KSRTC: ನೌಕರರ ವೇತನ ಸೇರಿ ಇತರ ಬೇಡಿಕೆಗಳ ಈಡೇರಿಕೆಗಾಗಿ ಒಗ್ಗಟ್ಟಾದ ಸಂಘಟನೆಗಳು-ಸಿಎಂ ಭೇಟಿಗೆ ನಿರ್ಧಾರ

- ಮಂಗಳವಾರದ ಸಭೆಯಲ್ಲಿ ಒಕ್ಕೋರಲಿನ ತೀರ್ಮಾನ
- ಬಣಗಳಾಗದೆ ಒಂದೇ ವೇದಿಕೆಯಡಿ ಸಿಎಂ, ಸಾರಿಗೆ ಸಚಿವರ, ಎಂಡಿಗಳ ಭೇಟಿಗೆ ನಿರ್ಧಾರ
ಬೆಂಗಳೂರು: ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ವೇತನ, 1-1-2024ರ ವೇತನ ಹೆಚ್ಚಳದ ವಿಳಂಬ ಹಾಗೂ 7-4-2021ರಲ್ಲಿ ವಜಾಗೊಂಡಿರುವ ನೌಕರರನ್ನು ಯಥಾವತ್ತಾಗಿ ಯಾವುದೇ ಶಿಕ್ಷೆ ಇಲ್ಲದೇ ಡ್ಯೂಟಿ ಕೊಡಬೇಕು ಎಂದು ಸರ್ಕಾರ ಹಾಗೂ ಆಡಳಿತ ವರ್ಗಕ್ಕೆ ಒತ್ತಾಯಿಸುವ ಬಗ್ಗೆ ಎಲ್ಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘಟನೆಗಳು ಒಕ್ಕೋರಲಿನ ತೀರ್ಮಾನ ತೆಗೆದುಕೊಂಡವು.
ಮಂಗಳವಾರ ಮೇ 6ರ ಮಧ್ಯಾಹ್ನ ನಗರದ ಜೈಭೀಮ್ ಭವನದಲ್ಲಿ ನಡೆದ ಸರ್ವ ಸಂಘಟನೆಗಳ ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆಗಳ ಪದಾಧಿಕಾರಿಗಳು ಈ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳೆಂದರೆ, ಒಂದೇ ವೇದಿಕೆಯಲ್ಲಿ ಸಂಘಟಿತರಾಗಿ ನೌಕರರಿಗೆ ಬರಬೇಕಿರುವ 38 ತಿಂಗಳ ಹಿಂಬಾಕಿ ವೇತನ, 1-1-2024ರ ವೇತನ ಹೆಚ್ಚಳ ಹಾಗೂ 7-4-2021ರಲ್ಲಿ ನಡೆದ ಮುಷ್ಕರದಲ್ಲಿ ವಜಾಗೊಂಡಿರುವ ನೌಕರರನ್ನು ಯಥಾವತ್ತಾಗಿ ಯಾವುದೇ ಶಿಕ್ಷೆ ಇಲ್ಲದೇ ಡ್ಯೂಟಿಗೆ ತೆಗೆದುಕೊಳ್ಳಬೇಕು.
ಇನ್ನು ಈಗಿನ ಪರಿಸ್ಥಿತಿಯಲ್ಲಿ ನೌಕರರು ತುಂಬಾ ಗಂಭೀರ ಸ್ಥಿತಿಯಲ್ಲಿ ಕರ್ತವ್ಯ ಮಾಡುತ್ತಿದ್ದು ಸಂಸ್ಥೆಯ ಹಲವಾರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಘಟಕಗಳ ಮಟ್ಟದಲ್ಲಿ ಕಿರುಕುಳ ಕೂಡ ಹೆಚ್ಚಾಗಿದೆ. ಜತೆಗೆ ಅಧಿಕಾರಿಗಳ ದೌರ್ಜನ್ಯ ಎಲ್ಲೆಮೀರಿದೆ. ಇಂತಹ ಸಂದರ್ಭಗಳಲ್ಲಿ 38 ತಿಂಗಳ ವೇತನದ ಹಿಂಬಾಕಿಯೂ ಇಲ್ಲ, ದುಡಿಮೆಗೆ ತಕ್ಕ ವೇತನವೂ ಇಲ್ಲದೆ ನೌಕರರು ಪರಿತಪಿಸುತ್ತಿದ್ದಾರೆ.
ಈಗಿರುವ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ದಿನಮಾನದಲ್ಲಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಸಂದರ್ಭವು ಬಂದಿದೆ. ಬೆಲೆ ಏರಿಕೆ ಗಗನಕ್ಕೆ ಏರುತ್ತೀರುವಂತೆ ಶಾಲೆಗಳ ಶುಲ್ಕವು ಕೂಡ ಹೆಚ್ಚಳವಾಗಿದೆ. ಈ ಎಲ್ಲದರಿಂದ ನೌಕರರು ಹೀನಾಯ ಪರಿಸ್ಥಿತಿಯಲ್ಲಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗುತ್ತಿದೆ.
ಈ ಎಲ್ಲವೂ ನೂರಕ್ಕೆ ನೂರರಷ್ಟು ಸತ್ಯ ಎಂಬುದು ನಮ್ಮ ಕಣ್ಣಿಗೆ ಕಾಣುತ್ತಿದೆ. ಇಂತಹ ಕಷ್ಟದ ದಿನಗಳಲ್ಲಿ ಸಂಘಟನೆಗಳು ನೌಕರರ ಪಾಲಿಗೆ ಸಂಜೀವಿನಿ ಆಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಬಣಗಳಾಗದೆ ಒಂದಾಗಿ ಒಗ್ಗಟ್ಟಿನಿಂದ ಸರ್ಕಾರದ ಮುಂದೆ ಹೋಗಿ ಈ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರುದ್ರೇಶ್ ಎಸ್. ನಾಯಕ ತಮ್ಮ ಅಭಿಪ್ರಾಯ ಮಂಡಿಸಿದರು.
ಎಲ್ಲ ಸಂಘಟನೆಗಳು ಜತೆಯಲ್ಲಿ ಹೋಗಿದ್ದೆ ಆದರೆ ನಮ್ಮ ಸಮಸ್ಯೆ ಯಾವುದು ಸಮಸ್ಯೆಯೇ ಅಲ್ಲ. ಆದರೆ ಎತ್ತು ಏರಿಗೆ ಕೋಣ ನೀರಿಗೆ ಎಂಬ ನಿಲುವು ಸಂಘಟನೆಗಳದ್ದಾಗಿದೆ. ಹಾಗಾಗಿ ಇನ್ನು ಮುಂದಾದರೂ ಬದಲಾಗಿ ಎಲ್ಲ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಹೋಗಿ ನೌಕರರಿಗೆ ನ್ಯಾಯ ಕೊಡಿಸುವಂತ ಕೆಲಸ ಮಾಡೋಣ ಎಂದರು. ಅದಕ್ಕೆ ಸಭೆಯಲ್ಲಿದ್ದವರು ಒಕ್ಕೋರಲಿನಲ್ಲಿ ಇದೇ ಸರಿ ಎಂದು ನಿರ್ಧರಿಸಿದರು.
ಇನ್ನು ನೌಕರರ ಪಾಲಿನ ವಿಲನ್‌ಗಳಂತೆ ವರ್ತಿಸದೆ ಇನ್ನು ಮುಂದಾದರೂ ನಾವು ಅವರ ಹೆಸರಿನಲ್ಲಿ ಕಟ್ಟಿಕೊಂಡಿರುವ ಸಂಘಟನೆಗಳಾಗಿ ಅವರಿಗೆ ಸಂಸ್ಥೆಯಲ್ಲಿ ಸಿಗಬೇಕಿರುವ ಸೌಲಭ್ಯಗಳನ್ನು ಸಂಘಭೇದ ಮರೆತು ಒಂದಾಗಿ ಕೊಡಿಸಬೇಕು. ಎಲ್ಲ ಸಂಘಟನೆಗಳು ಒಂದಾಗಿ ನ್ಯಾಯ ಕೊಡಿಸುವ ಪ್ರಾಮಾಣಿಕ ಕೆಲಸ ಮಾಡೋಣ ಎಂದು ಒಕ್ಕೋರಲಿನಿಂದ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಒಟ್ಟಾರೆ ಸರಿ ಸಮಾನವ ವೇತನವನ್ನಾದರೂ ಕೊಡಲಿ ಇಲ್ಲ ಅಗ್ರಿಮೆಂಟ್ ಆದರೂ ಮಾಡಲಿ ನಮ್ಮ ನೌಕರರಿಗೆ ನ್ಯಾಯಯುತವಾಗಿ ಸಿಗಬೇಕಿರುವ ವೇತನ ಸೌಲಭ್ಯಗಳು ಸಿಗಲೇಬೇಕು ಎಂದು ಸಭೆಯಲ್ಲಿದ್ದ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಒಂದೇ ಧ್ವನಿಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ರುದ್ರೇಶ್ ಎಸ್. ನಾಯಕ ತಿಳಿಸಿದ್ದಾರೆ.
ಸಭೆಯಲ್ಲಿ ಕಾರ್ಯಕ್ರಮದ ಆಯೋಜಕ ನೌಕರರ ಸಂಘದ ಅಧ್ಯಕ್ಷ ಎಚ್ಆರ್. ಜಗದೀಶ್, ನೌಕರ ಕೂಟದ ಖಜಾಂಚಿ ಎನ್.ಸತೀಶ್, ವೆಂಕಟರಮಣಪ್ಪ, ತುಮಕೂರು ಪುಟ್ಟಣ್ಣ, ಗುತ್ತಲೇಗೌಡ, ಕೃಷ್ಣ, ಮಹೇಂದ್ರ ಅಪ್ಪಾಜಿ, ಕುಮಾರ್, ನವೀನ್, ಸುಣಗಾರ, ಕೂಟದ ಅನಿಲ್ ಕುಮಾರ್, ಶ್ರೀಧರ್ ತಹಶೀಲ್ದಾರ್, ಕುದರೆ ಜಗದೀಶ್, ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪಿ.ಎಂ.ಪ್ರಕಾಶ್ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗವಹಿಸಿದ್ದರು.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...