NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಳೆ ಸಾರಿಗೆ ನೌಕರರ ಜಂಟಿ ಸಮಿತಿಯಿಂದ ಬೃಹತ್‌ ಧರಣಿ – ಆದರೂ ಬಸ್‌ ಸಂಚಾರ ಯಥಾಸ್ಥಿತಿ

7 ವರ್ಷ ಕಳೆದ್ರೂ ಹೆಚ್ಚಳವಾಗಿಲ್ಲ ವೇತನ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಳು ವರ್ಷ ಕಳೆದ್ರೂ ಸಾರಿಗೆ ನೌಕರರ ವೇತನ ಇನ್ನೂ ಹೆಚ್ಚಳವಾಗಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ನಾಳೆ (ಜ.24)   ನಿಗಮಗಳ ಕೇಂದ್ರ ಕಚೇರಿಗಳು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗಳ ಬಳಿ ಮತ್ತು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸಾರಿಗೆ ನೌಕರರ ಜಂಟಿ ಸಮಿತಿ ಬೃಹತ್‌ ಪ್ರತಿಭಟನಾ ಧರಣಿಯನ್ನು ಒಂದುದಿನದ ಮಟ್ಟಿಗೆ ಹಮ್ಮಿಕೊಂಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದು ಸರ್ಕಾರ ಗಮನ ಸೆಳೆಯುವುದಕ್ಕೆ ಆಯೋಜಿಸಿರುವ ಒಂದು ದಿನದ ಧರಣಿಯಾಗಿದ್ದು,  ಹೀಗಾಗಿ ಬಸ್‌ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ಬೇರೆ ರೀತಿಯಲ್ಲೇ ವರದಿಗಳು ಬರುತ್ತಿದ್ದು ಅದಾವುದನ್ನು ನಂಬಬೇಡಿ ಎಂದು ಸಾರಿಗೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸರ್ಕಾರ ಕಳೆದ 7 ವರ್ಷದ ಹಿಂದೆ ಅಂದರೆ 2016ರಲ್ಲಿ ವೇತನ ಪರಿಷ್ಕರಣೆ ಮಾಡಿತ್ತು. ಆ ಬಳಿಕ ಈವರೆಗೂ ವೇತನ ಹೆಚ್ಚಳ ಮಾಡದೆ ಮೀನಮೇಷ ಎಣಿಸುತ್ತಿದೆ ಎಂದು ಕಿಡಿಕಾರಿರುವ ಜಂಟಿ ಸಮಿತಿ ಪದಾಧಿಕಾರಿಗಳು ನಾಳೆ ಸರ್ಕಾರ ವಿರುದ್ಧ ಪ್ರತಿಭಟನಾ ಧರಣಿ ಮಾಡುವುದಾಗಿ ತಿಳಿಸಿದ್ದಾರೆ.

ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ. ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್​​ನಲ್ಲಿ ಹೋರಾಟ ನಡೆಸಿ, ವೇತನ ಹೆಚ್ಚಳ ಸೇರಿ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು ಧರಣಿ ಮಾಡಲಿದ್ದಾರೆ. ನೌಕರರು 2021ರ ಏಪ್ರಿಲ್​​​ನಲ್ಲಿ 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ನಾಳಿನ ಧರಣಿ ನಡೆಯುತ್ತಿದ್ದು, ಪ್ರತಿ 4 ವರ್ಷಕ್ಕೊಮ್ಮೆ ನೌಕರರ ವೇತನ ಪರಿಷ್ಕರಣೆ ಮಾಡಬೇಕು, ಆದರೆ 7 ವರ್ಷ ಕಳೆದರೂ ವೇತನ ಪರಿಷ್ಕರಣೆ ಆಗಿಲ್ಲ. KSRTC, BMTC, ಕಲ್ಯಾಣ ಹಾಗೂ ವಾಯುವ್ಯ ಕರ್ನಾಟಕ ನಿಗಮಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ಸೇರಿ 1 ಲಕ್ಷ 30 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ. ಆದರೆ ವೇತನ ವಿಷಯ ಬಂದಾಗ ನೌಕರರಷ್ಟೇ ಬೀದಿಗಿಳಿಯುತ್ತಾರೆ.

ಇನ್ನು 2016ರಲ್ಲಿ ಶೇ 12.5 ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಆ ಬಳಿಕ ಇನ್ನೂ ಮಾಡಿಲ್ಲ. ಹೀಗಾಗಿ ಕೂಡಲೇ ಸರ್ಕಾರ ವೇತನ ಹೆಚ್ಚಳ ಮಾಡಬೇಕು ಎಂದು ಜಂಟಿ ಸಮಿತಿ ಆಗ್ರಹಿಸಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಬೃಹತ್‌ ಪ್ರತಿಭಟಟನಾ ಧರಣಿಯಲ್ಲಿ ಸಾರಿಗೆ ನಿಗಮಗಳ ಅಧಿಕಾರಿಗಳು ಭಾಗವಹಿಸಬೇಕು. ಕಾರಣ ಅವರಿಗೂ ಈ ವೇತನ ಹೆಚ್ಚಳವಾಗಲಿದೆ.

ಹೀಗಾಗಿ ಅವರು ನೌಕರರನ್ನು ಮುಂದೆಬಿಟ್ಟು ಹಿಂದೆ ಕೂರುವುದು ಸರಿಯಲ್ಲ. ಅವರು ಧರಣಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಹಕ್ಕನ್ನು ಪಡೆಯಲು ಮುಂದಾಗಬೇಕು ಎಂದು ಜಂಟಿ ಸಮಿತಿ ಪದಾಧಿಕಾರಿಗಳು ಕರೆ ನೀಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ