NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಸ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ವಯಸ್ಸು ತಿಳಿಯಲು ಗುರುತಿನ ಚೀಟಿ ಕಡ್ಡಾಯ

ವಿಜಯಪಥ ಸಮಗ್ರ ಸುದ್ದಿ
  • ಪೋಷಕರು ಹಾಗೂ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿಗೆ ಕಡಿವಾಣ 

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಾರಿಗೆ ಬಸ್‌ಗಳಲ್ಲಿ ಮಕ್ಕಳಿಗೆ ಆರು ವರ್ಷದ ತನಕ ಉಚಿತವಾಗಿ ಪ್ರಯಾಣಿಸಲು ನಿಗಮಗಳ ಅವಕಾಶ ಕಲ್ಪಿಸಿಕೊಟ್ಟಿದ್ದು, ಆ ಮಕ್ಕಳ ವಯಸ್ಸನ್ನು ನಿರ್ವಾಹಕರು ತಿಳಿದುಕೊಳ್ಳುವುದಕ್ಕೆ ಗುರುತಿನ ಚೀಟಿ ತೋರಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ನಿಗಮ ಆದೇಶ ಹೊರಡಿಸಿದೆ.

ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಕ್ಕಳ ವಯಸ್ಸನ್ನು ಪತ್ತೆಮಾಡಲು ಅಳತೆಗೋಲನ್ನು ಬಳಸಲಾಗುತ್ತಿತ್ತು. ಆದರೆ, ಇದು ಕೂಡಾ ಗೊಂದಲಕ್ಕೆ ಕಾರಣವಾಗಿತ್ತು. ಕೆಲವು ಐದು ವರ್ಷದ ಮಕ್ಕಳು ಕೂಡಾ 7 ವರ್ಷದವರಷ್ಟು ಬೆಳವಣಿಗೆಯಾಗಿರುವುದು ಕಂಡು ಬರುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ನಿರ್ವಾಹಕರ ನಡುವೆ ವಾಗ್ವಾದ ನಡೆಯುತ್ತಿದೆ.

ಹೀಗಾಗಿ ಈಗ ಈ ರೀತಿಯ ವ್ಯವಸ್ಥೆಯಿಂದ ಇಂತಹ ವಾಗ್ವಾದಕ್ಕೆ ಕಡಿವಾಣ ಹಾಕಲು ಸಾರಿಗೆ ನಿಗಮಗಳು ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿವೆ. ಆದ್ದರಿಂದ 6 ವರ್ಷದ ಮಕ್ಕಳನ್ನು ಬಸ್‌ನಲ್ಲಿ ಪ್ರಯಾಣ ಮಾಡಲು ಕರೆದುಕೊಂಡು ಬರುವ ಪಾಲಕರು ಆ ಮಕ್ಕಳಿಗೆ ಸಂಬಂಧಿಸಿದ ವಯಸ್ಸಿನ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ.

ಈ ಹಿಂದೆ ಸಾರಿಗೆ ನಿಗಮದಲ್ಲಿ ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ ವಯಸ್ಸಿನ ಜತೆಗೆ ಎತ್ತರವನ್ನು ಅಳತೆಗೋಲಾಗಿ ಇಟ್ಟುಕೊಳ್ಳುವಂತೆ ಆದೇಶಿಸಲಾಗಿತ್ತು. ಇದ್ದಕಾಗಿ ಬಸ್‌ಗಳಲ್ಲಿ ಈ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಕೆಲ ಮಕ್ಕಳು ತಮ್ಮ ವಯಸ್ಸಿಗೂ ಮೀರಿ ಎತ್ತರವಾಗಿ ಇರುವುದರಿಂದ ಇದು ಪೋಷಕರು ಹಾಗೂ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಇನ್ನು ಮುಂದೆ ಮಕ್ಕಳ ವಯಸ್ಸಿನ ಬಗ್ಗೆ ಅಧಿಕೃತ ದಾಖಲಾತಿಗಳನ್ನು ತೋರಿಸಿದಾಗ ಆಳತೆಗೋಲು ಉಪಯೋಗಿಸುವಂತಿಲ್ಲ. ಮಕ್ಕಳ ವಯಸ್ಸಿನ ಬಗ್ಗೆ ಪಾಲಕ/ ಪೋಷಕರು ಹಾಗೂ ನಿರ್ವಾಹಕರ ಮಧ್ಯೆ ಭಿನ್ನಾಭಿಪ್ರಾಯವಿದ್ದಲ್ಲಿ ಅಳತೆಗೋಲನ್ನು ಉಪಯೋಗಿಸಬಹುದು. ಎಲ್ಲ ಮಕ್ಕಳಿಗೆ ಆಳತೆಗೋಲು ಉಪಯೋಗಿಸುವ ಅವಶ್ಯಕತೆ ಇಲ್ಲ. ಈ ವಿಚಾರವನ್ನು ಎಲ್ಲ ಚಾಲನಾ ಸಿಬ್ಬಂದಿಗೆ ಸೂಕ್ತವಾಗಿ ತಿಳಿವಳಿಕೆ ನೀಡುವಂತೆ ಆದೇಶಿಸಲಾಗಿದೆ.

ಇನ್ನು ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಲು ನಿಗಮದ ಅಧಿಕಾರಿಗಳು ಸೂಚಿಸಿದ್ದು, ವಯಸ್ಸಿನ ಗುರುತಿನ ಚೀಟಿಗಾಗಿ ಎಲ್‌ಕೆಜಿ- ಯುಕೆಜಿ ಹಾಗೂ ಒಂದನೇ ತರಗತಿವರೆಗೆ ಕಲಿಯುತ್ತಿರುವ ಮಕ್ಕಳಿಗೆ ಶಾಲೆಯಲ್ಲಿ ಕೊಟ್ಟಿರುವ ಐಡಿ ಕಾರ್ಡ್‌, ಆಧಾರ್‌ ಕಾರ್ಡ್‌, ಜನ್ಮ ಪ್ರಮಾಣ ಪತ್ರ ಸೇರಿದಂತೆ ಇತರೆ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ.

ಒಂದು ವೇಳೆ ಈ ಯಾವುದೇ ಚೀಟಿ ತರದಿದ್ದಲ್ಲಿ ಮಗು ಆರು ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನದು ಎಂದು ನಿರ್ವಾಹಕರಿಗೆ ಅನಿಸಿದರೆ ಅವರು ಅರ್ಧ ಟಿಕೆಟ್‌ ಕೊಡುವುದಕ್ಕೆ ಪಾಲಕರು ಸಹಕರಿಸಬೇಕು ಎಂದು ತಿಳಿಸಲಾಗಿದೆ. ಹೀಗಾಗಿ 6 ವರ್ಷ ವಯಸ್ಸಿನ ಮಕ್ಕಳ ಪಾಲಕರು ಇದನ್ನು ತಪ್ಪದೆ ಪಾಲಿಸಬೇಕು ಎಂದು ಸೂಚನೆ ನೀಡಿ ನಿಗಮವು ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ