NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.2ರಂದು ಸಾರಿಗೆ ನೌಕರರ ಒಕ್ಕೂಟ, ಜಂಟಿ ಕ್ರಿಯಾ ಸಮಿತಿ ಬೇಡಿಕೆಗಳ ಈಡೇರಿಕೆ ಕುರಿತು ಒಟ್ಟಿಗೆ KSRTC ಎಂಡಿ ಅಧ್ಯಕ್ಷತೇಲ್ಲಿ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಭೆಯನ್ನು ಮಾ.2ರಂದು ಕರೆಯಲಾಗಿದೆ.

ಅಂದು ಮಧ್ಯಾಹ್ನ 3.30ಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಸ್ತೆ ಸಾರಿಗೆ ಮಜೂರ್ ಸಂಘ ಒಕ್ಕೂಟ ಹಾಗೂ ಕೆಎಸ್‌ಆರ್‌ಟಿಸಿ & ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ಪದಾಧಿಕಾರಿಗಳ ಸಭೆ ಕರೆಯಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.23ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಭೆ ಕರೆಯುವಂತೆ ಮನವಿ ಸಲ್ಲಿಸಿತ್ತು.

ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಸ್ತೆ ಸಾರಿಗೆ ಮಜೂರ್ ಸಂಘ ಒಕ್ಕೂಟ ಹಾಗೂ ಕೆಎಸ್‌ಆರ್‌ಟಿಸಿ & ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ಪದಾಧಿಕಾರಿಗಳ ಸಭೆಯನ್ನು ಇದೇ ಮೊದಲ ಬಾರಿಗೆ ಒಟ್ಟಿಗೆ ಮಧ್ಯಾಹ್ನ 3.30ಕ್ಕೆ ಕರೆಯಲಾಗಿದೆ. .

ಹೀಗಾಗಿ ಜಂಟಿ ಕ್ರಿಯಾ ಸಮಿತಿ ಹಾಗೂ ಒಕ್ಕೂಟದ ಬೇಡಿಕೆಗಳ ಕುರಿತು ಚರ್ಚಿಸಲಿದ್ದು, ಇಲ್ಲಿ ಗಮನಿಸಬೇಕಾದ ಮಹತ್ವದ ವಿಷಯವೆಂದರೆ ಜಂಟಿಯವರು ವೇತನ ಒಪ್ಪಂದದ ಬಗ್ಗೆ ಚರ್ಚೆ ಮಾಡಿದರೆ ಒಕ್ಕೂಟ ಪದಾಧಿಕಾರಿಗಳು ಸರಿ ಸಮಾನ ವೇತನದ ಬಗ್ಗೆ ಚರ್ಚಿಸಲಿದ್ದಾರೆ. ಆದರೆ ಏಕಕಾಲಕ್ಕೆ ಹೇಗೆ ಈ ವಿಭಿನ್ನ ಬೇಡಿಕೆಗೆ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸರ್ಕಾರ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಮುಖವಾಘಿ ತಾವೆಲ್ಲರೂ ಈ ಸಭೆಗೆ ಹಾಜರಾಗಲು ತಿಳಿಸಲಾಗಿದೆ. ಆದರೆ, ಸ್ಥಳಾವಕಾಶದ ಲಭ್ಯತೆಯ ದೃಷ್ಟಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಬೇಕು ಎಂದು ಮನವಿ ಮಾಡಿದ್ದಾರೆ.

ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕೂಡ ಅಗತ್ಯ ಮಾಹಿತಿಗಾಗಿ ಹಾಗೂ ಅಗತ್ಯ ಮಾಹಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಲು ಕೋರಿದ್ದಾರೆ.

ಕರಾರಸಾ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತು ಚರ್ಚಿಸಲು ವ್ಯವಸ್ಥಾಪಕ ನಿರ್ದೇಶಕರು, ಕ.ರಾ.ರ.ಸಾ ನಿಗಮ ರವರ ಅಧ್ಯಕ್ಷತೆಯಲ್ಲಿ ದಿನಾಂಕ:02.03.2026 ರಂದು ಮಧ್ಯಾಹ್ನ 3:30 ಗಂಟೆಗೆ ಕ.ರಾ.ರ.ಸಾ ನಿಗಮದ ಕೇಂದ್ರ ಕಛೇರಿಯ ಸಮ್ಮೇಳನ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಿದ್ದು, ತಾವು ಈ ಸಭೆಗೆ ಹಾಜರಾಗಲು ತಿಳಿಸಲಾಗಿದೆ. ಸ್ಥಳಾವಕಾಶದ ಲಭ್ಯತೆಯ ದೃಷ್ಟಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಲು ತಿಳಿಸಲಾಗಿದೆ.

Megha
the authorMegha

Leave a Reply

error: Content is protected !!