NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾದ HRMS ಜಾರಿಗೆ ಸಿದ್ಧತೆ – 2020ರಲ್ಲಿಟ್ಟಿದ ಬೇಡಿಕೆ ಈಡೇರುವ ಸಮಯವಿದು!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಪ್ರಪ್ರಥಮ ಬಾರಿಗೆ 10 ಡಿಸೆಂಬರ್ 2020ರಿಂದ ಡಿ. 13ರವರೆಗೆ ದಿಢೀರ್‌ ಪ್ರತಿಭಟನೆ ಮಾಡಿ ಇಟ್ಟಿದ್ದ 9 ಬೇಡಿಕೆಗಳು ಈವರೆಗೂ ಕಾನೂನಾತ್ಮಕವಾಗಿ ಈಡೇರಿರಲಿಲ್ಲ. ಅದರೆ, ಇದೇ ಮೊದಲಿಗೆ ಕೆಎಸ್‌ಆರ್‌ಟಿಸಿ HRMS ಅನುಷ್ಠಾನ ಮಾಡುವ ಮೂಲಕ ಒಂದು ಬೇಡಿಕೆಯನ್ನು ಈಡೇರಿಸಲು ಮುಂದಾಗಿದೆ. ಆದರೆ ಉಳಿದ ಮೂರು ನಿಗಮಗಳು ಈ ಬಗ್ಗೆ ಇನ್ನೂ ಏನನ್ನು ತಿಳಿಸಿಲ್ಲ.

ಒಟ್ಟಾರೆ KSRTC ಅಧಿಕಾರಿಗಳು ಮತ್ತು ನೌಕರರಿಗೆ ಮಾರ್ಚ್‌ನಿಂದಲೇ HRMS ತಂತ್ರಾಂಶದ ಮೂಲಕ ಹಾಜರಾತಿ ನೀಡುವ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದ್ದು, ಈ ಬಗ್ಗೆ ನಿಗಮದ ಎಲ್ಲ ಉನ್ನತ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಘಟಕ ಮಟ್ಟದ ಅಧಿಕಾರಿಗಳಿಗೆ ಸಂಸ್ಥೆಯ ಸಿಬ್ಬಂದಿ ಮತ್ತು ಜಾಗೃತಾ ನಿರ್ದೇಶಕರು ಸೂಚನೆ ನೀಡಿದ್ದಾರೆ.

ನೌಕರರು ತಮ್ಮ ಮೊಬೈಲ್‌ ಫೋನ್‌ನಲ್ಲಿ HRMSನ ಸಾರಿಗೆ ಮಿತ್ರ ಆಪ್‌ ಡೌನ್‌ಲೋಡ್‌ ಮಾಡಿಕೊಂಡು ಬಳಿಕ ಹಾಜರಾತಿಯನ್ನು ಆ ಮೂಲಕ ದೃಢಿಕರಿಸುವ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಸಾರಿಗೆ ನೌಕರರಿಗೆ ಸರ್ಕಾರಿ ಶಿಕ್ಷಕರಂತೆ ಅಂತರ ನಿಗಮ ವರ್ಗಾವಣೆ ಪದ್ಧತಿ ಜಾರಿಗೆ ತರುವ ಬೇಡಿಕೆಯೂ ಈಡೇರಿದೆ. ಆದರೆ, ಅದು ಕೆಲವರಿಗೆ ಮಾತ್ರ ಸೀಮಿತ ಎಂಬಂತಾಗಿದೆ. ಇನ್ನು ಹಲವಾರು ನೌಕರರು ವರ್ಗಾವಣೆಗಾಗಿ ಚಾತಕಪಕ್ಷಿಯಂತೆ ಕಾದು ಕುಳಿತಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಎರಡು ವರ್ಷ ತರಬೇತಿ ಅವಧಿಯನ್ನು ಒಂದು ವರ್ಷಕ್ಕೆ ಕಡಿತ ಮಾಡಬೇಕು ಎಂಬ ಬೇಡಿಕೆಯೂ ಕೂಡ ಈಡೇರಿದ್ದು ನೌಕರರಿಗೆ ತುಸು ನೆಮ್ಮದಿ ತಂದಿದೆ.

ಒಟ್ಟಾರೆ ಸಾರಿಗೆ ನೌಕರರ ಕೂಟ ಈ ಹಿಂದೆ ಇಟ್ಟಿದ್ದ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಅಂದಿನ ಬಿಜೆಪಿ ಸರ್ಕಾರ ಮತ್ತು ಸಾರಿಗೆ ಸಚಿವರು ಅವುಗಳನ್ನು ಕಾನೂನಾತ್ಮಕವಾಗಿ ಜಾರಿಗೊಳಿಸಲಿಲ್ಲ. ಆದರೆ, 3 ಬೇಡಿಕೆಗಳು ಈಡೇರಿದಂತೆ ಕಾಣುತ್ತಿದೆ.

ಅಂದು ಅಂದರೆ 2020 ಡಿಸೆಂಬರ್‌ನಲ್ಲಿ ಸಾರಿಗೆ ನೌಕರರು ನಡೆಸಿದ ಧರಣಿ ವೇಳೆ ಸರ್ಕಾರ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದನ್ನು ಬಿಟ್ಟು ಉಳಿದ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ನೀಡಿತ್ತು. ಅವುಗಳಲ್ಲಿ 5 ಬೇಡಿಕೆಗಳನ್ನು ಈಡೇರಿಸಿದ್ದೇವೆ ಎಂದು ಅಂದಿನ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ ಆ ಬೇಡಿಕೆಗಳು ಸರ್ಕಾರ ಬದಲಾದರೂ ಇನ್ನೂ ಕಾನೂನಾತ್ಮಕವಾಗಿ ಅಧಿಕೃತವಾಗಿ ಜಾರಿಗೆ ಬಂದಿಲ್ಲ.

ಇನ್ನು ನೆರೆಯ ಆಂಧ್ರಪ್ರದೇಶದಲ್ಲಿ ಮತ್ತು ಇತ್ತೀಚೆಗೆ ತೆಲಂಗಾಣದಲ್ಲೂ ಸಾರಿಗೆ ನೌಕರರ ಮೂಲ ವೇತನ ಹೆಚ್ಚಿಸಿ ಅವರನ್ನು ಸರ್ಕಾರಿ ನೌರರೆಂದು ಪರಿಗಣಿಸಲಾಗಿದೆ. ಅಲ್ಲಿನ ಸಾರಿಗೆ ನೌಕರರಿಗೆ ಹೋಲಿಸಿದರೆ ನಮ್ಮ ಮೂಲ ವೇತನ ಶೇ. 80ರಷ್ಟು ಕಡಿಮೆ ಇದೆ. ಇದರ ಜತೆಗೆ ಅಂದಿನ ಸರ್ಕಾರ ಭರವಸೆ ಕೊಟ್ಟಿದ್ದ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದು ಹಳ್ಳ ಹಿಡಿದಿದೆ.

2020ರಲ್ಲಿ ಬಿಜೆಪಿ ಸರ್ಕಾರ ಸಾರಿಗೆ ನೌಕರರ ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿ ಮಾತು ತಪ್ಪಿತು. ಅವುಗಳು ಯಾವುವು ಎಂದರೆ… ವೇತನ ಆಯೋಗ ಶಿಫಾರಸು ಜಾರಿ ಮಾಡಿ ಅದನ್ನು ನಾಲ್ಕು ನಿಗಮಗಳ ಸಾರಿಗೆ ನೌಕರರಿಗೆ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೆ ಇರುವಂತಹ ಜ್ಯೋತಿ ಸಂಜೀವಿನ ಆರೋಗ್ಯ ಭಾಗ್ಯ ನಮಗೂ ಅನ್ವಯವಾಗುಂತೆ ಮಾಡಬೇಕು ಎಂಬುವುದು.

ಸಾರಿಗೆ ನೌಕರರಿಗೆ ಸರ್ಕಾರಿ ಶಿಕ್ಷಕರಂತೆ ಅಂತರ ನಿಗಮ ವರ್ಗಾವಣೆ ಪದ್ಧತಿ ಜಾರಿಗೆ ತರುವುದು.ಡಿಪೋಗಳಲ್ಲಿ ಮೇಲಧಿಕಾರಿಗಳಿಂದ ನೌಕರರಿಗೆ ನೀಡುತ್ತಿರುವ ಕಿರುಕುಳ ತಪ್ಪಬೇಕು. ಬಾಟ, ಭತ್ಯೆ ಮತ್ತು ಓಟಿ ನೀಡುವಂತೆ ಕೇಳಿದ ಬೇಡಿಕೆ ಇನ್ನೂ ಈಡೇರಿಲ್ಲ.

ಎನ್‌ಐಎನ್‌ಸಿ ಪದ್ಧತಿ ರದ್ದು ಮಾಡುವಂತೆ ಬೇಡಿಕೆ ಇಟ್ಟಿದ್ದು ಇದುವರೆಗೂ ಆ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇನ್ನು ಎಚ್ಆರ್‌ಎಂಎಸ್ ಪದ್ಧತಿ ಜಾರಿ ಮಾಡುವುದಾಗಿ ಹೇಳಿದ ಭರವಸೆ ಈಗ ಕೆಎಸ್‌ಆರ್‌ಟಿಸಿಯಲ್ಲಿ ಮಾರ್ಚ್‌ 2024ರಿಂದ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ನೌಕರರಿಗೆ 30 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದ ಅಂದಿನ ಸರ್ಕಾರ ಮೃತರ ಕುಟುಂಬದವರಿಗೆ ಈವರೆಗೂ ಕೊಟ್ಟೆ ಇಲ್ಲ. ಇನ್ನು ಕೆಲ ಅಧಿಕಾರಿಗಳೇ ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ಬೇಜವಾಬ್ದಾರಿ ತೋರಿದರು. ಅದಕ್ಕೆ ಕೆಲ ಸಂಘಟನೆಗಳ ಮುಖಂಡರು ಆ ಭ್ರಷ್ಟ ಅಧಿಕಾರಿಗಳನ್ನೇ ಭೇಷ್‌ ಎಂದು ತಲೆ ಮೇಲೆ ಕೂರಿಸಿಕೊಂಡು ಮೆರೆದರು.

ಇನ್ನು ಸಾರಿಗೆ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಎರಡು ವರ್ಷ ತರಬೇತಿ ಅವಧಿಯನ್ನು ಒಂದು ವರ್ಷಕ್ಕೆ ಕಡಿತ ಮಾಡುವ ಬೇಡಿಕೆ ಇದು ಕೂಡ ಈಡೇರಿದ್ದು ನೌಕರರಿಗೆ ತುಸು ನೆಮ್ಮದಿ ತಂದಿದೆ.

ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 2020ರ ಡಿಸೆಂಬರ್ 10ರಿಂದ 13ರವರೆಗೆ ಬೃಹತ್ ಪ್ರತಿಭಟನೆ ನಡೆಸಿದ್ದರು ಇದರಿಂದಾಗಿ ಸಾರಿಗೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇದರಿಂದ ಸಾರ್ವಜನಿಕರು ಪರದಾಡುವಂತಾಗಿತ್ತು. ಬಳಿಕ ಸರ್ಕಾರ ನೌಕರರ ಬೇಡಿಕೆಗಳನ್ನು ಮೂರು ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಿತ್ತು.

ಆದರೆ ಸರ್ಕಾರಕ್ಕೆ ಕೊಟ್ಟಿದ್ದ ಮೂರು ತಿಂಗಳ ಗಡುವು ಮುಗಿದರೂ ಬೇಡಿಕೆಗಳು ಈಡೇರದಿದ್ದರಿಂದ 2021ರ ಏಪ್ರಿಲ್‌ 7ರಿಂದ ರಾಜ್ಯಾದ್ಯಂತ ಬಸ್‌ಗಳನ್ನು ನಿಲ್ಲಿಸಿ ನೌಕರರು 14 ದಿನಗಳ ಕಾಲ ಮುಷ್ಕರ ಮಾಡಿದರು. ಆದರೂ ಎಮ್ಮೆ ಚರ್ಮದ ಸರ್ಕಾರಕ್ಕೆ ನೌಕರರ ಕೂಗು ಕೇಳಲೇ ಇಲ್ಲ.

ಆದರೆ, ಅಂದು ಇಟ್ಟಿದ್ದ ಬೇಡಿಕೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗೆ ಈಡೇರುತ್ತಿವೆ. ಇದಕ್ಕೆ ನಿಗಮದ ಅಧಿಕಾರಿಗಳು ನೌಕರರ ಬಗ್ಗೆ ತೆಗೆದುಕೊಂಡಿರುವ ಕಾಳಜಿಯೇ ಪ್ರಮುಖ ಕಾರಣವಾಗಿದೆ ಎನ್ನಬಹುದು. ಇದರ ಜತೆಗೆ 38 ತಿಂಗಳ ವೇತನ ಹಿಂಬಾಕಿಯನ್ನು ಕೊಟ್ಟರೆ ನಿವೃತ್ತ ನೌಕರರು ಸೇರಿದಂತೆ ಎಲ್ಲ ನೌಕರರು ತುಸು ನೆಮ್ಮದಿಯಿಂದ ಜೀವನ ಕಾಣಲಿದ್ದಾರೆ.

Leave a Reply

error: Content is protected !!
LATEST
KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ