CrimeNEWSನಮ್ಮರಾಜ್ಯ

KSRTC: ಜ.1ರಿಂದ ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತ ₹10 ಲಕ್ಷಕ್ಕೆ ಏರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ಬಸ್ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ 10ಲಕ್ಷ ಪರಿಹಾರಕ್ಕೆ 1-2ರೂ. ನೀವು ಕೊಡಬೇಕು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಪಘಾತದ ಪರಿಹಾರ ಮೊತ್ತ 3 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿ ವರೆಗೆ ಹೆಚ್ಚಳ ಮಾಡಿದ್ದು, ಇದು 2024ರ ಜನವರಿ ಒಂದರಿಂದ ಜಾರಿಗೆ ಬರಲಿದೆ.

ಹೌದು! ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವಾಗ ಕೆಲವೊಮ್ಮೆ ಸಂಭವಿಸುವ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ನಿಗಮ ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ಮೊತ್ತ ಉತ್ತಮವಾಗಿದ್ದು, ಇದು ಭಾರತದ ಯಾವುದೇ ರಾಜ್ಯದ ರ್ಕಾರಿ ಬಸ್ ನಿಗಮಗಳಲ್ಲಿ ತೆಗೆದುಕೊಳ್ಳದ ದೊಡ್ಡ ನಿರ್ಧಾರದಿಂದ ಹೆಚ್ಚಿನ ಮೊತ್ತದ ಪರಿಹಾರ ಪಡೆಯಲಿದ್ದಾರೆ ಎದರೆ ತಪ್ಪಾಗಲಾರದು.

ಪ್ರಯಾಣಿಕರು ಬಸನಲ್ಲಿದ್ದಾಗ ಆಗುವ ಅಪಘಾತದಿಂದ ಸಂಭವಿಸುವ ಪ್ರಾಣ ಹಾನಿಗೆ ಈ ಪರಿಹಾರವಾಗಿ ಮೃತರ ಅವಲಂಬಿತರಿಗೆ ಈ 10 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ನೀಡಲಾಗುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳು ಅಪಘಾತಕ್ಕೀಡಾಗ, ನಿಗಮದ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಂಬಿತರಿಗೆ, ಆರ್ಥಿಕ ನೆರವು ನೀಡುವ ಸಲುವಾಗಿ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ 3ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ.

ಆದ್ರೆ ಇದೀಗ ಮುಂದುವರಿದು ಪ್ರಸ್ತುತ ಪಾವತಿಸುತ್ತಿರುವ ಪರಿಹಾರ ಮೊತ್ತ 1/3/2017ರಿಂದ ಜಾರಿಗೆ ಬಂದಿತ್ತು. ತದನಂತರ ಪರಿಹಾರದ ಮೊತ್ತದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಈ ಹಿನ್ನೆಲೆಯಲ್ಲಿ 31/10/2023ರಂದು ನಡೆದ 29ನೇ ಅಪಘಾತ ಪರಿಹಾರ ನಿಧಿ ಸಭೆಯಲ್ಲಿ ಚರ್ಚಿಸಿ, ಪರಿಹಾರ ಮೊತ್ತವನ್ನ 3 ಲಕ್ಷದಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲು ಸಭೆಯು ಅನುಮೋದನೆ ನೀಡಿದೆ.

ಪರಿಹಾರ ಮೊತ್ತದಲ್ಲಿ ಪರಿಷ್ಕರಣೆ ಮಾಡಿ ಆದೇಶ: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಒಂದಿಲ್ಲ ಒಂದು ರೀತಿಯಲ್ಲಿ ಅಪಘಾತ ಪ್ರಕರಣಗಳು ನಡಿತಾ ಇದ್ದು, ಇಂತಹ ಅಪಘಾತಗಳಲ್ಲಿ ಪ್ರಾಣ ಹಾನಿಯಾದರೆ ಮೃತರ ಕುಟುಂಬ ಆರ್ಥಿಕವಾಗಿ ಕುಗ್ಗಬಾರದು ಎಂಬ ನಿಟ್ಟಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕೆಲವೊಂದು ಪ್ರಕರಣಗಳಲ್ಲಿ ಸಾರಿಗೆ ಇಲಾಖೆಯಿಂದ ಸರಿಯಾಗಿ ಪರಿಹಾರ ದೊರಕದ ಕಾರಣ ಈ ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ಚರ್ಚಿಯನ್ನು ನಡೆಸಿ ಸಭೆ ಕರೆದು ಅಂತಿಮವಾಗಿ ನಿರ್ಣಯವನ್ನು ತೆಗೆದುಕೊಂಡಿದ್ದು, ಈ ಹಿಂದೆ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ಮೂರು ಲಕ್ಷದವರೆಗೆ ಪರಿಹಾರವನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಆ ಪರಿಹಾರದ ಮೊತ್ತದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದ್ದು, 10 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಇದೀಗ ಕೆಎಸ್ಆರ್ಟಿಸಿ ನೀಡಿದೆ.

ಇನ್ನು ಓ ಪರಿಷ್ಕೃತ ಪರಿಹಾರ ಮೊತ್ತ 10 ಲಕ್ಷ ರೂ.ಗಳಲ್ಲಿ ತಕ್ಷಣ ಪರಿಹಾರವಾಗಿ 25 ಸಾವಿ ರೂ.ಘಳನ್ನು ನಿಗಮದ ಸುತ್ತೋಲೆ 08/12/1998ರ ಅನುಸಾರ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪಾವತಿ ಮಾಡಲಿದ್ದಾರೆ. ನಂತರ, ಅಪನಿ ಟ್ರಸ್ಟ್‌ನಿಂದ 25 ಸಾವಿರ ರೂ.ಗಳನ್ನು ಸಂಬಂಧಪಟ್ಟ ವಿಭಾಗಗಳಿಗೆ ಮರುಪಾವತಿಸಿ, ಬಾಕಿ ಮೊತ್ತ 9,75,000ಗಳನ್ನು ಉಲ್ಲೇಖ ಸುತ್ತೋಲೆಯಾನುಸಾರ ದಿವಂಗತರ ಅಂದರೆ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಾವತಿಸಲಾಗುವುದು.

ಮೃತರ ಕುಟುಂಬದವರಿಗೆ ಪರಿಹಾರ ಧನವನ್ನು 10 ಲಕ್ಷಕ್ಕೆ ಹೆಚ್ಚಿಸಿರುವುದರಿಂದ ಕಾಲ ಕ್ರಮೇಣ ಅಪಘಾತ ಪರಿಹಾರ ನಿಧಿಯ ಒಟ್ಟು ಖರ್ಚು ಒಟ್ಟು ಆದಾಯಕ್ಕಿಂತ ಅಧಿಕವಾಗುವ ಹಿನ್ನೆಲೆಯಲ್ಲಿ ವಂತಿಕೆ ಸಂಗ್ರಹಣೆಯನ್ನು ಹೆಚ್ಚಿಸಲು ಸಹ ಸಭೆಯಲ್ಲಿ ನಿರ್ಣಯ ಕೈಗೊಳ್ಳಳಾಗಿದೆ. ಅದರಂತೆ ಪ್ರತಿ ಪ್ರಯಾಣಿಕರಿಂದ ಪಡೆಯಬೇಕಾದ ವಂತಿಕೆ ಸಂಗ್ರಹಣೆ ಮೊತ್ತವನ್ನ ಹೆಚ್ಚಿಸಲಾಗ್ತಿದ್ದು, ಈ ನಿಯಮ ಜ.1ರಿಂದ ಜಾರಿಗೆ ಬರಲಿದೆ.

Leave a Reply

error: Content is protected !!
LATEST
ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ