KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ

- 2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ
ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ ಆ ಪ್ರಯಾಣಿಕರಿಗೆ ತನಿಖಾ ಸಿಬ್ಬಂದಿ ಹತ್ತಿದ ಹಂತದಿಂದ ಮುಂದಿನ ಹಂತದವರೆಗೆ ಪ್ರಕರಣ ದಾಖಲಿಸಿ ಆ ಹಂತದಿಂದಲೇ ಪ್ರಯಾಣಿಕ ಇಳಿಯುವ ಹಂತಕ್ಕೆ ಟಿಕೆಟ್ ಕೊಡಬೇಕು. ಈ ನಡುವೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತ್ತಿಲ್ಲ.
ಈ ಸುತ್ತೋಲೆಯನ್ನು 2020 ಫೆಬ್ರವರಿ20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಅವರು ಹೊರಡಿಸಿದ್ದಾರೆ. ಹೌದು! ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕ ಟಿಕೆಟ್ ಕಳೆದುಕೊಂಡರೆ ಅದಕ್ಕೆ ನಿರ್ವಾಹಕರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ಸ್ಪಷ್ಟವಾಗಿ ಎಂಡಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಮಾರ್ಗ ತನಿಖಾ ಪದ್ಧತಿಯಲ್ಲಿನ ಮಾರ್ಗದರ್ಶನಗಳು: ಕರಾರಸಾ ನಿಗಮ ರಾಜ್ಯದೊಳಗೆ ಹಾಗೂ ನೆರೆ ರಾಜ್ಯದ ವಿವಿಧ ಸ್ಥಳಗಳಿಗೆ ಕಾರ್ಯಾಚರಣೆ ಮಾಡುತ್ತಿರುವ ವಾಹನಗಳನ್ನು ಪರಿಣಾಮಕಾರಿಯಾಗಿ ತನಿಖೆಗೆ ಒಳಪಡಿಸಿದಾಗ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆದರೆ ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಪ್ರಯಾಣದ ಟಿಕೆಟ್ ಕಳೆದುಕೊಂಡ (Loss of ticket) ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಪಷ್ಟ ನಿರ್ದೇಶನಗಳು ಇರುವುದಿಲ್ಲ. ಈ ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿಗಳು ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಟಿಕೆಟ್ ಪಡೆದುಕೊಂಡು, ಆಕಸ್ಮಿಕವಾಗಿ ಪ್ರಯಾಣದ ಟಿಕೆಟ್ ಕಳೆದುಕೊಂಡ (Loss of ticket) ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿಯು ಇಟಿಎಂ/ ಮುಂಗಡ ಕಾಯ್ದಿರಿಸಿದ ಟ್ರಿಪ್ ಶೀಟ್‌ಗಳಿಂದ ಈ ಪ್ರಯಾಣಿಕರು ಟಿಕೆಟ್ ಪಡೆದಿದ್ದು, ತದನಂತರ ಟಿಕೆಟ್ ಕಳೆದುಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.
ಮಂದುವರಿದು ತನಿಖಾ ಸ್ಥಳದಿಂದ ಮುಂದೆ ಪ್ರಯಾಣಿಕರು ಪ್ರಯಾಣಿಸುವ ಸ್ಥಳಕ್ಕೆ ನಿರ್ವಾಹಕರ ಇಟಿಎಂ ಯಂತ್ರದಿಂದ ಮರುಟಿಕೆಟ್ ವಿತರಿಸುವುದು ಹಾಗೂ ಮರುವಿತರಣೆ ಟಿಕೆಟ್‌ನ ಮೊತ್ತವನ್ನು ಸಂಬಂಧಿಸಿದ ಪ್ರಯಾಣಿಕರಿಂದ ಪಡೆಯುವುದು ಹಾಗೂ ಈ ಬಗ್ಗೆ ಮಾರ್ಗ ಪತ್ರದಲ್ಲಿ ಷರಾ
ದಾಖಲಿಸುವುದು. ಈ ರೀತಿಯ ಸಂದರ್ಭದಲ್ಲಿ ನಿರ್ವಾಹಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು.
ಈ ಸುತ್ತೋಲೆಯಲ್ಲಿನ ಅಂಶಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಹಾಗೂ ಮಾರ್ಗ ತನಿಖಾ ಸಿಬ್ಬಂದಿಗೆ ಅಗತ್ಯ ತಿಳಿವಳಿಕೆಯನ್ನು ನೀಡುವುದು. ಈ ಸುತ್ತೋಲೆ ಈ ಕೂಡಲೇ ಜಾರಿಗೆ ಬರುತ್ತದೆ. ಸುತ್ತೋಲೆ ಸ್ವೀಕರಿಸಿದ್ದಕ್ಕೆ ಸ್ವೀಕೃತಿ ಮತ್ತು ಅನುಸರಣಾ ವರದಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಂದಿನ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸೂಚಿಸಿದ್ದರು. ಈ ಪಿಡಿಎಫ್ ನೋಡಬಹುದು loss of ticket 1531
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...