NEWSದೇಶ-ವಿದೇಶನಮ್ಮಜಿಲ್ಲೆ

KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಸ್‌ ಕಾರ್ಯಾಚರಣೆಗಳ ಮೇಲಿನ KSRTCಯ ಏಕಸ್ವಾಮ್ಯವನ್ನು ಕಿತ್ತು ಹಾಕಿ, ಕರ್ನಾಟಕ ಸರ್ಕಾರ 2003ರಲ್ಲಿ ಜಾರಿಗೆ ತಂದಿದ್ದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಸಂಬಂಧ ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಹೆಚ್ಚುತ್ತಿರುವ ಸಾರ್ವಜನಿಕ ಸಾರಿಗೆ ಅಗತ್ಯಗಳನ್ನು ಪೂರೈಸಲು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಡಲು 2003ರಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸರಿಯಾಗಿದೆ ಎಂದು ಹೇಳಿದೆ.

ಖಾಸಗಿಯಾಗಿ ನಿರ್ವಹಿಸಲ್ಪಡುವ ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ಗಳನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಅವುಗಳನ್ನು ಕರ್ನಾಟಕ ರಾಜ್ಯ ರಸ್ತೆ ನಾರಿಗೆ ನಿಗಮದ ವಿಯಂತ್ರಣಕ್ಕೆ ತರುವ ಉದ್ದೇಶದಿಂದ ಈ ಹಿಂದೆ ಜಾರಿಗೆ ತರಲಾಗಿದ್ದ 1975ರ ಹಿಂದಿನ ಶಾಸನವನ್ನು ರದ್ದುಗೊಳಿಸುವ 2003ರ ಕಾನೂನನ್ನು ದ್ವಿಸದಸ್ಯ ಪೀಠ ಎತ್ತಿಹಿಡಿದಿದೆ.

ಕೆಎಸ್‌ಆರ್‌ಟಿಸಿ ಮತ್ತು ಇತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಹಿಂದಿನ ಕಾನೂನಿನ ರದ್ದತಿಯು ಶಾಸಕಾಂಗದ ಅನಿಯಂತ್ರಿತ ಕ್ರಿಯೆ ಅಲ್ಲ, ಬದಲಿಗೆ ಆಸ್ತಿತ್ವದಲ್ಲಿರುವ ನಿಯಂತ್ರಣ ಚೌಕಟಿನಲ್ಲಿನ ಗುರುತಿಸಲ್ಪಟ್ಟ, ನ್ಯೂನ್ಯತೆಗಳನ್ನು ಮತ್ತು ಸಾರಿಗೆ ವಲಯವನ್ನು ಉದಾರೀಕರಣಗೊಳಿಸುವ ಅಗತ್ಯ ಬೆಂಬಲಿಸುವ ಉದ್ಯೋಕ ಮತ್ತು ಸ್ಪಷ್ಟ ಕಾರಣಗಳ ಆಧಾರದ ಮೇಲೆ ತೆಗೆದುಕೊಂಡಿರುವ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಕೆಸಿಸಿಎ ಕಾಯ್ಕೆಯ ಮೂಲಕ ಕೆಎಸ್‌ಆ‌ರ್‌ಟಿಸಿಗೆ ದೊರೆತಿರುವ ಏಕಯತೆಯನ್ನು ಕಿತ್ತು ಹಾಕುವುದು ಮತ್ತು ಹೆಚ್ಚುತ್ತಿರುವ ಸಾರ್ವಜನಿಕ ಸಾರಿಗೆ ಆಗತ್ಯಗಳನ್ನು ಪೂರೈಸಲು ಖಾಸಗಿ ಬಸ್‌ಗಳಿಗೆ ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿತ್ತು ಎಂದು ನ್ಯಾಯಪೀಠ ತಿಳಿಸಿದೆ.

ಕರ್ನಾಟಕ ಹೈಕೋರ್ಟ್‌ ವಿಭಾಗಿನಿಯ ಪೀಠದ ತೀರ್ಪನ್ನು ಒಪ್ಪಿಕೊಂಡಿರುವ ನ್ಯಾಯಪೀಠ, ಈ ಕಾಯ್ಕೆ ರದ್ದತಿಯ ಕ್ರಮವು ಆಧುನಿಕ ಸಾರಿಗೆಯ ಪ್ರಾಯೋಗಿಕ ವಾಸ್ತವಿಕತೆಗೆ ತಕ್ಕನಾದ ಕ್ರಮವಾಗಿದೆ ಎಂದು ಹೇಳಿದೆ.

ಹೆಚ್ಚುತ್ತಿರುವ ಸಾರ್ವಜನಿಕ ಸೇವೆಗಳು ನಗರ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ, ಸಮರ್ಥ ಸೇವೆ ಮತ್ತು ಹೆಚ್ಚು ಬದಲಾಗುವ ನಿಯಂತ್ರಣ ನಿಯಮಗಳಂತಹ ಸಮಕಾಲೀನ ಸವಾಲುಗಳನ್ನು ಎದುರಿಸಲು ಈ ಕ್ರಮ ಆಗತ್ಯ ಎಂದು ನ್ಯಾಯಪೀಠ ಹೇಳಿದೆ.

ಕರ್ನಾಟಕ ಕಾಂಟ್ರಾಕ್ಟ್ ಕ್ಯಾರೇಜ್ (ಸ್ವಾಧೀನ) ಕಾಯ್ದೆ 1976 ಅನ್ನು ರದ್ದುಗೊಳಿಸುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಮತ್ತು ಕೆಲವು ಇತರ ಕಾನೂನು ತಿದ್ದು ಪಡಿ) ಕಾಯ್ದೆ- 2003ರ ಸೆಕ್ಷನ್ 3 ಸಾಂವಿಧಾನಿಕವಾಗಿದೆ ಎಂದ ಪೀಠ, ರಾಜ್ಯ ಶಾಸಕಾಂಗವು ಕಾಯ್ದೆಯನ್ನು ರದ್ದುಗೊಳಿಸಲು ತನ್ನ ಅಧಿಕಾರವನ್ನು ಸರಿಯಾಗಿ ಚಲಾಯಿಸಿದೆ ಎಂದು ಪೀಠ ಅಭಿಪ್ರಾಯವಟ್ಟಿದೆ.

2011 ಮಾರ್ಚ್‌ 28ರಂದು ನೀಡಿದ್ದ ತೀರ್ಪಿನ ವಿರುದ್ಧ ಕೆಎಸ್‌ಆರ್‌ಟಿಸಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕೆಸಿಸಿಎ ಕಾಯ್ದೆಯನ್ನು ರದ್ದುಗೊಲೀಸುವುದು ಅಸಂವಿಧಾನಿಕ ಎಂದು ಕೆಎಸ್‌ಆರ್‌ಟಿಸಿ ಮಾಡಿದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ