NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮಾ.1ರಿಂದ ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ವೇತನ ಸೇರಿದಂತೆ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1ರಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆ ಆಗಮಿಸಬೇಕು ಎಂದು ವೇದಿಕೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪದಾಧಿಕಾರಿಗಳು, ನಮಗೆ ಸರ್ಕಾರವೇ ಕೊಟ್ಟಿರುವ ಲಿಖಿತ ಭರವಸೆಯಂತೆ ವೇತನ ಆಯೋಗ ಮಾದರಿಯಲ್ಲಿ ವೇತನ ಹೆಚ್ಚಳ ಮಾಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಾರ್ಚ್‌ 1ರ ಬೆಳಗ್ಗೆ 10ಗಂಟೆಗೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನೌಕರರು ಮತ್ತು ಅವರ ಕುಟುಂಬದವರು ಧರಣಿಯಲ್ಲಿ ಭಾಗವಹಿಸಲಿದ್ದೇವೆ. ಒಂದು ವೇಳೆ ಸರ್ಕಾರ ಬಗ್ಗದಿದ್ದರೆ ಕರ್ತವ್ಯಕ್ಕೆ ಗೈರಾಗುವ ಬಗ್ಗೆಯೂ ನಾವೆಲ್ಲ ನೌಕರರು ಚಿಂತನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಸರ್ಕಾರ 2020ರ ಡಿಸೆಂಬರ್ ತಿಂಗಳಲ್ಲಿ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ರೂಪದಲ್ಲಿ ಭರವಸೆ ಕೊಟ್ಟು, ಮೂರು ತಿಂಗಳ ಒಳಗೆ ಈಡೇರಿಸುವುದಾಗಿ ತಿಳಿಸಿತ್ತು.

ಆದರೆ ಈ ಸರ್ಕಾರದ ಕೊನೆಯ ಬಜೆಟ್‌ನಲ್ಲೂ ನಮಗೆ ನೀಡಿದ ಲಿಖಿತ ಭರವಸೆಯನ್ನು ಈಡೇರಿಸಿಲ್ಲ. ನಾವು ಈ ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದೆವು. ಇದರಿಂದ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಭಾರಿ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ಸರ್ಕಾರ ಸಾರಿಗೆ ನೌಕರರ ಮೇಲೆ ತೋರುತ್ತಿರುವ ನಿರ್ಲಕ್ಷ್ಯತನವನ್ನು ಖಂಡಿಸಿ ಹಾಗೂ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದೇವೆ ಎಂದು ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದು, ಈವರೆಗೂ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸಿಲ್ಲ ಮತ್ತು ಸಮಸ್ಯೆಗಳನ್ನು ಸಂಪೂರ್ಣ ನಿವಾರಣೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಕೆಲವು ತಿಂಗಳ ಹಿಂದೆ ಇದೇ ಸಾರಿಗೆ ಸಚಿವ ಶ್ರೀರಾಮುಲು ಅವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನೂ ಕೂಡ 7ನೇ ವೇತನ ಆಯೋಗದಡಿ ಸೇರ್ಪಡೆ ಮಾಡುವುದು ನನ್ನ ಕಮಿಟ್‌ಮೆಂಟ್ (ಜವಾಬ್ದಾರಿ) ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಅದು ಇನ್ನು ಹೇಳಿಕೆಗಷ್ಟೇ ಸೀಮಿತವಾಗಿದೆ ಎಂದು ಹೇಳಿದರು.

ಬೇಡಿಕೆಗಳು: 1) ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ, ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ. ದಿನಾಂಕ: 06/04/2021 ರ ಯಥಾಸ್ಥಿತಿ ಕಾಪಾಡುವುದು.

2) ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡುವುದು. 3) ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸುವುದು. 4) ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೂಡಲೇ ಕೈಬಿಡುವುದು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಧರಣಿ ನಡೆಸುತ್ತಿದ್ದೇವೆ ಎಂದು ತಿಳಿಸಿರು.

ಸುದ್ದಿಗೋಷ್ಠಿಯಲ್ಲಿ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಇದ್ದರು. ಇದೇ ವೇಳೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರನ್ನು ಭೇಟಿ ಮಾಡಿ ಹೋರಾಟವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ