರಿ ಆಸ್ಪತ್ರೆಯನ್ನು ಟ್ರಸ್ಟ್‌ಗೆ ನೀಡುವುದಕ್ಕೆ ಅಲ್ಲಿನ ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದರು. ಆದರೂ ತೇಜಸ್ವಿ ಸೂರ್ಯ ಮಾತ್ರ ಇದರಿಂದ ಹಿಂದೆ ಸರಿದಿಲ್ಲ ಎಂದು ಮೋಹನ್‌ ದಾಸರಿ ಹೇಳಿದರು.

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ನೌಕರರ ಒಕ್ಕೂಟವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸೆಪ್ಟೆಂಬರ್‌ 16ರಂದು ಪತ್ರ ಬರೆದಿದ್ದು, ಈ ಕುರಿತು ಮಧ್ಯ ಪ್ರವೇಶಿಸಿ ಆಸ್ಪತ್ರೆಯು ಖಾಸಗಿಯವರ ಪಾಲಾಗುವುದನ್ನು ತಡೆಯಬೇಕೆಂದು ಮನವಿ ಮಾಡಿದ್ದಾರೆ.

ಹೀಗಾಗಿ ಸಿಎಂ ಬೊಮ್ಮಾಯಿಯವರು ಇದನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಯು ಖಾಸಗಿಯವರ ಪಾಲಾಗುವುದನ್ನು ತಪ್ಪಿಸಬೇಕು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಜತೆ ಮಾತುಕತೆ ನಡೆಸಿ ಆಸ್ಪತ್ರೆಯನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮೋಹನ್‌ ದಾಸರಿ ಆಗ್ರಹಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ