CRIMENEWSನಮ್ಮಜಿಲ್ಲೆ

NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (NWKRTC) ಬಸ್‌ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಬೈಪಾಸ್ ಬಳಿ ನಡೆದಿದೆ.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಓವರ್‌ಟೇಕ್ ಮಾಡುವ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅವಘಡದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

NWKRTC  ಬಸ್ ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು ಈ ವೇಳೆ ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ