NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ನೌಕರರಿಗೆ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಹಾಗೂ ನಿವೃತ್ತ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿ ಕುರಿತು ಚರ್ಚಿಸಲು ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ಕರೆಯಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಟ ತಿಳಿಸಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ ಜೂನ್‌ 15ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿ ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಹೀಗಾಗಿ ಈ ಸಭೆಗೆ ಅಗತ್ಯ ಮಾಹಿತಿ, ದಾಖಲೆಗಳೊಂದಿಗೆ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಜರಾಗಬೇಕು ಎಂದು ಸೂಚನೆ ನೀಡಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಬ್ಬಳ್ಳಿಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ಸಭಾ ಸೂಚನಾ ಪತ್ರವನ್ನು ಮಂಗಳವಾರ (ಜೂ.11ರಂದು) ನೀಡಿರುವುದಾಗಿ ಪುಷ್ಟ ತಿಳಿಸಿದ್ದಾರೆ.

ಇವರಿಗಷ್ಟೇ ಅಲ್ಲದೆ ಸಭಾ ಸೂಚನಾ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ, ಸಾರಿಗೆ ಇಲಾಖೆಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಗಳಿಗೆ ಹಾಗೂ ಸಾರಿಗೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ/ ಆಧೀನ ಕಾರ್ಯದರ್ಶಿಯವರ ಆಪ್ತ ಸಹಾಯಕರಿಗೂ ನೀಡಿರುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಕಳೆದ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಪರಿಷ್ಕರಣೆಯ ಹಿಂಬಾಕಿ  ಇನ್ನೂ ಕೊಟ್ಟಿಲ್ಲ. 2024ರ ಜನವರಿ 1ರಿಂದ ಮತ್ತೆ ಹೊಸ ವೇತನ ಪರಿಷ್ಕರಣೆ ಆಗಬೇಕಿದ್ದರೂ ಈವರೆಗೂ 2020ರ ಜನವರಿಯಿಂದ ಆಗಿರುವ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಸಾರಿಗೆ ಅಧಿಕಾರಿಗಳು ನೌಕರರಿಗೆ ಬರಬೇಕಿದೆ.

ಈ ಸಂಬಂಧ ಈಗಾಗಲೇ ನೌಕರರು ಮತ್ತು ನೌಕರರ ಪರ ಸಂಘಟನೆಗಳು ಪ್ರತಿಭಟನಾ ಧರಣಿ ಮಾಡಿದ್ದು, ಹಲವಾರು ಮನವಿ ಪತ್ರಗಳನ್ನು ಸಾರಿಗೆ ಸಚಿವರು ಮತ್ತು ನಾಲ್ಕೂ ನಿಗಮಗಳ ಎಂಡಿಗಳಿಗೆ ಕೊಟ್ಟಿದ್ದಾರೆ. ಆದರೂ 38 ತಿಂಗಳ ವೇತನ ಹಿಂಬಾಕಿ ಸಂಬಂಧ  ಈವರೆಗೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ಈ ನಡುವೆ 2020 ಜನವರಿ 1ರ ನಂತನ 2023 ಮಾರ್ಚ್‌ ನಡುವೆ ನಿವೃತ್ತರಾದ ನೌಕರರಿಗೆ ಈ ವೇತನ ಹಿಂಬಾಕಿ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.  ಈ ಸಂಬಂಧವೂ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಚರ್ಚಿಸಲು ಜೂ.15ರಂದು ಸಭೆ ಕರೆಯಲಾಗಿದೆ. ಈ ಸಂಭೆಯಲ್ಲಿ ಬಹುತೇಕ ಅಂತಿಮ ನಿರ್ಧಾರ ತೆಗೆದುಕೊಂಡು ಜುಲೈ ತಿಂಗಳಲ್ಲೇ ಅಂಧರೆ ಜೂನ್‌ ವೇತನದ ಜತೆಗೆ ಹಿಂಬಾಕಿ ಪಾವತಿ ಮಾಡಬಹುದು ಎಂದು ತಿಳಿದು ಬಂದಿದೆ.

ಬಲ್ಲ ಮೂಲಗಳು ಪ್ರಕಾರ ಜುಲೈ, ಆಗಸ್ಟ್‌ ಮತ್ತು ಸೆಪ್ಟೆಂಬರ್‌ ಈ ಮೂರುತಿಂಗಳಲ್ಲಿ ಎಲ್ಲ ವೇತನ ಹಿಂಬಾಕಿ ಪಾವತಿಸಿ ಬಳಿಕ 2024ರ ಜನವರಿ 1ರಿಂದ ಆಗಬೇಕಿರುವ ತೇತನ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್‌ 10 ಬಳಿಕ  ನೌಕರರ ಪರ ಸಂಘಟನೆಗಳ ಸಭೆ ಕರೆದು ಚರ್ಚಿಸಲಾಗುವುದು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ