NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಅರಿಸಿನಕುಂಟೆ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಏ.21) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ನೂರಾರು ಸಂಖ್ಯೆಯಲ್ಲಿ ನೆಲಮಂಗಲದಿಂದ ಹೊರಟಿದ್ದ ಸಾರಿಗೆ ನೌಕರರನ್ನು ಪೊಲೀರು ಅರಿಸಿನಕುಂಟೆ ಬಳಿ ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ನಮಗೆ ನಮ್ಮ ಬೇಡಿಕಗಳ ಈಡೇರಿಸಿಕೊಳ್ಳುವುದಕ್ಕಾಗಿ ನಾವು ಫ್ರೀಟಂ ಪಾರ್ಕ್‌ವರೆಗೆ ಪಾದಯಾತ್ರೆ ಮಾಡಿ ಅಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆರಕ್ಷಕರಲ್ಲಿ ಸಾರಿಗೆ ನೌಕರರು ಮನವಿ ಮಾಡುತ್ತಿದ್ದಾರೆ. ಆದರೆ, ಕೋರ್ಟ್‌ ಪಾದಯಾತ್ರೆ ಮಾಡಿಕೊಂಡು ಬೆಂಗಳೂರು ನಗರ ಪ್ರವೇಶಿಸುವುದಕ್ಕೆ ತಡೆನೀಡಿರುವುದರಿಂದ ನೀವು ಸಹಕರಿಸಬೇಕು ಎಂದು ನೌಕರರ ಮುಖಂಡರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

ಈ ನಡುವೆ ನಾವು ತಾಲೂಕು ಕಚೇರಿ ಮುಂದೆ ಕುಳಿದು ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪೊಲೀಸ್‌ ಮೇಲಧಿಕಾರಿಗಳು ಬಂದು ಅನುಮತಿಸಿದರೆ ತಾಲೂಕು ಕಚೇರಿ ಬಳಿಯೇ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ನೌಕರರು ಹೇಳಿದ್ದಾರೆ.

ಅರಿಸಿನಕುಂಟೆ ಬಳಿ ಪೊಲೀಸರು ಪಾದಯಾತ್ರೆ ಮಾಡುತ್ತಿರುವ ಸಾರಿಗೆ ನೌಕರರನ್ನು ತಡೆದಿದ್ದು ಸಾರಿಗೆ ನೌಕರರು ಕೂಡ ಪೊಲೀಸರೊಂದಿಗೆ ಶಾಂತಿಯುವಾಗಿ ವರ್ತಿಸುವ ಮೂಲಕ ಸಹಕರಿಸುತ್ತಿದ್ದಾರೆ. ಮುಂದೆ ಏನಾಗುತ್ತದೆ ಎಂಬುದರ ಬಗ್ಗೆ ಅಪ್‌ಡೇಟ್‌ ನೀಡಲಾಗುವುದು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ