NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮಾರ್ಚ್‌ 4ರಿಂದ ಅನಿರ್ದಿಷ್ಟಾವಧಿ ಧರಣಿ – ಸಮಾನ ಮನಸ್ಕರ ವೇದಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಮಾರ್ಚ್‌ 4ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಇಂದು (ಫೆ.19) ನಗರದ ಪ್ರಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡರು, ಇಂದಿನ ಸರ್ಕಾರವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ನಮ್ಮ ಸಂಘಟನೆಯ ಮುಖ್ಯ ಬೇಡಿಕೆಯಾದ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ಸಹ ವಿಸ್ತರಿಸುವುದಾಗಿ ನೀಡಿದ್ದ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಡಿಸೆಂಬರ್ 2020 ಮತ್ತು ಏಪ್ರಿಲ್ 2021ರ ಮುಷ್ಕರಕ್ಕೆ ಸಂಬಂಧಿಸಿದಂತೆ ನೌಕರರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮ, ವಜಾ ಮತ್ತು ಪೊಲೀಸ್‌ ಪ್ರಕರಣಗಳನ್ನು ರದ್ದುಮಾಡಿ ಮುಷ್ಕರದ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ಇನ್ನು 01-01-2020 ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ಒಂದೇ ಕಂತಿನಲ್ಲಿ ಶೇ.15ರಷ್ಟು ಹೆಚ್ಚಳವಾಗಿರುವ ವೇತನದ ಹಿಂಬಾಕಿಯನ್ನು ಪಾವತಿಸಬೇಕು. ಮುಖ್ಯವಾಗಿ 2020 ರಿಂದ ನಿವೃತ್ತರಾಗಿರುವ ನೌಕರರಿಗೆ 01-01-2020 ರಿಂದ ವೇತನ ವಿಮರ್ಷೆ ಮಾಡಿ ಬಾಕಿ ಹಣವನ್ನು ಮತ್ತು ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತ್ತಿಸಬೇಕು ಎಂದು ಆಗ್ರಹಿಸಿದರು.

ಸಂಸ್ಥೆಯು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಚುನಾವಣೆ ನಡೆಸಿ ಸಂಘಗಳ ಮಾನ್ಯತೆ ಪ್ರಶ್ನೆಯನ್ನು ಪ್ರಜಾಪ್ರಭುತ್ವದನ್ವಯ ನಿರ್ಧರಿಸಬೇಕಿತ್ತು. ಆದರೆ 1996 ರಿಂದ ಇದುವರೆಗೂ ಚುನಾವಣೆ ಮಾಡದೆ ಕಾರ್ಮಿಕರ ಬಹುಮತ ಕಳೆದುಕೊಂಡಿರುವ ಸಂಘಕ್ಕೆ ಮಾನ್ಯತೆ ಮುಂದುವರಿಸುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಕಿಡಿಕಾರಿದರು.

ಇನ್ನು ಸಂಸ್ಥೆಯು 1996 ರಿಂದ ಕೈಗಾರಿಕಾ ವಿವಾದ ಕಾಯ್ದೆಯಡಿಯಲ್ಲಿ ಸಂಸ್ಥೆ ಮತ್ತು ನೌಕರರ ನಡುವೆ ಯಾವುದೇ ಒಪ್ಪಂದವಾಗದೆ ಏಕ ಪಕ್ಷೀಯವಾಗಿ ಸಂಸ್ಥೆ ಜಾರಿ ಮಾಡುತ್ತಿರುವ ವೇತನ ಪುನರ್‌ ವಿಮರ್ಷೆಗಳು ಕಾನೂನು ಬಾಹಿರವಾಗಿರುವ ಕಾರಣ ಸಂಸ್ಥೆಯು ಈ ಕೂಡಲೆ ಚುನಾವಣೆಯನ್ನು ನಡೆಸಿ. ಮಾನ್ಯತೆ ಪ್ರಶ್ನೆ ಇತ್ಯರ್ಥ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಮುಖವಾಗಿ ಇವುಗಳ ಜತೆಗೆ ಸಾರಿಗೆ ನೌಕರರಿಗೆ ಮತ್ತು ಅವಲಂಬಿತರಿಗೆ ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡಬೇಕು. ಸಾರಿಗೆ ಸಂಸ್ಥೆಯಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಸಂಸ್ಥೆಯ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಪದ್ಧತಿಯನ್ನು ಈ ಕೂಡಲೇ ಕೈಬಿಡಬೇಕು ಎಂದರು.

ಈ ಎಲ್ಲ ಬೇಡಿಕೆಗಳ ಬಗ್ಗೆ ಸರ್ಕಾರ ಹಾಗೂ ಸಂಸ್ಥೆಯು ನಮ್ಮೊಂದಿಗೆ ಕಾಲವಿಳಂಬ ಮಾಡದೇ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ಸರ್ಕಾರ ಮತ್ತು ಸಾರಿಗೆ ನಿಗಮಗಳು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಅನ್ಯ ಮಾರ್ಗವಿಲ್ಲದೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯು ಮಾರ್ಚ್‌ 4 ರಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ತೀರ್ಮಾನಿಸಿದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್