CrimeNEWSನಮ್ಮಜಿಲ್ಲೆ

KSRTC ಮೆಕ್ಯಾನಿಕ್‌ ಪತ್ನಿ, ಮಹಿಳಾ ಕಾನ್ಸ್‌ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಅನುಮಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೆಕ್ಯಾನಿಕ್‌ ಒಬ್ಬರ ಪತ್ನಿ ಪೊಲೀಸ್ ಕ್ವಾಟ್ರಸ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್‌ಟೇಬಲ್ ಜ್ಯೋತಿ (29) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ.

ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ ನಿತ್ಯ ಕಲಹವಾಗುತ್ತಿತ್ತು ಎಂದು ಹೇಳಲಾಗುತ್ತಿದೆ.

ಪ್ರತಿ ನಿತ್ಯ ದಂಪತಿ ಮಧ್ಯೆ ಜಗಳ ನಡೆಯುತ್ತಿರುವ ಬಗ್ಗೆ ಸಹೋದ್ಯೋಗಿಗಳು ಮಾಹಿತಿ ನೀಡಿದ್ದು, ಪತಿ ಹಾಲ್​ನಲ್ಲಿ ಮಲಗಿರುವ ವೇಳೆಯೇ ರೂಂನಲ್ಲಿ ಜ್ಯೋತಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.

ಇನ್ನು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ