NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ಸಾರಿಗೆ ನೌಕರರ ಬೇಡಿಕೆ ಕುರಿತು ಚರ್ಚಿಸಲು ಕರೆದಿದ್ದ ಎಂಡಿಗಳ ಸಭೆಯಲ್ಲಿ ಹೆಚ್ಚು ಸೌಂಡ್‌ ಮಾಡಿದ ಕೂಟದ ಬೇಡಿಕೆಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳ ಕುರಿತು ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಇದೇ 5ರಂದು ನಡೆದ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತ ಎಲ್ಲ ನಿಗಮಗಳ ಎಂಡಿಗಳ ವಿಡಿಯೋ‌ ಸಂವಾದದಲ್ಲಿ ಬಹುತೇಕ ಕೂಟದ ಬೇಡಿಕೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆದಿದೆ.

ಅಂದು ಮಧ್ಯಾಹ್ನ 4ಗಂಟೆಗೆ ಆರಂಭವಾದ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಅಗತ್ಯ ಮಾಹಿತಿಯೊಂದಿಗೆ ಭಾಗವಹಿಸಿದ್ದ ಅಧಿಕಾರಿಗಳು ಸರ್ಕಾರದ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಸಾರಿಗೆ ಸಚಿವರು ಸೂಚಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಅವರ ಮನವಿಯಲ್ಲಿನ ಅಂಶಗಳು ಅಲ್ಲದೇ, ಕರಾರಸಾ ನಿಗಮವು ಸಲ್ಲಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳು ಜಂಟಿ ಕ್ರಿಯಾ ಸಮಿತಿಯ ಬೇಡಿಕೆ ಪ್ರಣಾಳಿಕೆ ಹಾಗೂ ರಾಜ್ಯ ಮಟ್ಟದ ಕೆಲವು ಸಂಘಗಳು ಒಟ್ಟಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ರಚಿಸಿ ಸಲ್ಲಿಸಿರುವ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಇಲಾಖೆಯ ಜಂಟಿ ಕಾರ್ಯದರ್ಶಿಯವರು ಸಭೆಯ ಅವಗಾಹನೆಗೆ ತಂದರು.

1) ಪ್ರಮುಖವಾಗಿ ಮುಷ್ಕರದ ಸಮುಯದಲ್ಲಿ ಮಾಡಿರುವ ನೌಕರರ ವಜಾ, ವರ್ಗಾವಣೆ ಹಾಗೂ ಇತರೆ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡಿ, ದಿನಾಂಕ: 06.04.2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು, ಮುಖ್ಯವಾಗಿ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಈ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕು ಎಂದ ಕೂಟದ ಮನವಿಯ ಬಗ್ಗೆ ಚರ್ಚೆ ನಡೆಯಿತು.

ಈ ವಿಷಯಕ್ಕೆ ಸಂಬಂಧರಂತೆ ಸಾರಿಗೆ ಸಂಸ್ಥೆವಾರು ವಜಾಗೊಂಡ ನೌಕರರ ಅಂಕಿಅಂಶಗಳ ಮಾಹಿತಿಯನ್ನು ಕಾರ್ಯದರ್ಶಿಯವರು ಪಡೆದುಕೊಂಡರು. ಕರಾರಸಾ ನಿಗಮದ ಎಂಡಿ ಅವರು ಮಾತನಾಡಿ, ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರಿಗಾದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಈ ತರಹದ ಘಟನೆಗಳು ಮರುಕಳಿಸುವುದಿಲ್ಲವೆಂದು ಯಾವುದೇ ನೌಕರರ ಸಂಘದ ಮನವಿಗಳಲ್ಲಿ ನಮೂದಾಗಿಲ್ಲ. ಹೀಗಾಗಿ ಈ ರೀತಿ ಮನವಿ ಬಂದಲ್ಲಿ ಪರಿಶೀಲಿಸಲಾಗುವುದೆಂದು ಸಭೆಯ ಗಮನಕ್ಕೆ ತಂದರು.

ಇನ್ನು ಮುಷ್ಕರದ ಸಮಯದಲ್ಲಿ ವಜಾಗೊಂಡ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರ ವಿವರವಾದ ಮಾಹಿತಿಯನ್ನು ಹಾಗೂ ಆ ನೌಕರರನ್ನು ಇದುವರೆಗೂ ಸೇವೆಗೆ ಹಿಂಪಡೆಯದಿರುವುದಕ್ಕೆ ಕಾರಣ ಏನು ಎಂದು Excel Sheetನಲ್ಲಿ ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಎಂಡಿಗಳಿಗೆ ಸೂಚನೆ ನೀಡಲಾಯಿತು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ, ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡುವುದು, ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು ಸರ್ಕಾರದ ಇತರ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿ ಅಳವಡಿಸಿಕೊಳ್ಳ ಬೇಕು ಎಂಬ ಬೇಡಿಕೆ ಬಗ್ಗೆಯೂ ಚರ್ಚೆ ನಡೆಯಿತು.

ಇನ್ನು ವೇತನ ಷ್ಕರಣೆಗೆ ಸಂಬಂಧಿಸಿದಂತೆ ಲಾಭದಲ್ಲಿರುವ ಸಾರ್ವಜನಿಕ ಉದ್ದಿಮೆಗಳು ನೌಕರರ ವೇತನ ಪರಿಷ್ಕರಣೆಗೆ ಕ್ರಮವಹಿಸುವ ಕುರಿತು ಆರ್ಥಿಕ ಇಲಾಖೆಯು ಹೊರಡಿಸಿರುವ ಸುತ್ತೋಲೆಯಂತೆ ಕ್ರಮ ವಹಿಸಬೇಕಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು. ಈ ವೇಳೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು, ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಲು ಅನುಮೋದಿಸಿದಲ್ಲಿ ಇಂಧನ ದರ ಹೆಚ್ಚಳ, ಭವಿಷ್ಯ ನಿಧಿ ಪಾವತಿ ಇತ್ಯಾದಿ ಪಾವತಿಗಳನ್ನು ಸರಿದೂಗಿಸಿಕೊಂಡು ಲಾಭದೆಡೆಗೆ ಸಂಸ್ಥೆಗಳನ್ನು ಕೊಂಡೊಯ್ಯಬಹುದಾಗಿದೆ ಎಂದು ಸಭೆಯ ಗಮನ ಸೆಳೆದರು. ಈ ಮೂಲಕ ಪ್ರಯಾಣ ದರ ಪರಿಷ್ಕರಣೆ ಬಗ್ಗೆ ಪ್ರಸ್ತಾಪಿಸಿದರು.

ಈ ವೇಳೆ ಇದನ್ನು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮಂಡಿಸುವಂತೆ ಎಂಡಿಯವರಿಗೆ ಕಾರ್ಯದರ್ಶಿಗಳು ಸೂಚಿಸಿದರು.

3. ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳ ಸಾರಿಗೆ ನೌಕರರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ದಾಖಲಿಸಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಬೇಡಿಕೆ ಸಂಬಂಧ ಮುಷ್ಕರದ ಸಮಯದ ನಾಲ್ಕು ನಿಗಮಗಳ ಸಾರಿಗೆ ನೌಕರರ ಕುಟುಂಬದ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್ ಪ್ರಕರಣಗಳ ಕುರಿತು Excel Sheetನಲ್ಲಿ ವಿವರಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

4. ಸಾರಿಗೆ ನಿಗಮಗಳಲ್ಲಿ ಕೂಡಲೇ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು (1992 ನಂತರ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿರುವುದಿಲ್ಲ) ಎಂಬ ಕೂಟದ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದಾಗ ಈ ವಿಷಯದ ಕುರಿತು ಪರಿಶೀಲಿಸುವುದಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಸಭೆಗೆ ಭರವಸೆ ನೀಡಿದರು.

5. ಹೆಚ್ಚುವರಿ ಕೆಲಸದ ಅವಧಿಗೆ ಓವರ್‌ ಟೈಂ ಭತ್ಯೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ಶಿಶುಪಾಲನ ಕೇಂದ್ರ, ಮಹಿಳಾ ನೌಕರರಿಗೆ ಸಮವಸ್ತ್ರ, ಮಹಿಳಾ ನೌಕರರಿಗೆ 8 ಗಂಟೆಗಿಂತ ಅಧಿಕ ಕೆಲಸಕ್ಕೆ ನಿಯೋಜಿಸದಿರುವುದು, ಭವಿಷ್ಯನಿಧಿ, ಪೆನ್ಶನ್ ಬದಲು ತುಟ್ಟಿಭತ್ಯೆಗೆ ಲಗತ್ತಾದ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು, ಉಪಧನ ಸುತ್ತೋಲೆ 1274ನ್ನು ರದ್ದುಗೊಳಿಸಬೇಕು ಎಂಬ ಸಂಘಟನೆಗಳ ಬೇಡಿಕೆ.

ಈ ಅಂಶಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನು ಕೂಡಲೇ ಕ್ರಮವಹಿಸುವ ಬಗ್ಗೆ ಅಧ್ಯಕ್ಷರು ತೀರ್ಮಾನ ತೆಗೆದುಕೊಂಡರು.

ಸಭೆಯು ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ವಾಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ ಎನ್., ಕಕರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಬೆಂಮಸಾ ಸಂಸ್ಥೆ ನಿರ್ದೇಶಕರು (ಭದ್ರತಾ ಮತ್ತು ಜಾಗೃತ) ಜಿ.ರಾಧಿಕಾ ಹಾಗೂ ಸಾರಿಗೆ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಸುಬ್ರಮಣ್ಯ ಕೆ.ಎಲ್. ಭಾಗವಹಿಸಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ