Please assign a menu to the primary menu location under menu

CrimeNEWSನಮ್ಮಜಿಲ್ಲೆ

KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ನಿತ್ಯ ತಾನು ಬಸ್‌ ಚಲಾಯಿಸುತ್ತಿದ್ದ ಮಾರ್ಗವನ್ನು ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದಕ್ಕೆ ಸಹೋದ್ಯೋಗಿ ನಿರ್ವಾಹಕನೆ ಕಾರಣ ಕಾರಣ ಎಂದು ನಿರ್ವಾಹಕನ ಮೇಲೆ ಮುಗಿಬಿದ್ದು ಸಾರ್ವಜನಿಕ ಸ್ಥಳದಲ್ಲಿಯೇ ಗಾಳಿಯಲ್ಲಿ ಗುಂಡು ಹಾರಿಸಿ ಕೊಲೆ ಬೆದರಿಕೆ ಹಾಕಿದ ಕೆಎಸ್ಆರ್‌ಟಿಸಿ ಚಾಲಕನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಕೆಎಸ್ಆರ್‌ಟಿಸಿ ಮಡಿಕೇರಿ ಘಟಕದ ಚಾಲಕ ವೇಣುಗೋಪಾಲ್ ಬಂಧಿತ ಆರೋಪಿ. ವೇಣುಗೋಪಾಲ್ ಮಡಿಕೇರಿಯಿಂದ ವಿರಾಜಪೇಟೆ, ಪೊನ್ನಂಪೇಟೆ ಮಾರ್ಗವಾಗಿ ಬಿರುನಾಣಿಗೆ ಮಾರ್ಗದಲ್ಲಿ ನಿತ್ಯ ಬಸ್‌ ಚಾಲನೆ ಮಾಡುತ್ತಿದ್ದ. ಈತನೊಂದಿಗೆ ರೂಪೇಶ ಕುಮಾರ್ ನಿರ್ವಾಹಕನಾಗಿದ್ದ. ಚಾಲಕ ವೇಣುಗೋಪಾಲ್ ಕೈಯಲ್ಲಿ ಮೊಬೈಲ್ ಬಳಕೆ ಮಾಡುತ್ತಲೇ ಬಸ್‌ ಚಾಲನೆ ಮಾಡುತ್ತಿದ್ದ.

ಇದನ್ನು ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಘಟಕ ವ್ಯವಸ್ಥಾಪಕರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಿರುನಾಣಿ ಮಾರ್ಗದಿಂದ ಬದಲಾಯಿಸಿ ಬೇರೆ ಮಾರ್ಗಕ್ಕೆ ಕರ್ತವ್ಯಕ್ಕೆ ವೇಣುಗೋಪಾಲ್‌ನನ್ನು ನಿಯೋಜಿಸಲಾಗಿತ್ತು. ಇದರಿಂದ ಸಿಟ್ಟಿಗೆದ್ದಿದ್ದ ವೇಣುಗೋಪಾಲ್ ನನ್ನನ್ನು ಮಾರ್ಗ ಬದಲಾವಣೆ ಮಾಡುವುದಕ್ಕೆ ನಿರ್ವಾಹಕ ರೂಪೇಶ ಕುಮಾರನೇ ಕಾರಣ ಎಂದು ಆರೋಪಿಸಿದ್ದಾನೆ.

ಅಲ್ಲದೆ ಸೋಮವಾರ ಸಂಜೆ ಘಟಕಕ್ಕೆ ಬಂದು ತನಗೆ ಜಮ್ಮಾ ಹಕ್ಕಿನಿಂದ ಬಂದಿರುವ ಕೋವಿಯನ್ನು ತಂದು ನಿನ್ನನ್ನು ಸುಮ್ಮನೇ ಬಿಡುವುದಿಲ್ಲ ಎಂದು ಗಲಾಟೆ ಮಾಡುತ್ತಾ ಘಟಕದಿಂದ ಹೊರಗೆ ಬಂದು ಗಾಳಿಯಲ್ಲಿ ಗುಂಡು ಹಾರಿಸಿ ಕೊಲೆ ಬೆದರಿಕೆ ಹಾಕಿದ್ದನು. ಇದರಿಂದ ಭಯಗೊಂಡ ನಿರ್ವಾಹಕ ರೂಪೇಶ ಕುಮಾರ್ ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಾಲಕ ವೇಣುಗೋಪಾಲನನ್ನು ಬಂಧಿಸಿದ್ದಾರೆ. ಶೂಟ್ ಮಾಡಿದ್ದ ಜಾಗಕ್ಕೆ ಮಂಗಳವಾರ ಚಾಲಕ ವೇಣುಗೋಪಾಲನನ್ನು ಕರೆದೊಯ್ದು ಮಹಜರು ನಡೆಸಿದ್ದಾರೆ. ಶೂಟ್ ಮಾಡಿದ್ದ ಸ್ಥಳದಲ್ಲಿ ಕೋವಿಯ ಕಾಟ್ರೇಜ್ ದೊರೆತ್ತಿದ್ದು ಅದನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮಾತನಾಡಿದ ದೂರುದಾರ ನಿರ್ವಾಹಕ ರೂಪೇಶ ಕುಮಾರ್ ಈ ಹಿಂದೆಯೂ ಖಾಸಗಿ ಬಸ್‌ ಚಾಲಕರೊಂದಿಗೆ ಗಲಾಟೆ ಮಾಡಿಕೊಂಡು ಅವರ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಚಾಲಕ ವೇಣುಗೋಪಾಲ್‌ನನ್ನು ಪುತ್ತೂರು ಘಟಕಕ್ಕೆ ವರ್ಗಾವಣೆ ಮಾಡಲಾಗಿತ್ತು.

ಆದಾದ ಮೇಲೆ ನನ್ನೊಂದಿಗೆ ಮಡಿಕೇರಿಯಿಂದ ಬಿರುನಾಣಿ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಹಲವು ಬಾರಿ ಹಲವೆಡೆ ಚಿಕ್ಕಪುಟ್ಟ ಅಪಘಾತಗಳನ್ನು ಎಸಗಿದ್ದರು. ಇದರಿಂದ ಸಾರ್ವಜನಿಕರು ಇವರ ವಿರುದ್ಧ ಘಟಕಕ್ಕೆ ದೂರು ನೀಡಿದ್ದರು. ಆದರೆ ಇದನ್ನೆಲ್ಲ ನಾನೇ ಮಾಡಿದ್ದೇನೆ ಎಂದು ನನ್ನ ಮೇಲೆ ಶೂಟ್ ಮಾಡಲು ಯತ್ನಿಸಿದ್ದಾರೆ. ಅದರ ಭಾಗವಾಗಿಯೇ ಸಾರ್ವಜನಿಕ ಸ್ಥಳದಲ್ಲಿಯೇ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಹೀಗಾಗಿ ಆತನ ವಿರುದ್ಧ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಸಾರಿಗೆ ನಿರ್ವಾಹಕ ರೂಪೇಶ ಕುಮಾರ್ ಮೇಲಿನ ಸಿಟ್ಟಿಗೆ ವೇಣುಗೋಪಾಲ್ ಗಾಳಿಯಲ್ಲಿ ಶೂಟ್ ಮಾಡಿದ್ದಾನೆ. ಹೀಗಾಗಿ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ತನಿಖೆ ನಡೆಸಿ ಹೆಚ್ಚಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಘಟನೆ ಸಂಬಂಧ ಕೊಡಗು ಎಸ್ಪಿ ಕೆ. ರಾಮರಾಜನ್ ಹೇಳಿದ್ದಾರೆ.

Leave a Reply

error: Content is protected !!
LATEST
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ BMTC- ಅನ್ಯ ಭಾಷೆ ಆಧಾರ್‌ಕಾರ್ಡ್‌ ವಿಳಾಸ ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಿ: ಸಿಟಿಎಂ ಆದೇಶ