ಮಡಿಕೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ಮಡಿಕೇರಿ ಘಟಕದ ಚಾಲಕ ಬೋಧಕ ಮತ್ತು ಚಾಲಕರಾಗಿದ್ದ ಪಿ.ಎಸ್.ವೈಲೇಶ ಹಾಗೂ ಚಾಲಕ ಮಹಾಬಲ ಶೆಟ್ಟಿ, ಸಂಚಾರ ನಿಯಂತ್ರಕ ಶ್ರೀನಿವಾಸ್ ಅವರು ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಿ ಬೀಳ್ಕೊಡಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪ್ರಭಾರ ವಿಭಾಗೀಯ ಸಂಚಲನಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಸ್ಥೆಯ ವತಿಯಿಂದ ಮೂವರಿಗೂ ಕನ್ನಡ ಪೇಟ, ಮಣಿ ಹಾರ ಮತ್ತು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಯಿತು.
ಈ ವೇಳೆ ಮಾತನಾಡಿದ ಘಟಕ ವ್ಯವಸ್ಥಾಕರು ಹಾಗೂ ಪ್ರಭಾರಿ ವಿಭಾಗೀಯ ಸಂಚಲನಾಧಿಕಾರಿ ವರ್ಗಾವಣೆ, ನಿವತ್ತಿ ಸರ್ಕಾರಿ ನೌಕರರಿಗೆ ಸಹಜ. 30-35 ವರ್ಷ ಚಾಲಕರಾಗಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವತ್ತಿಯಾಗುತ್ತಿರುವ ಸಿಬ್ಬಂದಿ ಮುಂದಿನ ತಮ್ಮ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಹರಸಿದರು.
ವಯಸ್ಸನ್ನು ಆಧರಿಸಿ ಸರ್ಕಾರ ನಿಗದಿಪಡಿಸಿದ ನಿಯಮದಂತೆ ನಿವೃತ್ತಿ ಆಗಲೇಬೇಕು. ಯುವಕರಿಗೆ ಜಾಗ ಮಾಡಿಕೊಡಬೇಕು. ಚಾಲಕರ ಹಾಗೂ ನಿರ್ವಾಹಕರು ಅತ್ಯಂತ ಒತ್ತಡದ ಪರಿಸ್ಥಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಘಟಕವು ಈ ಹಿಂದೆ ರಾಜ್ಯದಲ್ಲಿಯೇ ಅತ್ಯುತ್ಯಮ ಸಾರಿಗೆ ಘಟಕ ಎಂದು ಹೆಸರು ಪಡೆದಿತ್ತು. ಮತ್ತೆ ಅದನ್ನು ವಾಪಾಸ್ ಪಡೆಯಲು ಸಿಬ್ಬಂದಿಗಳಿಂದ ಪ್ರಾಮಾಣಿಕ ಸೇವೆ ಮೂಡಿ ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರು ಸಂಸ್ಥೆಯ ಚಾಲಕ ಬೋಧಕ ಹಾಗೂ ಕವಿಗಳಾದ ವೈಲೇಶ್ ಅವರು ಸೇರಿದಂತೆ ನಿವೃತ್ತರಾಗಿರುವ ಎಲ್ಲ ಜೀವನ ಸುಖಕರವಾಗಿರಲಿ ಎಂದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಮಟ್ಟದ ಮುಖಂಡ ಶ್ರೀನಿವಾಸ ಅವರ ಜತೆಗೆ ಈ ಇಬ್ಬರಿಗೂ ಸಂಸ್ಥೆಯ ಪಜಾ ಮತ್ತು ಪಪಂ. ಸಂಘದ ವಿಭಾಗೀಯ ಅಧ್ಯಕ್ಷ ಬಿ.ಎಸ್.ಕುಮಾರಸ್ವಾಮಿ ಮತ್ತು ಮಡಿಕೇರಿ ಘಟಕದ ಅಧ್ಯಕ್ಷ ರಾಮಚಂದ್ರ ಅವರ ಉಸ್ತುವಾರಿಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಾರಾಯಣ ಹೆಬ್ಬಾಳ್ ಮತ್ತು ಮಿತ್ರ ಮಂಜುಗೌಡ ವೈಲೇಶ್ ಅವರನ್ನು ಸನ್ಮಾನಿಸಿದರು. ಘಟಕ ವ್ಯವಸ್ಥಾಕರು ಹಾಗೂ ಪ್ರಭಾರಿ ವಿಭಾಗೀಯ ಸಂಚಲನಾಧಿಕಾರಿ ನಿವೃತ್ತರನ್ನು ಶ್ಲಾಘಿಸಿ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ನಾರಾಯಣ ಮೂರ್ತಿ ನಿರೂಪಿಸಿದರೆ ಮದನಕುಮಾರ್ ನಿವೃತ್ತರ ಪರಿಚಯ ಮಾಡಿಕೊಟ್ಟರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...