NEWSನಮ್ಮಜಿಲ್ಲೆನಮ್ಮರಾಜ್ಯ

KSRTC-ಪ್ರಯಾಣಿಕರು ಟಿಕೆಟ್‌ ಕಳೆದುಕೊಂಡರೆ ಕಂಡಕ್ಟರ್‌ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಟಿಕೆಟ್‌ ಕಳೆದುಕೊಂಡಿರುವುದು  ತನಿಖಾ ಸಿಬ್ಬಂದಿಗೆ ತಪಾಸಣೆ ವೇಳೆ ತಿಳಿದು ಬಂದರೆ ಅಂಥವರಿಗೆ ಮತ್ತೆ ಟಿಕೆಟ್‌ಕೊಡಬೇಕು. ಅದನ್ನು ಬಿಟ್ಟು ನಿರ್ವಾಹಕರ ವಿರುದ್ಧ ಯಾವುದೆ ಕ್ರಮ ತೆಗೆದುಕೊಳ್ಳಬಾರದು ಎಂದು 2020ರಲ್ಲೇ ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಆದೇಶ ಹೊರಡಿಸಿದ್ದಾರೆ.

ಆದರೆ, ಈ ಆದೇಶವನ್ನು ಪಾಲಿಸದ ಕೆಲ ತನಿಖಾ ಸಿಬ್ಬಂದಿಗಳು ಪ್ರಯಾಣಿಕರಿಗೆ ದಂಡ ವಿಧಿಸುವ ಜತೆಗೆ ನಿರ್ವಾಹಕರನ್ನು ಹೊಣೆಗಾರರನ್ನಾಗಿ ಮಾಡಿ ದೋಷಾರೋಪಣ ಪತ್ರ ನೀಡುತ್ತಿದ್ದಾರೆ. ಇದು ಆದೇಶಕ್ಕೆ ವಿರುದ್ಧವಾಗಿದೆ ಎಂದು ಶಿಕ್ಷೆಗೆ ಒಳಗಾಗುತ್ತಿರುವ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂದಿನ ಎಂಡಿ ಶಿವಯೋಗಿ ಸಿ. ಕಳಸದ ಅವರು 20/02/2020ರಂದು ಸಂಖ್ಯೆ/ಕರಾಸಾ/ಕೇಕ/ಸಂ/ಕೇ.ತ.ದ/ 4936 /19-20 ಸುತ್ತೋಲೆ ಸಂಖ್ಯೆ: 1531ರಡಿ ಮಾರ್ಗ ತನಿಖಾ ಪದ್ಧತಿಯಲ್ಲಿನ ಮಾರ್ಗದರ್ಶನಗಳ ಬಗ್ಗೆ ಆದೇಶ ಹೊರಡಿಸಿದ್ದು ಈ ಆದೇಶ ಅಂದಿನಿಂದಲೇ ಜಾರಿಗೆ ಬಂದಿದೆ.

ರಾಜ್ಯದೊಳಗೆ ಹಾಗೂ ನೆರೆ ರಾಜ್ಯದ ವಿವಿಧ ಸ್ಥಳಗಳಿಗೆ ಕಾರ್ಯಾಚರಣೆ ಮಾಡುತ್ತಿರುವ ನಿಗಮದ ವಾಹನಗಳನ್ನು ಪರಿಣಾಮಕಾರಿಯಾಗಿ ತನಿಖೆಗೆ ಒಳಪಡಿಸಿದಾಗ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಂದರೆ, ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಪ್ರಯಾಣದ ಟಿಕೆಟ್ ಕಳೆದುಕೊಂಡ (Loss of ticket) ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಪಷ್ಟ ನಿರ್ದೇಶನಗಳು ಇಲ್ಲ, ಈ ಸಂದರ್ಭಗಳಲ್ಲಿ ಮಾರ್ಗ ತನಿಖಾ ಸಿಬ್ಬಂದಿಗಳು ಈ ಮಾರ್ಗಸೂಚಿಗಳನ್ನು ಪಾಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪ್ರಯಾಣಿಕರು ವಾಹನದಲ್ಲಿ ಪ್ರಯಾಣಿಸುವಾಗ ಟಿಕೆಟ್ ಪಡೆದುಕೊಂಡು, ಆಕಸ್ಮಿಕವಾಗಿ ಕಳೆದುಕೊಂಡ ಸಂರ್ದಭದಲ್ಲಿ (Loss of ticket) ಮಾರ್ಗ ತನಿಖಾ ಸಿಬ್ಬಂದಿಯು ಇಟಿಎಂ/ಮುಂಗಡ ಕಾಯ್ದಿರಿಸಿದ ಟ್ರಿಪ್‌ ಶೀಟ್‌ಗಳಿಂದ ಆ ಪ್ರಯಾಣಿಕರು ಟಿಕೆಟ್ ಪಡೆದಿದ್ದು, ತದನಂತರ ಕಳೆದುಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಆ ಬಳಿಕ ತನಿಖಾ ಸ್ಥಳದಿಂದ ಮುಂದೆ ಪ್ರಯಾಣಿಕರು ಪ್ರಯಾಣಿಸುವ ಸ್ಥಳಕ್ಕೆ ನಿರ್ವಾಹಕರ ಇಟಿಎಂ ಯಂತ್ರದಿಂದ ಮರುಟಿಕೆಟ್ ವಿತರಿಸುವುದು ಹಾಗೂ ಮರುವಿತರಣೆ ಟಿಕೆಟ್‌ನ ಮೊತ್ತವನ್ನು ಸಂಬಂಧಿಸಿದ ಪ್ರಯಾಣಿಕರಿಂದ ಪಡೆಯುವುದು ಹಾಗೂ ಈ ಬಗ್ಗೆ ಮಾರ್ಗಪತ್ರದಲ್ಲಿ ಪರಾ ದಾಖಲಿಸುವುದು. ಈ ರೀತಿಯ ಸಂದರ್ಭದಲ್ಲಿ ನಿರ್ವಾಹಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು.

ಈ ಸುತ್ತೋಲೆಯಲ್ಲಿನ ಅಂಶಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಹಾಗೂ ಮಾರ್ಗ ತನಿಖಾ ಸಿಬ್ಬಂದಿಗೆ ಅಗತ್ಯ ತಿಳಿವಳಿಕೆಯನ್ನು ನೀಡುವುದು. ಈ ಸುತ್ತೋಲೆ ಈ ಕೂಡಲೇ ಜಾರಿಗೆ ಬರುತ್ತದೆ. ಸುತ್ತೋಲೆ ಸ್ವೀಕರಿಸಿದ್ದಕ್ಕೆ ಸ್ವೀಕೃತಿ ಮತ್ತು ಅನುಸರಣಾ ವರದಿ ನೀಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ 2020ರ ಫೆಬ್ರವರಿ 20ರಂದೆ ಆದೇಶ ಹೊರಡಿಸಿದ್ದಾರೆ.

ಇನ್ನಾದರೂ ತನಿಖಾ ಸಿಬ್ಬಂದಿಗಳು ಈ ಆದೇಶವನ್ನು ಪಾಲನೆ ಮಾಡುವ ಮೂಲಕ ನಿರ್ವಾಹಕರ ವಿರುದ್ಧ ದೋಷಾರೋಪಣ ಪತ್ರ ನೀಡುವುದನ್ನು ನಿಲ್ಲಿಸಬೇಕು ಎಂದು ನೌಕರರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ