NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಇರೋದು ಇನ್ನು 10ದಿನವಷ್ಟೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಈ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜ.1ರ ಬಳಗ್ಗೆ 11ಗಂಟೆಯಲ್ಲಿ ಆರಂಭವಾಗಿದೆ ಎಂದು KSRTC ವ್ಯವಸ್ಥಾನಳ ನಿರ್ದೇಶಕ ಅಕ್ರಮ್‌ ಪಾಷ ತಿಳಿಸಿದ್ದಾರೆ.

ಈ ಸಂಬಂಧ ಈಗಾಗಲೇ ಅನೇಕ ನೌಕರರು ಅರ್ಜಿ ಸಲ್ಲಿಸಿದ್ದು, ಇನ್ನು ಸಲ್ಲಿಸದವರು 10 ದಿನದೊಳಗೆ ಅರ್ಜಿ ಸಲ್ಲಿಸುವ ಮೂಲಕ ವರ್ಗಾವಣೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಅಲ್ಲದೆ ಈ ಸಂಬಂಧ ಸಾರಿಗೆಯ ಉಳಿದ ಮೂರು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು/ ಹುಬ್ಬಳ್ಳಿ/ ಕಲಬುರಗಿಯ ಎಲ್ಲ ಇಲಾಖಾ ಮುಖ್ಯಸ್ಥರು, ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲ ಪ್ರಾಂಶುಪಾಲರು ಹಾಗೂ ಎಲ್ಲ ಕಾರ್ಯ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ.

ಇದು 2026ನೇ ಸಾಲಿನ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಅಂದರೆ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ. ಹೀಗಾಗಿ 31-01-2026 ರ ಸಂಜೆ 5:30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ (ಪತಿ-ಪತ್ನಿ/ ಅಂಗವಿಕಲ/ ತೀವ್ರತರಹದ ಅನಾರೋಗ್ಯ ಒಳಗೊಂಡಂತೆ) ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಚೇರಿ/ ವಿಭಾಗ/ ಘಟಕದ/ ತರಬೇತಿ ಕೇಂದ್ರ/ ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಕೋರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ