KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಹುದ್ದೆವಾರು ಸರಿಸಮಾನ ವೇತನ ಹಾಗೂ ಸೌಲಭ್ಯ ನೀಡುವ ಪ್ರಣಾಳಿಕೆ ಭರವಸೆಗಳನ್ನು ಕೂಡಲೇ ಈಡೇರಿಸಬೇಕು ಎಂಬ ಸಂಬಂಧ ನಾಳೆ ಏ.6ರಂದು ಸುದ್ದಿಗೋಷ್ಠಿ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

ಈ ಸಂಬಂಧ ನಾಳೆ ಸೋಮವಾರ ಮಧ್ಯಾಹ್ನ 12ಗಂಟೆಗೆ ನಗರದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದು ಮಾಧ್ಯಮಮಿತ್ರರು ತಪ್ಪದೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ನೀಡುವ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸದೆ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯಿಂದ ಬೇಸತ್ತಿರುವ ಸಾರಿಗೆ ನೌಕರರಿಗೆ ಅನ್ಯ ಮಾರ್ಗವಿಲ್ಲದೆ ಹೋರಾಟಕ್ಕೆ ಇಳಿಯಬೇಕಿರುವ ಬಗ್ಗೆ ವಿವರವಾಗಿ ತಿಳಿಸಲಾಗುವುದು.
ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕೂ ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲು ನಿರ್ಧಾರಿಸಿರುವ ಹೋರಾಟಗಳ ವಿಚಾರದ ಬಗ್ಗೆ ಮಾಧ್ಯಮ ಮಿತ್ರರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ವಿಷಯಗಳನ್ನು ಸರ್ಕಾರಕ್ಕೆ ಮುಟ್ಟಿಸಲು ಸಹಕಾರಿಯಾಗಬೇಕು, ಅದಕ್ಕಾಗಿ ತಾವು ಭಾಗವಹಿಸಿ ಎಂದು ವಿನಂತಿಸಿಕೊಂಡಿದ್ದಾರೆ.
Related









