NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಏ.21) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಪಾದಯಾತ್ರೆಯನ್ನು ಅರಿಸಿನಕುಂಟೆಯಲ್ಲಿ ಪೊಲೀಸರು ತಡೆದಿದ್ದರು ಆದರೆ. ಈಗ ಅವರನ್ನು ಪೊಲೀಸರು ಬಿಟ್ಟಿದ್ದು ಈಗ ಫ್ರೀಡಂ ಪಾರ್ಕ್‌ನತ್ತ ನೌಕರರು ಬರುತ್ತಿದ್ದಾರೆ.

ನಿನ್ನೆ ಅಂದರೆ ಸೋಮಾವರ ಏ.20ರಂದು ನೆಲಮಗಲದಲ್ಲಿ ತಂಗಿದ್ದ ಪಾದಯಾತ್ರೆ ಮಾಡುತ್ತಿರುವ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಕರೆ ನೀಡಿದ್ದರು ಅದರಂತೆ ಇಂದು ನೂರಾರು ಜನ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ನೆಲಮಂಗಲದಿಂದ ಫ್ರೀಡಂ ಕಪಾರ್ಕ್‌ನತ್ತ ಪಾದಯಾತ್ರೆ ಸಾಗುತ್ತಿತ್ತು. ಈ ನಡುವೆ ಪೊಲೀಸರು ಅರಿಸಿನಕುಂಟೆ ಬಳಿ ಪಾದಯಾತ್ರೆ ನಿತರ ನೌಕರರನ್ನು ತಡೆದಿದ್ದರು. ಆದರೆ ಈಗ ಪೊಲೀಸರು ಅಲ್ಲಿಂದ ಬಿಟ್ಟಿದ್ದಾರೆ. ಹೀಗಾಗಿ ಪಾದಯಾತ್ರೆ ತಂಡ ಫ್ರೀಡಂ ಪಾರ್ಕ್‌ನತ್ತ ಹೊರಟಿದೆ.

ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸದೆ ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ಸಾರಿಗೆ ನೌಕರರ ಒಕ್ಕೂಟದಿಂದ ಇದೇ ಏ.8ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಹೋರಟು ಇಂದಿಗೆ 14 ದಿನಗಳು ಕಳೆದಿದೆ. ಹೀಗಾಗಿ ಏ.21ರಂದು ಬೆಂಗಳೂರಿಗೆ ತಲುಪಲಿರುವ ಪಾದಯಾತ್ರೆ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದೆ.

ಬಸ್‌ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಧಿಕಾರಿಗಳು ನಮ್ಮ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಅದರಂತೆ ಈ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಕ್ಕೆ ಬೇಷರತ್ತಾಗಿ ಬೆಂಬಲ ನೀಡುತ್ತಿದ್ದಾರೆ ಅಧಿಕಾರಿಗಳು ಅಲ್ಲದೆ ನಮಗೂ ಸರಿ ಸಮಾನ ವೇತನ ಬೇಕು ಎಂದು ಈಗಾಗಲೇ ಸಾರಿಗೆ ಸಚಿವರು ಸರ್ಕಾರಕ್ಕೂ ಹಲವಾರು ಬಾರಿ ಮನವಿ ಸಲ್ಲಿಸಿದ್ದಾರೆ.

ಇನ್ನು ಸಾರಿಗೆ ನೌಕರರಿಗೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಂದರೆ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿ ಮಾಡಬೇಕು ಎಂದು ಬೇಡಿಕೆ ಒಟ್ಟಾರೆ ಸಮಸ್ತ ಅಧಿಕಾರಿಗಳು ಹಾಗೂ ನೌಕರರ ಆಗ್ರಹವಾಗಿದೆ.

ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಲೇಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು.

ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿ ಈ ಉಪವಾಸ ಧರಣಿ ಹಮ್ಮಿಕೊಂಡಿದ್ದು, ನೌಕರರು ಹಾಗೂ ನೌಕರರ ಕುಟುಂಬದವರು ಭಾಗವಹಿಸಬೇಕು ಎಂದು ಕೋರಿದ್ದಾರೆ.

ಇನ್ನು ಈ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ ಮುನ್ನ ಅಂದರೆ ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಿಂದ ಬೆಂಗಳೂರಿನ ವರೆಗೆ ಏ.21ರವರೆಗೂ ಪಾದಯಾತ್ರೆ ಜಾಥಾ ಹಮ್ಮಿಕೊಂಡು ಬರುತ್ತಿದ್ದು, ನಾಳೆಗೆ 14 ದಿನಗಳ ಪಾದಯಾತ್ರೆ ಬೆಂಗಳೂರಿನ ಫ್ರೀಡಂಪಾರ್ಕ್‌ ತಲುಪುವ ಮೂಲಕ ಇನ್ನು ಕೆಲವೇ ನಿಮಿಷಗಳಲ್ಲಿ ಪೂರ್ಣಗೊಳ್ಳಲಿದ್ದು ಇಂದಿನಿಂದ ಬೇಡಿಕೆ ಈಡೇರುವವರೆಗೂ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ.

Megha
the authorMegha

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ