KSRTC: ಮಳವಳ್ಳಿ- ತಿ.ನರಸೀಪುರ ಮಾರ್ಗ ಬಸ್ ಸೌಲಭ್ಯ ಹೆಚ್ಚಿಸಿ- ಮಂಡ್ಯ ಸಾರಿಗೆ ಡಿಸಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯ

ಮಂಡ್ಯ: ಜಿಲ್ಲೆಯ ಮಳವಳ್ಳಿ-ತಿ.ನರಸೀಪುರ ಮಾರ್ಗ ಮಧ್ಯದ ಮುಡುಕನಪುರ ಹಾಗೂ ಅಕ್ಕ ಪಕ್ಕದ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಗಳು ಬಾರದ ಕಾರಣ ಹೆಚ್ಚು ಬಸ್ಗಳ ಸೌಕರ್ಯ ಕಲ್ಪಿಸಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂಬಂಧ ಇಂದು (ಜುಲೈ 3-2025) ಸಾರಿಗೆ ನಿಗಮದ ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜು ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ ಮುಖಂಡರು ಮೈಸೂರು ಜಿಜಿಲ್ಲೆ ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿ ಮುಡುಕನಪುರ ಮಾರ್ಗವಾಗಿ ಮಂಡ್ಯ – ಮೈಸೂರು ಎರಡು ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಮಳವಳ್ಳಿಯಿಂದ ತಿ.ನರಸೀಪುರಕ್ಕೆ ಹೋಗಿ ಬರುವ ಮಾರ್ಗ ಮಧ್ಯದ ಹಳ್ಳಿಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಿದರು.
ಈ ಮಾರ್ಗದ ಹಳ್ಳಿಗಳಾದ ಹುಚ್ಚನದೊಡ್ಡಿ ಗೇಟ್, ರಾಗಿ ಬೊಮ್ಮನಹಳ್ಳಿ, ಹಂಗರಾಪುರ, ವಡಕೆಪುರ ಶನೇಶ್ವರ ದೇವಸ್ಥಾನ, ನಲ್ಲಿಗೆರೆ, ರಾಮೇಗೌಡನಪುರ ಹಣಕೊಳ ಗೇಟ್, ಕೆಂಪನಪುರ, ಎಸ್.ದೊಡ್ಡಪುರ, ಚಿದರವಳ್ಳಿ, ಮುಡುಕನಪುರ,ಹಲವಾರ ದೊಡ್ಡಬಾಗಿಲು ಗೇಟ್, ದೊಡ್ಡಬಾಗಿಲು, ಕೃಷ್ಣಾಪುರ, ಕಾರ್ಗಳ್ಳಿ,ಕೈಯಂಬಳ್ಳಿ,
ಕೆಬ್ಬೇಹುಂಡಿ, ಮೆಗಡಹಳ್ಳಿ, ಮುಸುವಿನಕೊಪ್ಪಲು, ಬೆನಕನಹಳ್ಳಿ, ತಿ.ನರಸೀಪುರ ಈ ಮಾರ್ಗದಲ್ಲಿ ಹೋಗಿ ಬರುವ ಅಕ್ಕ ಪಕ್ಕದ ಹಳ್ಳಿಗಳ ಜನಸಾಮಾನ್ಯರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ರೋಗಿಗಳು, ವೃದ್ಧರು, ಗರ್ಭಿಣಿಯರಿಗೆ ಆಸ್ಪತ್ರೆಗಳಿಗೆ ಹೋಗಿ ಬರಲು ಅನುಕೂಲವಾಗಲಿದೆ ಎಂದು ವಿವರಿಸಿದರು.
ಇನ್ನು ರೈತರು, ಕೂಲಿ ಕಾರ್ಮಿಕರು ತಮ್ಮ ತಮ್ಮ ಕೆಲಸ ಕಾರ್ಯಗಳಿಗೆ ಪ್ರತಿ ದಿನ ಸರ್ಕಾರಿ ಕಚೇರಿಗಳು ಹಾಗೂ ನ್ಯಾಯಾಲಯಗಳಿಗೆ ಸಮಯಕ್ಕೆ ಸರಿಯಾಗಿ ಹೋಗಿ ಬರಲು ಸರಿಯಾಗಿ ಬಸ್ಸುಗಳ ವ್ಯವಸ್ಥೆ ಇಲ್ಲದ ಕಾರಣ ಪರದಾಡುವಂತಾಗಿದೆ, ಆದ್ದರಿಂದ ತಾವು ತುರ್ತಾಗಿ ಕ್ರಮ ಕೈಗೊಂಡು ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಿ ಸಮಯಕ್ಕೆ ಸರಿಯಾಗಿ ಹೋಗಿ ಬರಲು ಅನುಕೂಲ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಈ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಕಿರಗನೂರು ಶಂಕರ್, ತಿ.ನರಸೀಪುರ ತಾಲೂಕು ಮಹಿಳಾ ಅಧ್ಯಕ್ಷೆ ರೂಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಪಿ.ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ತಾಲೂಕು ಉಪಾಧ್ಯಕ್ಷ ಹೆಗ್ಗೂರು ರಂಗರಾಜು, ಕುರುಬೂರು ಶಿವಪ್ರಸಾದ್ ಇದ್ದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...