NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ನಡೆಗೆ ಸಿಟ್ಟಿಗೆದ್ದ ಸಾರಿಗೆ ಅಧಿಕಾರಿಗಳು, ನೌಕರರು – ಮಾ.24ರಿಂದ ಸಾರಿಗೆ ನೌಕರರ ಮುಷ್ಕರ ಪಕ್ಕ, ರಸ್ತೆಗಿಳಿಯಲ್ಲ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ
  • ಸರ್ಕಾರಿ ನೌಕರರಿಗೆ ತಾಳೆ ಹಾಕಿದರೆ ಶೇ.46ರಷ್ಟು ನೌಕರರಿಗೆ  ಹಾಗೂ ಅಧಿಕಾರಿಗಳಿಗೆ ಶೇ.29ರಷ್ಟು ವೇತನ ಕಡಿಮೆಯಾಗುತ್ತದೆ
  •  ಇದು ಮಧ್ಯಂತರ ಆದೇಶದ ಲೆಕ್ಕವಷ್ಟೇ. 7ನೇ ವೇತನ ಆಯೋಗ ಜಾರಿಯಾದರೆ ಇನ್ನೆಷ್ಟು  ವ್ಯತ್ಯಾಸ ಆಗುತ್ತದೆ ಎಂಬುದರ ಬಗ್ಗೆಯೂ ನೌಕರರು, ಅಧಿಕಾರಿಗಳು ಲೆಕ್ಕಹಾಕುತ್ತಿದ್ದಾರೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳು ಮತ್ತು ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಮಾ.17ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದಿಂದ ಸಾರಿಗೆ ನೌಕರರ ಹೊಟ್ಟೆ ತುಂಬುವುದಿಲ್ಲ. ಜತೆಗೆ ಇದು ಏಕಪಕ್ಷೀಯವಾಗಿದ್ದು, ಇದರ ಹಿಂದೆ ಭಾರಿ ಹುನ್ನಾರವೇ ನಡೆದಿದೆ.

ಹೀಗಾಗಿ ನಮಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಕೊಡಲೇ ಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ  ನೇತೃತ್ವದಲ್ಲಿ ಇದೇ  ಮಾ.24ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಶತಸಿದ್ಧ ಎಂದು ನೌಕರರ ಕೂಟದ ಅಧ್ಯಕ್ಷ  ಚಂದ್ರಶೇಖರ್‌ ತಿಳಿಸಿದ್ದಾರೆ.

ವೇತನ ಸಂಬಂಧ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ಕಳೆದ ಇದೇ ಮಾ.8ರಿಂದಲೂ ಹಲವಾರು ಸಭೆಗಳನ್ನು ಮಾಡಿದ್ದು, ಭಾರಿ ಚರ್ಚೆಕೂಡ ನಡೆಸಲಾಗಿದೆ. ಆದರೆ,  ಕೆಎಸ್ಆರ್‌ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ನಡುವೆ ಸಚಿವ ಶ್ರೀರಾಮುಲು ನಡೆಸಿದ ಎಲ್ಲ ಸಭೆಗಳು ವಿಫಲವಾಗಿವೆ.

ಬಳಿಕ ಸಿಎಂ ಬಸವರಾಜ ಬೊಮ್ಮಯಿ ಅವರು ಸಾರಿಗೆ ನೌಕರರ ಸಂಘಟನೆಗಳ ಜತೆ ಚರ್ಚಿಸದೆ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಶುಕ್ರವಾರ ರಾತ್ರಿ 8.30ರಲ್ಲಿ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಒಪ್ಪಿ ಮಾ.21ರಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್‌ಪಡೆದಿದ್ದಾರೆ. ಆದರೆ ನಾವು ಯಾವುದೇ ಕಾರರಣಕ್ಕೂ ವಾಪಸ್‌ಪಡೆಯುವುದಿಲ್ಲ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಹೇಳಿದ್ದಾರೆ.

ಇನ್ನು ನಮಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗದ ಮಾದರಿ ನೀಡಬೇಕು ಎಂದು ಆಗ್ರಹಿಸಿ ನೌಕರರು ಮತ್ತು ಅವರ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಕ್ಕೆ ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದು ಬರಿ ನೌಕರರ ಸಮಸ್ಯೆ ಮಾತ್ರವಲ್ಲ ನಮ್ಮ ಸಮಸ್ಯೆಯೂ ಕೂಡ ಎಂದು  ನಿಗಮಗಳ ಅಧಿಕಾರಿಗಳು ಕೂಡ ಇತರ ನಿಗಮಗಳ ಅಧಿಕಾರಿಗಳಂತೆ ಮುಷ್ಕರವನ್ನು ಬೆಂಬಲಿಸಲು ತೀರ್ಮಾನಿಸಿದ್ದಾರೆ.

ಇದೇ ಮಾ.1ರಿಂದ ಬೇಡಿಕೆ ಈಡೇರಿಕೆಗೆಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಸಮಾನ ಮನಸ್ಕರ ವೇದಿಕೆ ವತಿಯಿಂದ ನೂರಾರು ನೌಕರರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಆ ವೇಳೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಮಾ.4ರಂದು ಧರಣಿ ಕೈ ಬಿಟ್ಟು, 15 ದಿನಗಳ ಬಳಿಕ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಹಮ್ಮಿಕೊಳ್ಳುವುದಾಗಿ ನೌಕರರು ಎಚ್ಚರಿಕೆ ನೀಡಿದ್ದರು.

ಆ ವೇಳೆ ಸರ್ಕಾರವೇ ಕೊಟ್ಟಿರುವ  ಲಿಖಿತ ಭರವಸೆಯನ್ನು ಈಡೇರಿಸುವಂತೆ ಹಾಗೂ ಸಮಸ್ಯೆಗಳ ಶಾಶ್ವತ ನಿವಾರಣೆಗಾಗಿ ನಾವು ಮಾ.8ರಂದು ಕಾರ್ಮಿಕ ಆಯುಕ್ತರಿಗೆ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಮಾಡುವ ಬಗ್ಗೆ ನೋಟಿಸ್ ನೀಡಿ 14 ದಿನಗಳ ನಂತರ ಮುಷ್ಕರ ಪ್ರಾರಂಭಿಸಲು ಸಮಾನ ಮನಸ್ಕರ ವೇದಿಕೆ ನಿರ್ಧರಿಸಿದೆ ಎಂದು ಚಂದ್ರಶೇಖರ್ ತಿಳಿಸಿದ್ದರು.

ಅದರಂತೆ ಈಗಾಗಲೇ ಕಾರ್ಮಿಕ ಇಲಾಖೆ ಆಯುಕ್ತರಿಗೆ ತಮ್ಮ ಬೇಡಿಕೆ ಈಡೇರಿಕೆ ಸಂಬಂಧ ನೋಟಿಸ್‌ನೀಡಲಾಗಿದೆ. ಹೀಗಾಗಿ ನೌಕರರು ಮತ್ತು ಸಾರಿಗೆ ಅಧಿಕಾರಿಗಳ ರಾಜೀಸಂಧಾನ ಸಭೆಯನ್ನು ಇಂದು ( ಮಾ.20ರಂದು) ಮಧ್ಯಾಹ್ನ 2.30ಕ್ಕೆ ಆಯೋಜನೆ ಮಾಡಲಾಗಿದೆ.

ಇನ್ನು ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವುದಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದನ್ನು ಸುತರಾಮ್‌ ಒಪ್ಪಲು ಸಾಧ್ಯವೇ ಇಲ್ಲ. ಕಾರಣ ಸಾರಿಗೆ ನೌಕರರಿಗೆ ಇದರಿಂದ ಸರ್ಕಾರಿ ನೌಕರರಿಗೆ ತಾಳೆ ಹಾಕಿದರೆ ಶೇ.46ರಷ್ಟು ಕಡಿಮೆಯಾಗುತ್ತದೆ (ಇದು ಮಧ್ಯಂತರ ಆದೇಶದ ಲೆಕ್ಕವಷ್ಟೆ). ಇನ್ನು ಅಧಿಕಾರಿಗಳಿಗೆ ಶೇ.29ರಷ್ಟು ವೇತನ ಕಡಿಯಾಗುತ್ತದೆ. ಹೀಗಾಗಿ ನಿಗಮದ ಅಧಿಕಾರಿಗಳು ಸೇರಿದಂತೆ ಎಲ್ಲ ನೌಕರರು ಈ ವೇತನ ಹೆಚ್ಚಳ ವಿರುದ್ಧ ಮುಷ್ಕರ ಮಾಡುವುದು ಪಕ್ಕ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ